Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಶೆಟ್ಟರ್, ಬೋಸರಾಜು, ತಿಪ್ಪನ್ನಪ್ಪಗೆ ಪರಿಷತ್ ಟಿಕೆಟ್ ಘೋಷಣೆ

 

ಮೂರು ವಿಧಾನಪರಿಷತ್ ಸ್ಥಾನಗಳಿಗೆ ಜೂನ್ 30 ಎಂದು‌ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದೆ.
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ, ಸಚಿವ ಬೋಸರಾಜು ಹಾಗೂ ಕಲಬುರಗಿಯ ಹಿರಿಯ ಕಾಂಗ್ರೆಸ್ ನಾಯಕ ತಿಪ್ಪನ್ನಪ್ಪ ಕಮಕ್ನೂರು ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.
ಮಂಗಳವಾರ ಜೂನ್‌ 20 ವಿಧಾನ ಪರಿಷತ್ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಕಾರಣ ಈ ಮೂವರು ಅಭ್ಯರ್ಥಿಗಳು ನಾಳೆ ನಾಮಪತ್ರವನ್ನು ಸಲ್ಲಿಸಲಿದ್ದಾರೆ.
ವಿಧಾನಸಭೆ ಸದಸ್ಯರಿಂದ ಚುನಾಯಿರಾಗಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದ ಬಾಬುರಾವ್ ಚಿಂಚನಸೂರು, ಆರ್.ಶಂಕರ್ ಮತ್ತು ಲಕ್ಷ್ಮಣ ಸವದಿ ಅವರ ರಾಜೀನಾಮೆಯಿಂದ ತೆರವಾಗಿದ್ದ ಮೂರು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಬಾಬುರಾವ್ ಚುಂಚನಸೂರು ಅವರು ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ ವಿಧಾನಸಭೆಗೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದರು ಅವರ ಅವಧಿ 2024ರ ಜೂನ್ 17 ರ ವರೆಗೆ ಇರಲಿದೆ. ಇನ್ನು ಆರ್. ಶಂಕರ್ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷೇತರವಾಗಿ ಸ್ಪರ್ಧೆ ಮಾಡಿದ್ದರು. ಅವರ ಅವಧಿ 2026ರ ಜೂನ್ 30 ರವೆಗೂ ಇದೆ‌. ಲಕ್ಷ್ಮಣ ಸವದಿ ಅವರು ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷದಿಂದ ಚುನಾವಣೆಗೆ ಸ್ಪರ್ಧೆ ಮಾಡಿ ಅಥಣಿ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಅವರ ರಾಜೀನಾಮೆಯಿಂದ ತೆರವಾದ ವಿಧಾನ ಪರಿಷತ್ ಸದಸ್ಯ ಸ್ಥಾನ 2028ರ ಜೂನ್ 14 ರವರೆಗೆ ಇತ್ತು.
ನಾಮಪತ್ರ ಸಲ್ಲಿಕೆ ಮಾಡಲು ನಾಳೆ( ಜೂನ್ 20) ಕೊನೆಯ ದಿನವಾಗಿದೆ. ಜೂನ್ 21ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ವಾಪಸಾತಿಗೆ ಜೂನ್ 23ರಂದು ಅಂತಿಮ ದಿನವಾಗಿದೆ. ಜೂನ್ 30ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯ ತನಕ ಮತದಾನ ನಡೆಯಲಿದೆ. ಅದೇ ದಿನ ಸಂಜೆ ಫಲಿತಾಂಶ ಪ್ರಕಟವಾಗಲಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ