Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ದೇಶಭಕ್ತಿ ನಿರಂತರವಾಗಿರಬೇಕು : ಅಲಕಾತಾಯಿ ಇನಾಂದಾರ

ಬೆಳಗಾವಿ : ದೇಶಭಕ್ತಿ ಕೇವಲ ರಾಷ್ಟ್ರೀಯ ಹಬ್ಬಗಳನ್ನು ಆಚರಿಸುವ ಸಂದರ್ಭಕ್ಕೆ ಮಾತ್ರ ಸೀಮಿತವಾಗಿರದೇ ಅದು ನಮ್ಮ ದಿನನಿತ್ಯದ ಕಾರ್ಯಚಟುವಟಿಕೆಗಳಲ್ಲೂ ಇರಬೇಕು ಎಂದು ಅಖಿಲ ಭಾರತೀಯ ರಾಷ್ಟ್ರೀಯ ಸೇವಕಿ ಸಮಿತಿ ಕಾರ್ಯವಾಹಕಿ ಅಲಕಾತಾಯಿ ಇನಾಂದಾರ ಅಭಿಪ್ರಾಯಪಟ್ಟರು.

ನಗರದ ಕಾಕತಿವೇಸ್ ನಲ್ಲಿರುವ ಗುರು ವಿವೇಕಾನಂದ ವಿವಿಧೋದ್ದೇಶಗಳ ಸಹಕಾರ ಸಂಘದ ಕಚೇರಿಯಲ್ಲಿ ಹಮ್ಮಿಕೊಂಡಿದ್ದ 79 ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಭಾರತೀಯರ ಹೃದಯ ಕಮಲದಲ್ಲಿ ಭಾರತ ಮಾತೆಗೆ ವಿಶೇಷವಾದ ಸ್ಥಾನವಿರಲಿ. ದೇಶಾಭಿಮಾನ ಕೇವಲ ಆಗಸ್ಟ್ ಮತ್ತು ಜನವರಿ ತಿಂಗಳಿಗೆ ಮಾತ್ರ ಸೀಮಿತವಾಗಿರದೇ ಪ್ರತಿ ದಿನವೂ ಇರಬೇಕು. ಭಾರತ ಕ್ಷಿಪ್ರಗತಿಯಲ್ಲಿ ಅಭಿವೃದ್ಧಿ ಹೊಂದುವುದನ್ನು ಸಹಿಸಲಾಗದೆ ಕೆಲವು ಬಾಹ್ಯ ಶಕ್ತಿಗಳು ಭಾರತದ ಆರ್ಥಿಕ, ಸಾಮಾಜಿಕ ಸ್ಥಿತಿಗತಿಗಳು ತಮ್ಮ ಆಣತಿಯಂತೆ ನಡೆಯಬೇಕೆಂದು ನಿರ್ದೇಶಿಸುತ್ತಾರೆ. ಅದಕ್ಕೆ ಪ್ರತಿಯೊಬ್ಬ ಭಾರತೀಯತೆನು ಅದರ ವಿರುದ್ಧ ನಿಲ್ಲಬೇಕು. ನಾವು ವ್ಯವಹಾರ ಮಾಡುವಾಗ, ನಮ್ಮಲ್ಲಿ ರಾಷ್ಟ್ರೀಯತೆಯ ಪ್ರಜ್ಞೆ ಜಾಗ್ರತೆಯಾಗಿರಬೇಕು. ನಾವು ಬಳಸುವ ವಸ್ತುಗಳು ಸ್ವದೇಶಿ ಉತ್ಪನ್ನಗಳಾಗಿರಬೇಕು. ಆಗ ಭಾರತ ವಿಶ್ವಗುರುವಾಗಲು ಸಾಧ್ಯ. ದೇಶದ ಅಭಿವೃದ್ಧಿಯ ಜೊತೆಗೆ ದೇಶದ ಸ್ವಚ್ಛತೆಗೆ ವಿಶೇಷ ಆದ್ಯತೆ ನೀಡಬೇಕು ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ. ನಾರಾಯಣ ನಾಯ್ಕ ಅವರು ಭಾರತಕ್ಕೆ ಸ್ವಾತಂತ್ರ‍್ಯ ಬಂದು 78 ವಸಂತಗಳು ಪೂರ್ಣಗೊಂಡಿವೆ. ಅನೇಕ ಮಹನೀಯರ ಅಂದಿನ ತ್ಯಾಗದ ಫಲದಿಂದ ಸ್ವಾತಂತ್ರ್ಯಗೊಂಡು, ಇಂದು ಅನೇಕ ಕ್ಷೇತ್ರಗಳಲ್ಲಿ ನಾವು ವಿಶೇಷ ಸಾಧನೆ ಮಾಡಿದ್ದೇವೆ. ವ್ಯಾಪಾರ ಮಾಡಲು ಬಂದ ವಿದೇಶಿಗರು ನಮ್ಮಲ್ಲಿರುವ ವಿಭಿನ್ನ ಸಂಸ್ಕೃತಿ, ಭಾಷೆಯನ್ನು ಗಮನಿಸಿ ನಮ್ಮನ್ನು ಒಡೆದು ಆಳಲು ಆರಂಭಿಸಿದರು. ಇಂದು ಕೂಡ ವಿದೇಶಿ ಶಕ್ತಿಗಳು ನಮ್ಮ, ಸಂಸ್ಕೃತಿ, ಇತಿಹಾಸ, ಪರಂಪರೆ, ಆಚರಣೆಯ ಮೇಲೆ ನಿತ್ಯವೂ ಧಾಳಿ ಮಾಡುತ್ತಿವೆ. ಸಾಮಾಜಿಕ ವ್ಯವಸ್ಥೆಯನ್ನು ಪಲ್ಲಟಗೊಳಿಸುತ್ತಿವೆ. ಜಾತಿ, ಮತ, ಪಂಥಗಳ ಜೊತೆಗೆ ನಮ್ಮಲ್ಲಿರುವ ಒಡಕುಗಳನ್ನು ಬದಿಗೊತ್ತಿ ನಾವೆಲ್ಲರೂ ಏಕಭಾವದಿಂದ ದೇಶದ ಏಳಿಗೆಗಾಗಿ ಶ್ರಮಿಸಬೇಕು. ಆಗ ಸುಂದರವಾದ ಭಾರತದ ಕಲ್ಪನೆ ನನಸಾಗುತ್ತದೆ. ಭಾರತ ಇಂದು ಜಗತ್ತಿನಲ್ಲಿ ಅಭಿವೃದ್ಧಿ ಹೊಂದುತ್ತಿರುವ ದೇಶಗಳ ಸಾಲಿನಲ್ಲಿ ಅಗ್ರಗಣ್ಯವಾಗಿದೆ. ನಮ್ಮಲ್ಲಿ ದೇಶದ ಬಗೆಗೆ ಚಿಂತನೆಗಳು ಬೆಳೆದಾಗ ಅದು ನಮ್ಮ ವೈಯಕ್ತಿಕ ಅಭಿವೃದ್ಧಿಗೂ ಕಾರಣವಾಗುತ್ತದೆ ಎಂದರು.

ಸಂಘದ ಉಪಾಧ್ಯಕ್ಷ ಆನಂದ ರಾವ್, ನಿರ್ದೇಶಕರಾದ ಅಂಜನಕುಮಾರ ಗಂಡಗುದರಿ, ರಾಜೇಶ ಗೌಡ, ಆನಂದ ಶೆಟ್ಟಿ, ಗಣೇಶ ನಾಯಕ, ದುರ್ಗಪ್ಪ ತಳವಾರ, ರೂಪಾ ಮಗದುಮ, ಗಣೇಶ ಮರಕಾಲ, ಚಂದ್ರಕಾಂತ ಅಥಣಿಮಠ ಹಾಗೂ ಸಿಬ್ಬಂದಿ ವರ್ಗ, ಪಿಗ್ಮಿ ಸಂಗ್ರಹಕಾರರು, ಉಪಸ್ಥಿತರಿದ್ದರು.
ಸಂಘದ ಕಾರ್ಯದರ್ಶಿ ವಿಶಾಲ ಪಾಟೀಲ ಸ್ವಾಗತಿಸಿದರು,. ವನಿತಾ ಮೂಲ್ಯ ವಂದಿಸಿದರು. ಸಮ್ಮೇದ ಗಾಡೇಕರ ನಿರೂಪಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ