Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಹೆಲ್ಮೆಟ್ ಹಾಕದ್ದಕ್ಕೆ ಹಲ್ಲೆ ನಡೆಸಿದ ಪೊಲೀಸರು

ಬೆಳಗಾವಿ: ಹೆಲ್ಮೆಟ್ ಹಾಕದೇ ಇದ್ದಿದ್ದನ್ನು ಪ್ರಶ್ನಿಸುವ ನೆಪದಲ್ಲಿ ತಮ್ಮ ಮೇಲೆ ಹಲ್ಲೆ ನಡೆಸಿದ್ದಾಗಿ ಬೈಕ್‌ ಸವಾರ ಹೃಷಿಕೇಶ ಲಿಂಬಿಗಿಡದ ಅವರು ಪೊಲೀಸರ ಮೇಲೆ ಆರೋಪ ಮಾಡಿದ್ದಾರೆ. ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದಲ್ಲಿ ಅಂಕಲಿ ಠಾಣೆ ಪೊಲೀಸರ ಮೇಲೆ ಶುಕ್ರವಾರ ಆರೋಪಿಸಿದ್ದರು.

ಬೈಕ್‌ನಲ್ಲಿ ತಮ್ಮೊಂದಿಗೆ ಇದ್ದ ತಮ್ಮ ತಾಯಿ ಸುಶೀಲಾ ಲಿಂಬಿಗಿಡದ ಅವರ ಮೇಲೆ ಸಹಾ ಪೊಲೀಸರು ಹಲ್ಲೆ ಮಾಡಿದ್ದಾಗಿ ಆರೋಪಿಸಿದ್ದರು.

ಈ ಕುರಿತು ಸ್ಪಷ್ಟನೆ ನೀಡಿರುವ ಬೆಳಗಾವಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ, ಬೈಕ್‌ ಸವಾರ ಹೃಷಿಕೇಶ ಅವರನ್ನು ತಡೆದ ಅಂಕಲಿ ಪೊಲೀಸರು
ಹೆಲ್ಮೆಟ್ ಇಲ್ಲದನ್ನು ಪ್ರಶ್ನಿಸಿದ್ದು, ರೂ. 500 ದಂಡ ಪಾವತಿಸಲು ಹೇಳಿದ್ದಾರೆ. ತಾನು ಕೇವಲ ರೂ. 200 ದಂಡ ಪಾವತಿಸುವುದಾಗಿ ಬೈಕ್ ಸವಾರ ಹೇಳಿದರು. ಆದ್ದರಿಂದ ಪೊಲೀಸರು ನ್ಯಾಯಾಲಯದ ದಂಡ ಬರೆದಿದ್ದಾರೆ ಎಂದು ತಿಳಿಸಿದರು.

ಅವರು ಕೆಟ್ಟದ್ದಾಗಿ ವರ್ತಿಸಲು ಪ್ರಾರಂಭಿಸಿದಾಗ ಬಿಎನ್‌ಎಸ್‌ಎಸ್‌ನ ಭದ್ರತಾ ವಿಭಾಗದ ಅಡಿಯಲ್ಲಿ ಚಿಕ್ಕೋಡಿ ತಹಶೀಲ್ದಾರ್ ಅವರ ಮುಂದೆ ಹಾಜರುಪಡಿಸಲಾಗಿದೆ. ಪೊಲೀಸರು ಅವರ ಮೇಲೆ ಹಲ್ಲೆ ನಡೆಸಿಲ್ಲ ಮತ್ತು ಅವರ ವಿರುದ್ಧ ಬೇರೆ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ತಿಳಿಸಿದ್ದಾರೆ.

ನಡೆದಿದ್ದೇನು ?
ಹೃಷಿಕೇಶ್ ಲಿಂಬಿಗಿಡದ ಹಾಗೂ ಸುಶೀಲಾ ಎಂಬುವವರು ಬೈಕ್​ನಲ್ಲಿ ಮಹಾರಾಷ್ಟ್ರ ಸಾಂಗ್ಲಿಯಿಂದ ಚಿಕ್ಕೋಡಿಗೆ ಬರುತ್ತಿದ್ದರು. ಈ ವೇಳೆ ಹೆಲ್ಮೆಟ್ ಹಾಕಿಲ್ಲ ಎಂಬ ಕಾರಣಕ್ಕೆ ಪೊಲೀಸರು ದರ್ಪ ತೋರಿದ್ದಾರೆ.

ಅಂಕಲಿ ಪೋಲಿಸರು ರಸ್ತೆ ಮಧ್ಯದಲ್ಲೇ ಯುವಕನಿಗೆ ಮನಬಂದಂತೆ ಥಳಿಸಿದ್ದು, ಮೈಮೇಲಿದ್ದ ಬಟ್ಟೆ ಹರಿದು ಲಾಠಿಯಿಂದ ಬಡಿದಿದ್ದಾರೆ. ಈ ವೇಳೆ ಮಗನ ಬಿಡಿಸಲು ಮುಂದಾದ ತಾಯಿಯ ಮೇಲೂ ಹಲ್ಲೆ ನಡೆಸಿದ್ದಾರೆ. ಮಹಿಳೆ ಎಂದು ಬಿಡದೆ ಪೊಲೀಸರು ರಸ್ತೆ ಮಧ್ಯದಲ್ಲೇ ಎಳೆದಾಡಿ ಬೂಟು ಕಾಲಿನಿಂದ ಒದ್ದಿದ್ದಾರೆ. ನಂತರ ಭಯದಿಂದ ಬಿಪಿ ಹೈ ಆಗಿ ಕೆಳಗೆ ಬಿದ್ದ ಯುವಕನನ್ನು ಪೊಲೀಸರೇ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.

ಪೊಲೀಸರು ಹೊಸ ಟಿ-ಶರ್ಟ್ ಕೊಡಿಸಿ ಆಸ್ಪತ್ರೆಗೆ ದಾಖಲಿಸಿದ್ದು, ಈ ವಿಷಯ ತಿಳಿದು ಯುವಕನ ತಂದೆಯೂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೀಗ ಅಂಕಲಿ ಪೊಲೀಸರ ವಿರುದ್ಧ ಸಾರ್ವಜನಿಕರ ಆಕ್ರೋಶ ಭುಗಿಲೆದ್ದಿತು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಕಲಗಿ ಪಟ್ಟಣದಲ್ಲಿ ವಿಜಯ ದಶಮಿ ನಿಮಿತ್ತ ಶ್ರೀ ಮಹಾಲಕ್ಷ್ಮೀ ದೇವಿ ಅಗ್ನಿ ಹಾಯುವ ಕಾರ್ಯಕ್ರಮ.ಮಾರ್ಕಂಡೇಯ ನದಿಯಲ್ಲಿ  ಮರ್ಡರ್..?ಬೆಳಗಾವಿಯಲ್ಲಿ ಹೊಸ ಶೋರೂಮ್ ಮೂಲಕ ಕರ್ನಾಟಕದಲ್ಲಿ ತನ್ನ ಅಸ್ತಿತ್ವ ವಿಸ್ತರಿಸಿದ PuREPowerನೀಲಿ ಡ್ರಮ್ ಕೊಲೆ ಪ್ರಕರಣ : ಪತ್ನಿ ಮುಸ್ಕಾನ್‌, ಪ್ರಿಯಕರ ಸಾಹಿಲ್‌ಗೆ ಮರಣದಂಡನೆ ಶಿಕ್ಷೆRCU ದಲ್ಲಿ ಲಕ್ಷಾಂತರ ರೂ  ಗೋಲ್ಮಾಲ್, ಮೂವರು ಜೈಲುಪಾಲು.ಚೌತಿ ರಾತ್ರಿ ಅವಘಡ:  ಚವಾಟಗಲ್ಲಿಯಲ್ಲಿ ನಾಲ್ವರು ಸಜೀವ ದಹನದ್ವಿಚಕ್ರ ವಾಹನ-ಸಾರಿಗೆ ಬಸ್ ಅಪಘಾತ: ಮೂವರು ಸ್ಥಳದಲ್ಲೇ ಸಾವುಬೆಂಗಳೂರು-ಬೆಳಗಾವಿ ನಡುವೆ ಎರಡು ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.ಪಾರ್ಕಿಂಗ್‌ ಮಾಡಿದ್ದ ಕಾರಿನ ಬಾನೆಟ್‌ನಲ್ಲಿ ಅಡಗಿತ್ತು ಬೃಹತ್‌ ಹೆಬ್ಬಾವು ; ಬೆಚ್ಚಿಬಿದ್ದ ನಿವಾಸಿಗಳು  ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರು