Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಹುಟ್ಟು ಹಬ್ಬದ ಸಂಭ್ರಮ :ನಿಖಿಲ್ ಓಸ್ವಾಲ್ ಅವರಿಗೆ ಪ್ರಧಾನಿ ಮೋದಿಯಿಂದ ಶುಭಾಶಯ

 

ಗೋಕಾಕ :
ಜಿಲ್ಲೆಯ ಪ್ರಭಾವಿ ಬಿಜೆಪಿ ಯುವ ನಾಯಕ ನಿಖಿಲ್ ಓಸ್ವಾಲ್ ಅವರ ಹುಟ್ಟುಹಬ್ಬದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯ ಕೋರಿದ್ದಾರೆ.
ನಿಖಿಲ್ ಓಸ್ವಾಲ್ ಅವರು ದಶಕಗಳಿಂದ ಜಿಲ್ಲೆಯಲ್ಲಿ ಮಾಡುತ್ತಿರುವ ಸೇವಾ ಕಾರ್ಯಗಳನ್ನು ಗಮನಿಸಿರುವ
ಪ್ರಧಾನಿ ಮೋದಿ ಅವರು ಇದೀಗ ಹುಟ್ಟುಹಬ್ಬದ ಸಂಭ್ರಮಾಚರಣೆಯಲ್ಲಿರುವ ಓಸ್ವಾಲ್ ಅವರಿಗೆ ಶುಭಾಶಯ ಕೋರಿದ್ದಾರೆ.

ನಿಖಿಲ್ ಓಸ್ವಾಲ್ ಅವರು ಗೋಕಾಕ ಭಾಗದಲ್ಲಿ ಬಡವರಿಗೆ ಸಹಾಯ ಹಸ್ತ ಚಾಚುವುದರಲ್ಲಿ ಸದಾ ಮುಂದಿದ್ದಾರೆ. ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ನಿಖಿಲ್ ಓಸ್ವಾಲ್ ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.

ನಿಖಿಲ್ ಓಸ್ವಾಲ್ ಅವರು ಕೊರೊನಾ ಸಂದರ್ಭದಲ್ಲಿ ಸಾಮಾಜಿಕ ಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಗುರುತಿಸಿಕೊಂಡವರು. ಆ ಸಂದರ್ಭದಲ್ಲಿ ಸಾಕಷ್ಟು ಬಡವರಿಗೆ ಸಹಾಯ ಹಸ್ತ ಚಾಚಿದ್ದರು. ವಿಶ್ವ ಅಪ್ಪಂದಿರ ದಿನಾಚರಣೆ ಸಂದರ್ಭದಲ್ಲಿ ತಮ್ಮ ತಂದೆಯವರಾದ ಅಶೋಕ ಓಸ್ವಾಲ್ ಅವರ ಹಾದಿಯಲ್ಲಿ ಸಾಗಿ ಪೋಲಿಸರು ಮತ್ತು ಜನರಿಗೆ ಉಪಾಹಾರ ಸೇವೆ ನೀಡಿ ಗಮನ ಸೆಳೆದಿದ್ದರು.

ಬೆಳಗಾವಿ ಜಿಲ್ಲೆಯಲ್ಲಿ ಬಿಜೆಪಿಯನ್ನು ತಳಮಟ್ಟದಲ್ಲಿ ಕಟ್ಟಿ ಬೆಳೆಸುವಲ್ಲಿ ಅಹರ್ನಿಶಿ ತೊಡಗಿರುವ ಅವರಿಗೆ ಕಳೆದ ಬೆಳಗಾವಿ ಲೋಕಸಭಾ ಉಪ ಉಪಚುನಾವಣೆ ಸಂದರ್ಭದಲ್ಲಿ ಕೊನೆ ಕ್ಷಣದಲ್ಲಿ ಅವರಿಗೆ ಬಿಜೆಪಿಯಿಂದ ಟಿಕೆಟ್ ಕೈತಪ್ಪಿತ್ತು. ಆದರೂ ನಿರಾಶೆಗೊಳ್ಳದೆ ಅವರು ಬಿಜೆಪಿ ಅಭ್ಯರ್ಥಿಯ ಗೆಲುವಿಗೆ ತೊಡಗಿಸಿಕೊಂಡಿದ್ದರು.

ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ನಿಖಿಲ್ ಓಸ್ವಾಲ್ ಅವರು ಬಿಜೆಪಿಯ ದೊಡ್ಡ ಶಕ್ತಿಯಾಗಿ ಗುರುತಿಸಿಕೊಂಡಿದ್ದಾರೆ. ಸದ್ಯ ಬೆಳಗಾವಿ ಜಿಲ್ಲಾ ಗ್ರಾಮಾಂತರ ಪ್ರಕೋಷ್ಠದ ಸಂಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ ಮಹತ್ವಾಕಾಂಕ್ಷೆ ಹೊಂದಿರುವ ಅವರ ಆಶಯ ಬರುವ ದಿನಗಳಲ್ಲಿ ಈಡೇರಲಿ ಎನ್ನುವುದು ಅವರ ಅಭಿಮಾನಿಗಳ ಹೆಬ್ಬಯಕೆಯಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ