Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪರಿವಾರ/ನಾಯಕ ಗೊಂದಲ : ಸಿದ್ದರಾಮಯ್ಯ ಸೂಚನೆ ನೀಡಿದ್ದೇನು ?

 

ಬೆಂಗಳೂರು :
ಹಳೆ ಮೈಸೂರು ಭಾಗದಲ್ಲಿ ಪರಿವಾರ ಪದವು ನಾಯಕ ಸಮುದಾಯಕ್ಕೆ ಪರ್ಯಾಯವಾಗಿದ್ದು, ಈ ಸಮುದಾಯವನ್ನು ಭಾರತ ಸರ್ಕಾರವು ಪರಿಶಿಷ್ಟ ಪಂಗಡದವರ ಪಟ್ಟಿಗೆ ಸೇರಿಸಿರುವುದರಿಂದ ಹಿಂದುಳಿದ ವರ್ಗಗಳ ಪಟ್ಟಿಯಿಂದ ಕೈಬಿಟ್ಟು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸಿರುವ ಕುರಿತು ಸ್ಪಷ್ಟ ಸುತ್ತೋಲೆ ಹೊರಡಿಸಿ ಗೊಂದಲ ನಿವಾರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ಅವರು ಇಂದು ಪರಿವಾರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿರುವ ಕುರಿತು ಇರುವ ಗೊಂದಲ ನಿವಾರಣೆಗೆ ಸಂಬಂಧಿಸಿದಂತೆ ಶಾಸಕ ಅನಿಲ್ ಚಿಕ್ಕಮಾದು ನೇತೃತ್ವದ ಸಮುದಾಯದ ಮುಖಂಡರ ನಿಯೋಗ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಸುದೀರ್ಘ ಚರ್ಚಿಸಿದರು.

ಮೈಸೂರು, ಚಾಮರಾಜನಗರ, ಕೊಡಗು, ಮಂಡ್ಯ ಹಾಗೂ ಹಾಸನ ಜಿಲ್ಲೆಗಳಲ್ಲಿ ಪರಿವಾರ ಪದವು ನಾಯಕ ಜನಾಂಗಕ್ಕೆ ಪರ್ಯಾಯ ಪದವಾಗಿದೆ. ಈ ಕುರಿತು 1975 ರಲ್ಲಿ ಹಾವನೂರ ವರದಿಯಲ್ಲಿಯೂ ಸ್ಪಷ್ಟಪಡಿಸಲಾಗಿದೆ. 2020 ರಲ್ಲಿ ಭಾರತ ಸರ್ಕಾರವು ಪರಿವಾರ, ತಳವಾರ ಸಮುದಾಯಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿದೆ. ಈ ಜಾತಿಯ ಹೆಸರನ್ನು ಹಿಂದುಳಿದ ವರ್ಗಗಳ ಪಟ್ಟಿಯಿಂದ ಕೈಬಿಡದ ಕಾರಣ ಗೊಂದಲ ಸೃಷ್ಟಿಯಾಗಿದೆ. ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಶಾಸಕ ಅನಿಲ್‌ ಚಿಕ್ಕಮಾದು ಅವರ ನೇತೃತ್ವದ ನಿಯೋಗವು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು.

ಈ ಕುರಿತು ಸ್ಪಷ್ಟ ಸುತ್ತೋಲೆ ಹೊರಡಿಸಿ, ಜಾತಿ ಪ್ರಮಾಣ ಪತ್ರ ನೀಡುವ ಕುರಿತು ಗೊಂದಲ ನಿವಾರಿಸುವಂತೆ ಸೂಚಿಸಿದರು. ಈ ಗೊಂದಲದ ಕಾರಣದಿಂದ ಸುಳ್ಳು ಜಾತಿ ಪ್ರಮಾಣ ಪತ್ರ ಕುರಿತಂತೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದಲ್ಲಿ 58 ಪ್ರಕರಣಗಳು ದಾಖಲಾಗಿದ್ದು, ಅವುಗಳನ್ನು ಹಿಂಪಡೆಯುವಂತೆ ನಿಯೋಗದ ಮುಖಂಡರು ಮಾಡಿದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು, ಈ ಕುರಿತು ಕೂಡಲೇ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ನಿಯೋಗದಲ್ಲಿ ಶಾಸಕ ಅನಿಲ್‌ ಚಿಕ್ಕಮಾದು ಅವರ ಜತೆಗೆ ವಾಲ್ಮೀಕಿ ನಿಗಮದ ಮಾಜಿ ಅಧ್ಯಕ್ಷ ಎಸ್.ಸಿ.ಬಸವರಾಜು, ಮಾಜಿ ಜಿಲ್ಲಾ ಪಂಚಾಯ್ತಿ ಸದಸ್ಯ ಚಿಕ್ಕೀರನಾಯ್ಕ, ದೇವರಾಜ ಕುಮಾರ್, ದೇವಪ್ಪ ನಾಯಕ, ನಾಗರಾಜ ಕ್ಯಾತನಹಳ್ಳಿ, ಗಿನ್ನಳ್ಳಿ ರಾಜಾನಾಯಕ, ಮೈಸೂರು ಪಾಲಿಕೆ ಸದಸ್ಯ ಲೋಕೇಶ್, ಕೋಟೆ ತಾಲ್ಲೂಕು ನಾಯಕ ಸಮುದಾಯದ ಮುಖಂಡ ಶಂಭುಲಿಂಗನಾಯಕ್ ಹಾಗೂ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ಸಭೆಯಲ್ಲಿ ಭಾಗವಹಿಸಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ