Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿಯಲ್ಲಿ ಪ್ಲಂಬರ್ ಗೆ ವಿದ್ಯುತ್ ಸ್ಪರ್ಶ : ಸ್ಥಳದಲ್ಲೇ ದುರ್ಮರಣ

 

ಬೆಳಗಾವಿ :
ಬೆಳಗಾವಿಯ ಹನುಮಾನನಗರದಲ್ಲಿ ಕೆಲಸಕ್ಕೆ ತೆರಳಿದ್ದ ಖಾನಾಪುರ ತಾಲೂಕಿನ ಪ್ಲಂಬರ್ ಒಬ್ಬರು ಸೋಮವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ವಿದ್ಯುತ್ ಸ್ಪರ್ಶದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ದುರ್ಘಟನೆಯಲ್ಲಿ ಮೃತಪಟ್ಟ ಯುವಕ ಮಹೇಶ ಪರಶುರಾಮ ಪಾಟೀಲ (ವಯಸ್ಸು 21, ವಡೇಬೈಲ್) ಎಂದು ಗುರುತಿಸಲಾಗಿದೆ.
ಸಂಬಂಧಪಟ್ಟ ಗುತ್ತಿಗೆದಾರನ ವಿರುದ್ಧ ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಯುವಕನ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಬೆಳಗಾವಿಯ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಮಂಗಳವಾರ ಅಂತ್ಯಕ್ರಿಯೆ ವಡೇಬೈಲ್ ನಲ್ಲಿ ನಡೆಯಲಿದೆ.

ಬೆಳಗಾವಿಯ ಹನುಮಾನನಗರದಲ್ಲಿ ಮುಖ್ಯ ಗುತ್ತಿಗೆದಾರ ಅಭಿಜಿತ ಫಕೀರಯ್ಯ ಶಿವಯೋಗಿಮಠ ಅವರ ಅಡಿಯಲ್ಲಿ ಲಕ್ಷ್ಮಣ ಮಂಜಳಕರ ಉಪ ಗುತ್ತಿಗೆದಾರರಾಗಿದ್ದಾರೆ. ಅನಗೋಳದಿಂದ ಮಹೇಶ ಪರಶುರಾಮ ಪಾಟೀಲ ಪ್ರತಿ ದಿನ ಬೆಳಗಾವಿ ಹನುಮಾನಗರದಲ್ಲಿ ಪ್ಲಂಬರ್ ಕೆಲಸಕ್ಕೆ ಹೋಗುತ್ತಿದ್ದರು. ಮಧ್ಯಾಹ್ನ ಹೊತ್ತು ಕೆಲಸ ಮಾಡುವಾಗ ಕೈಯಲ್ಲಿ ಗ್ರೈಂಡರ್ ಯಂತ್ರದಿಂದ ವಿದ್ಯುತ್ ತಂತಿ ತುಂಡಾಗಿ ಅವರಿಗೆ ತಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಸಂಬಂಧ ಗುತ್ತಿಗೆದಾರ ಲಕ್ಷ್ಮಣ ಮಂಜಳಕರ ವಿರುದ್ಧ ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಡೇಬೈಲ್‌ನ ಪರಶುರಾಮ ಪಾಂಡುರಂಗ ಪಾಟೀಲ ಅವರ ಏಕೈಕ ಪುತ್ರ ಮಹೇಶ್ ಆಗಿದ್ದು, ಕೆಲ ಕಾಲ ಪುಣೆಯಲ್ಲಿ ಪ್ಲಂಬರ್ ಆಗಿ ಕೆಲಸ ಮಾಡುತ್ತಿದ್ದರು.

ಅಲ್ಲಿಂದ ಕೆಲಸ ಬಿಟ್ಟು ತವರಿಗೆ ಬಂದು ನಂದಿಹಳ್ಳಿಯಲ್ಲಿರುವ ತನ್ನ ಮಾವನ ಮನೆಯಿಂದ ಬೆಳಗಾವಿಗೆ ಬರುತ್ತಿದ್ದರು. ಸೋಮವಾರವು ಎಂದಿನಂತೆ ಬೆಳಗಾವಿಯಲ್ಲಿ ಕೆಲಸಕ್ಕೆ ಹೋಗಿದ್ದು, ಕೆಲಸ ಮಾಡುತ್ತಿದ್ದಾಗ ಏಕಾಏಕಿ ವಿದ್ಯುತ್ ಸ್ಪರ್ಶವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರು ಅಜ್ಜ, ತಾಯಿ, ತಂದೆ ಮತ್ತು ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ