Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಜನರಲ್ಲಿ ನಮ್ಮ ಸರಕಾರ ಎನ್ನುವ ಭಾವನೆ ಮೂಡಿದೆ - ಸಚಿವೆ ಲಕ್ಷ್ಮೀ ಹೆಬ್ಬಾಳಕರ್

 

ರಾಜ್ಯದ ಪ್ರತಿ ಮನೆಯನ್ನೂ ತಲುಪಿದೆ ಕಾಂಗ್ರೆಸ್ ಗ್ಯಾರಂಟಿ ಎಂದ ಸಚಿವರು

ಬೆಳಗಾವಿ: ಕಾಂಗ್ರೆಸ್ ಸರಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ರಾಜ್ಯದ ಪ್ರತಿ ಮನೆಯನ್ನೂ ತಲುಪಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಬೆಳಗಾವಿ ಗ್ರಾಮೀಣ ಕ್ಷೇತ್ರದ ಕುದ್ರೆಮನೆ ಗ್ರಾಮಸ್ಥರು ಶನಿವಾರ ಸಂಜೆ ಏರ್ಪಡಿಸಿದ್ದ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಚುನಾವಣೆ ಪೂರ್ವ ಘೋಷಿಸಿದ್ದಂತೆ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಇವುಗಳಲ್ಲಿ ಒಂದಿಲ್ಲೊಂದು ಯೋಜನೆಗಳು ಎಲ್ಲರ ಮನೆಗಳನ್ನೂ ತಲುಪಿವೆ. ವಿದ್ಯುತ್ ಬಿಲ್ ತುಂಬುವುದು ತಪ್ಪಿದೆ, ಮಹಿಳೆಯರು ಬಸ್ ಟಿಕೆಟ್ ಪಡೆಯುವುದು ನಿಂತಿದೆ. ಗೃಹ ಲಕ್ಷ್ಮೀ ಮೂಲಕ 2 ಸಾವಿರ ರೂ. ಬರುತ್ತಿದೆ. ಪಡಿತರ ಮತ್ತು ಅದರ ಹಣ ಖಾತೆಗೆ ಜಮಾ ಆಗುತ್ತಿದೆ. ಈಗ ಯುವ ನಿಧಿ ಯೋಜನೆಯೂ ಜಾರಿಗೊಂಡಿದೆ. ಇದರಿಂದಾಗಿ ಜನರ ಆರ್ಥಿಕತೆ ಉತ್ತಮವಾಗಿದೆ. ಪ್ರಸ್ತುತ ಬರಗಾಲವನ್ನು ಎದುರಿಸುವ ಶಕ್ತಿ ಜನರಿಗೆ ಬಂದಿದೆ. ಜನರಲ್ಲಿ ನಮ್ಮ ಸರಕಾರ ಎನ್ನುವ ಭಾವನೆ ಮೂಡಿದೆ ಎಂದು ಹೆಬ್ಬಾಳಕರ್ ತಿಳಿಸಿದರು.
ಗ್ರಾಮೀಣ ಕ್ಷೇತ್ರದ ಶಾಸಕಿಯಾಗಿ ನನ್ನನ್ನು ಆಯ್ಕೆ ಮಾಡಿದ್ದೀರಿ. ನಿಮ್ಮ ಕೃಪೆಯಿಂದ ನಾನು ರಾಜ್ಯದ ಮಂತ್ರಿಯಾಗಿದ್ದೇನೆ. ನಿಮ್ಮ ಮನೆ ಮಗಳು ರಾಜ್ಯದ ಸೇವೆ ಮಾಡುವ ಮೂಲಕ ನಿಮ್ಮ ಗೌರವವನ್ನು ಹೆಚ್ಚಿಸುವ ಕೆಲಸ ಮಾಡುತ್ತೇನೆ. ನಿಮ್ಮ ಬೆಂಬಲ ನನಗೆ ಸದಾ ಇರಲಿ ಎಂದು ಹೆಬ್ಬಾಳಕರ್ ಕೋರಿದರು.

ಈ ಸಮಯದಲ್ಲಿ ಯುವರಾಜ ಕದಂ, ಅರುಣ ದೇವನ್, ದೀಪಕ್ ಪಾಟೀಲ, ವಿಮಲಾ ತಾಯಿ ಸಾಖರೆ, ಪಿಂಟು ಕಾಗಣಕರ್, ವಿನಾಯಕ ಪಾಟೀಲ, ಶಂಕರ ಪಾಟೀಲ, ವೈಜನಾಥ್ ರಾಜಗೋಳ್ಕರ್, ಶುಭಾಂಗಿ ರಾಜಗೋಳ್ಕರ್, ಲತಾ ಶಿವನೆಗೆಕರ್, ರಘುನಾಥ್ ಖಂಡೇಕರ್, ಮರಗಾಯಿ ಯುವಕ ಮಂಡಳ, ಸುರೇಶ ಪಾಟೀಲ ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ