Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿಯಲ್ಲಿ ಕಳ್ಳತನ ಮಾಡಿದ ಪ್ರಕರಣ ಭೇದಿಸಿದ ಪೊಲೀಸರು

ಬೆಳಗಾವಿ : ನಗರದ ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಎರಡು ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಟಿಳಕವಾಡಿ ಪೊಲೀಸರು ಒಟ್ಟು 8.30 ಲಕ್ಷ ರೂ ಮೌಲ್ಯದ ಚಿನ್ನಾಭರಣ ಸೇರಿ ವಸ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಸಾವರಕರ ರೋಡ್ ಒಂದು ಮನೆ ಮತ್ತು ಹಿಂದವಾಡಿಯಲ್ಲಿ ಇರುವ ಅಮಿತ ಡಿಲೆಕ್ಸ್ ಲಾಜಿಂಗ್‌ನಲ್ಲಿ ಕಳ್ಳತನವಾದ ಬಗ್ಗೆ ಪ್ರಕರಣಗಳು ದಾಖಲಾಗಿದ್ದು, ಈ ಪ್ರಕರಣಗಳಿಗೆ ಸಂಬಂಧಿಸಿ ಬೆಳಗಾವಿ ನಗರ ಪೊಲೀಸ್ ಆಯುಕ್ತ ಬೊರಸೆ ಭೂಷಣ ಗುಲಾಬ್ ರಾವ್ ಹಾಗೂ ಉಪಪೊಲೀಸ್ ಆಯುಕ್ತ ರೋಹನ ಜಗದೀಶ (ಕಾ&ಸು), ಮತ್ತು ಎನ್ ನಿರಂಜನ್ ರಾಜೇಅರಸ್ (ಅ&ಸಂ) ಶೇಖರಪ್ಪ ಎಚ್, ಎಸಿಪಿ ಖಡೇಬಜಾರ ಉಪವಿಭಾಗ ಇವರ ಮಾರ್ಗದರ್ಶನದಲ್ಲಿ ಟಿಳಕವಾಡಿ ಪೊಲೀಸ್ ಠಾಣೆಯ ಇನ್ಸಪೆಕ್ಟರ್ ಪರಶುರಾಮ ಪೂಜೇರಿ ಅವರ ನೇತೃತ್ವದ ಅಧಿಕಾರಿ ಮತ್ತು ಸಿಬ್ಬಂದಿಗಳು ಈ ಎರಡು ಕಳ್ಳತನ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಪ್ರಕರಣಗಳಲ್ಲಿ 5,70,000 ರೂ‌. ಮೌಲ್ಯದ 58.860 ಗ್ರಾಂ ಬಂಗಾರದ ಕಂಗಣ ಒಂದು ಜೊತೆ ಹಾಗೂ 2,50,000 ರೂ. ಮೌಲ್ಯದ ಮ್ಯಾಟ್ ಗ್ರೇ ಬಣ್ಣದ ಯಮಹಾ ಆರ್15 ಮೋಟಾರ ಸೈಕಲ್ ನಂ: ಕೆಎ-22 ಎಚ್‌ಯು-2432 ಮತ್ತು ಕಪ್ಪು ಬಣ್ಣದ ಓದ್ದೋ ರೆನೋ 7 ಪ್ರೋ ಮೋಬೈಲ್ ಒಂದು 10,000/- ರೂ. ಮೌಲ್ಯದ ಹೀಗೆ ಪ್ರತ್ಯೇಕ ಎರಡು ಪ್ರಕಣಗಳಲ್ಲಿ ಒಟ್ಟು 8,30,000 ರೂ ಕಿಮ್ಮತ್ತಿನ ಸ್ವತ್ತನ್ನು ಜಪ್ತ ಮಾಡಿ ವಶಕ್ಕೆ ಪಡೆದುಕೊಂಡಿದ್ದು ತನಿಖೆ ಮುಂದುವರಿಸಿದ್ದಾರೆ.

ತನಿಖಾ ತಂಡದಲ್ಲಿ ಟಿಳಕವಾಡಿ ಪೊಲೀಸ್ ಇನ್ಸ್ಪೆಕ್ಟರ್ ಪರಶುರಾಮ ಪೂಜೇರಿ, ಪಿಎಸ್‌ಐ ವಿಶ್ವನಾಥ ಘಂಬಾಮಠ (ಕಾ&ಸು), ಪಿಎಸ್ ಐ ಪ್ರಭಾಕರ ಡೊಳ್ಳಿ (ಅ&ವಿ), ಸಿಬ್ಬಂದಿಗಳಾದ ಮಹೇಶ ಪಾಟೀಲ, ಎಸ್. ಎಮ್. ಕರಲಿಂಗಣ್ಣವರ, ನಾಗೇಂದ್ರ ತಳವಾರ, ಲಾಡಜಿಸಾಬ ಮುಲ್ತಾನಿ, ಸತೀಶ ಗಿರಿ, ಅರುಣ ಪಾಟೀಲ ಇವರನ್ನೊಳಗೊಂಡ ತಂಡ ಕಾರ್ಯನಿರ್ವಹಿಸಿದ್ದಾರೆ. ಸಿಬ್ಬಂದಿಗಳ ಕಾರ್ಯ ವೈಖರಿಯನ್ನು ನಗರ ಪೊಲೀಸ್ ಆಯುಕ್ತರು ಶ್ಲಾಘಿಸಿ ಬಹುಮಾನ ಘೋಷಿಸಿರುತ್ತಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ