Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೀದರ್ : ಪ್ರಧಾನಿ ಆಗಮನ ಇಂದು

 

ಬೀದರ್‌:
ಪ್ರಧಾನಿ ನರೇಂದ್ರ ಮೋದಿಯವರು ಮಂಗಳವಾರ (ಅ.3) ನಗರದ ವಾಯುಸೇನೆ ತರಬೇತಿ ಕೇಂದ್ರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಡ್ರೋನ್ ಹಾರಾಟ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ತಿಳಿಸಿದ್ದಾರೆ.

ಪ್ರಧಾನಿ ಭದ್ರತೆ ಹಿನ್ನೆಲೆಯಲ್ಲಿ ನಗರದ ವಾಯುಸೇನೆ ತರಬೇತಿ ಕೇಂದ್ರ ಹಾಗೂ ಬೀದರ್‌ ನಗರದ ಸುತ್ತಮುತ್ತಲಿನ 3 ಕಿ.ಮೀ ವ್ಯಾಪ್ತಿಯಲ್ಲಿ ಅ.3ರಂದು ಬೆಳಿಗ್ಗೆ 6ರಿಂದ ರಾತ್ರಿ 10ರ ವರೆಗೆ ಸಾರ್ವಜನಿಕರು ಡ್ರೋನ್ ಹಾರಿಸದಂತೆ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.

ಮೋದಿ ಅವರು ತೆಲಂಗಾಣದ ನಿಜಾಮಾಬಾದ್‌ಗೆ ತೆರಳುವ ಮಾರ್ಗ ಮಧ್ಯದಲ್ಲಿ ನಗರದ ವಾಯುಸೇನೆ ತರಬೇತಿ ಕೇಂದ್ರಕ್ಕೆ ಭೇಟಿ ನೀಡುವರು. ಮಧ್ಯಾಹ್ನ 1ಕ್ಕೆ ಛತ್ತೀಸಗಢದ ಜಗದಾಲಪುರ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಮಧ್ಯಾಹ್ನ 1.50 ಕ್ಕೆ ನಗರಕ್ಕೆ ಆಗಮಿಸುವರು. ಇಲ್ಲಿಂದ 2.15 ಕ್ಕೆ ಸೇನಾ ಹೆಲಿಕಾಪ್ಟರ್‌ನಲ್ಲಿ ನಿಜಾಮಾಬಾದ್‍ಗೆ ಪ್ರಯಾಣಿಸುವರು. ಅಲ್ಲಿಂದ ಸಂಜೆ 5.50ಕ್ಕೆ ಹೊರಟು ಸಂಜೆ 5.55ಕ್ಕೆ ವಾಯುನೆಲೆಗೆ ಬಂದು, ಅಲ್ಲಿಂದ ವಿಶೇಷ ವಿಮಾನದಲ್ಲಿ ನವದೆಹಲಿಗೆ ಪಯಣ ಬೆಳೆಸುವರು. ಸಂಜೆ ವಿಮಾನ ಹತ್ತುವುದಕ್ಕೂ ಮುನ್ನ ಸ್ಥಳೀಯ ಮುಖಂಡರೊಂದಿಗೆ ಕೆಲ ನಿಮಿಷ ಚರ್ಚಿಸುವರು ಎಂದು ತಿಳಿದು ಬಂದಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ