Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮಹಾರಾಷ್ಟ್ರ ರಾಜಕಾರಣದಲ್ಲಿ ಟ್ವಿಸ್ಟ್ ನೀಡಿದ ಪವಾರ್

ಪುಣೆ: ಎನ್‌ಸಿಪಿ ಶರದ್‌ಚಂದ್ರ ಪವಾರ್ ಪಕ್ಷದ ಮುಖ್ಯಸ್ಥ ಶರದ್‌ ಪವಾರ್ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ, ಉಪಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಮತ್ತು ಅಜಿತ್ ಪವಾರ್ ಅವರನ್ನು ಊಟಕ್ಕೆ ಆಹ್ವಾನಿಸಿದ್ದು, ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಮಾ.2 ರಂದು ನಡೆಯಲಿರುವ 'ನಮೋ ಮಹಾರೋಜ್ ಗಾರ್ ಮೇಳಾವ್'ನಲ್ಲಿ ಭಾಗಿಯಾಗಲು ಪುಣೆಯ ಬಾರಾಮತಿಗೆ ಭೇಟಿ ನೀಡುತ್ತಿರುವ ಈ ನಾಯಕರನ್ನು ಶರದ್ ಪವಾರ್ ಆಹ್ವಾನಿಸಿದ್ದಾರೆ.

ರಾಜಕೀಯ ವಿರೋಧಿಗಳಾದ ಇವರನ್ನು ಊಟಕ್ಕೆ ಆಹ್ವಾನಿಸಿರುವುದು ಅಚ್ಚರಿಗೆ ಕಾರಣವಾಗಿದೆ. ಅಜಿತ್, ಶರದ್ ಸಂಬಂಧ ಈಗಾಗಲೇ ಹಳಸಿದೆ.

ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್‌ಚಂದ್ರ ಪವಾರ್) ಅಧ್ಯಕ್ಷ ಶರದ್ ಪವಾರ್ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ, ಉಪಮುಖ್ಯಮಂತ್ರಿ ದೇವೇಂದ್ರ ಫಡಣವಿಸ್ ಹಾಗೂ ಅಜಿತ್ ಪವಾರ್ ಅವರನ್ನು ಊಟಕ್ಕೆ ಆಹ್ವಾನಿಸಿದ್ದು, ಇದು ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.

ಮಾರ್ಚ್ 2ರಂದು ಬಾರಾಮತಿಗೆ ಬರುತ್ತಿರುವ ಗಣ್ಯರಿಗೆ ತಮ್ಮ ಮನೆಯಲ್ಲಿ ಊಟ ಆಯೋಜಿಸಿರುವುದಾಗಿ ಶರದ್ ಹೇಳಿದ್ದಾರೆ. ಪಕ್ಷದ ವಿಭಜನೆ ಸೇರಿದಂತೆ ತಮ್ಮ ಹಲವು ಹಿನ್ನಡೆಗೆ ಕಾರಣರಾದವರನ್ನು ತಮ್ಮ ಮನೆಗೆ ಊಟಕ್ಕೆ ಆಹ್ವಾನಿಸಿದ್ದರ ಹಿಂದಿನ ಮರ್ಮವೇನು ಎಂಬುದರ ಕುರಿತು ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿದೆ.

ಬಾರಾಮತಿಯ ವಿದ್ಯಾ ಪ್ರತಿಷ್ಠಾನ ಕಾಲೇಜು ಆವರಣದಲ್ಲಿ ‘ನಮೋ ಮಹಾರೋಜ್‌ಗಾರ್‌ ಮೇಳಾವ್’ ಆಯೋಜನೆಗೊಂಡಿದೆ. ಇದರಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಪಾಲ್ಗೊಳ್ಳುತ್ತಿದ್ದಾರೆ. 1999ರಲ್ಲಿ ತಾವೇ ಸ್ಥಾಪಿಸಿದ ಎನ್‌ಸಿಪಿ ಇಬ್ಭಾಗವಾದ ನಂತರ ಅದಕ್ಕೆ ಕಾರಣರಾದ ಅಜಿತ್ ಪವಾರ್ ಸಹಿತ ಹಲವರು ಶರದ್ ವಿರೋಧಿಗಳಾದರು. ಎನ್‌ಸಿಪಿ ಇಬ್ಭಾಗವಾದ ನಂತರ ಪಕ್ಷದ ಚಿಹ್ನೆಯೂ ಶರದ್ ಅವರಿಗೆ ಒಲಿಯಲಿಲ್ಲ. ತಮ್ಮ ವಿರೋಧಿ ಶಿವಸೇನಾ–ಬಿಜೆಪಿ ಜತೆ ಮೈತ್ರಿ ಮಾಡಿಕೊಂಡ ಅಜಿತ್ ಪವಾರ್ ವಿರುದ್ಧ ಶರದ್ ಗುಡುಗಿದ್ದರು. ಆದರೆ ಇದೀಗ ಆಯೋಜನೆಗೊಂಡಿರುವ ಈ ಮೇಳದಲ್ಲಿ ಪಾಲ್ಗೊಳ್ಳಲು ಬರುತ್ತಿರುವ ಈ ವಿರೋಧಿ ಬಣವನ್ನೇ ಊಟಕ್ಕೆ ಆಹ್ವಾನಿಸಿರುವುದು ಹಲವು ಕುತೂಹಲಕ್ಕೆ ಕಾರಣವಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ