Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಲಕ್ಷಾಂತರ ರೂ. ಚಿನ್ನಾಭರಣ ಕಳ್ಳತನ : ಆರೋಪಿಯನ್ನು ಬಂಧಿಸಿದ ಪೊಲೀಸರು

ಬೆಳಗಾವಿ : ಮನೆಬಾಗಿಲು ಮುರಿದು ಚಿನ್ನಾಭರಣ ದೋಚುತ್ತಿದ್ದ ಆರೋಪದ ಮೇಲೆ ಕುಖ್ಯಾತ ಕಳ್ಳನನ್ನು ಬಂಧಿಸಿರುವ ಚನ್ನಮ್ಮನ ಕಿತ್ತೂರು ಪೊಲೀಸರು ಆತನಿಂದ ಐದು ಕಡೆಗಳಲ್ಲಿ ಕಳ್ಳತನ ಮಾಡಿದ್ದ ₹20.30 ಲಕ್ಷ ಕಿಮ್ಮತ್ತಿನ 203 ಗ್ರಾಂ ಚಿನ್ನದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಬೆಳಗಾವಿ ರುಕ್ಕಿಣಿ ನಗರದ ನಿತೇಶ ಉರ್ಫ್ ದೀಪು ಜಗನ್ನಾಥರಾವ್ ಢಾಪಳೆ (42) ಬಂಧಿತ ಆರೋಪಿ. ಈತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

'ಕಳೆದ ವರ್ಷ ಜುಲೈ ತಿಂಗಳಲ್ಲಿ ಇಲ್ಲಿನ ವಿದ್ಯಾಗಿರಿಯಲ್ಲಿರುವ ಕೀಲಿ ಹಾಕಿದ್ದ ಪ್ರವೀಣ ಇಟಗಿ ಅವರ ಹಿತ್ತಲಿನ ಬಾಗಿಲು ಮುರಿದು ನಗದು ಸೇರಿ ₹11.60 ಲಕ್ಷ ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣ ದೋಚಿಕೊಂಡು ಪರಾರಿಯಾಗಿದ್ದನು. ಈ ಪ್ರಕರಣದ ಬೆನ್ನು ಹತ್ತಿದ ಕಿತ್ತೂರು ಪೊಲೀಸರು, ಇದನ್ನು ಸೇರಿ ಕಿತ್ತೂರು ಠಾಣಾ ವ್ಯಾಪ್ತಿಯಲ್ಲಿಯ ಮೂರು ಪ್ರತ್ಯೇಕ ಪ್ರಕರಣ, ಬೈಲಹೊಂಗಲ ಮತ್ತು ಹುಕ್ಕೇರಿ ಪೊಲೀಸ್‌ ಠಾಣಾ ವ್ಯಾಪ್ತಿಯ ತಲಾ ಒಂದು ಪ್ರಕರಣ ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ' ಎಂದು ಡಿವೈಎಸ್ ಪಿ ವೀರಯ್ಯ ಹಿರೇಮಠ ಗುರುವಾರ ಪತ್ರಕರ್ತರಿಗೆ ತಿಳಿಸಿದರು.

ಬಂಧಿತನ ಮೇಲೆ ಬೆಳಗಾವಿ ನಗರ, ಗದಗ, ಮಹಾರಾಷ್ಟ್ರ ಮತ್ತು ತೆಲಂಗಾಣ ರಾಜ್ಯದಲ್ಲಿಯೂ ಕಳ್ಳತನ ಆರೋಪದ ಪ್ರಕರಣಗಳಿವೆ ಎಂದು ಅವರು ಮಾಹಿತಿ ನೀಡಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ