Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ದಯಾಮರಣಕ್ಕೆ ಮನವಿ ಮಾಡಿಕೊಂಡ ಪೊಲೀಸ್ ಸಿಬ್ಬಂದಿ

 

 

ಬೆಂಗಳೂರು :
ಹಲವಾರು ವರ್ಷಗಳಿಂದ ಗಂಡ- ಹೆಂಡತಿಗೆ ಬೇರೆ ಬೇರೆ ಜಿಲ್ಲೆಗಳಲ್ಲಿ ಡ್ಯೂಟಿ ಹಾಕಿರುವ ಕಾರಣ ಮಕ್ಕಳಾಗುತ್ತಿಲ್ಲ. ಇದರಿಂದಾಗಿಯೇ ದಾಂಪತ್ಯ ವಿಚ್ಛೇದನಗಳೂ ಆಗಿವೆ. ದಯವಿಟ್ಟು ನಮಗೆ ದಯಾಮರಣ ಕೊಡಿ...

ಇಂಥ ಮನವಿ ಪತ್ರ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ತಲುಪಿದೆ. ರಾಜ್ಯ ಪೊಲೀಸ್‌ ಇಲಾಖೆಯ ನೊಂದ ಸಿಬ್ಬಂದಿಗಳು ಈ ಪತ್ರ ಬರೆದಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ಸಿಗದೇ ಇರುವುದರಿಂದ ಹತಾಶರಾಗಿರುವ ಸಿಬ್ಬಂದಿ ಅಂತಿಮವಾಗಿ ಈ ಹಾದಿ ಹಿಡಿದಿದ್ದಾರೆ. ಪತ್ರ ಬರೆದು, ವರ್ಗಾವಣೆ ಮಾಡಿ ಇಲ್ಲವೇ ದಯಾ ಮರಣ ನೀಡಿ ಎಂದು ಕೋರಿದ್ದಾರೆ.

ರಾಜ್ಯದ ಅನೇಕ ಠಾಣೆಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಯಿಂದ ಈ ಪತ್ರ ಬಂದಿದೆ. ಸಿಎಂ ಸಿದ್ದರಾಮಯ್ಯ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ರವಾನಿಸಲಾಗಿದೆ.

ಒಂದು ಕಡೆ ನೌಕರಿ ಮಾಡುತ್ತಾ ಹೆತ್ತ ಮಕ್ಕಳ ಲಾಲನೆ ಪಾಲನೆ ಮಾಡದೆ ಜನ್ಮ ಕೊಟ್ಟ ಅಪ್ಪ ಅಮ್ಮ ಇವರ ಪೋಷಣೆ ಮಾಡಲಾಗದೆ ಜೀವನ ನಡೆಸುವಂತಾಗಿದೆ. ನಮಗೆ ವರ್ಗಾವಣೆ ಆಗದೆ ಇರುವುದಕ್ಕೆ ದಾಂಪತ್ಯದಲ್ಲಿ ಬಿರುಕು ಬಿಟ್ಟು ಎಷ್ಟೋ ಸಂಸಾರಗಳು ವಿಚ್ಛೇದನ ಪಡೆಯುವ ಹಂತಕ್ಕೆ ತಲುಪಿವೆ. ಕೆಲವು ವಿಚ್ಛೇದನ ಕೊಟ್ಟಾಗಿದೆ.

ಇನ್ನು ಕೆಲವರಲ್ಲಿ ಪತಿ-ಪತ್ನಿ ಯಾರು ಬೇರೆ ಬೇರೆ ಇರುವುದರಿಂದ ಮದುವೆಯಾಗಿ 5 ವರ್ಷ ಕಳೆದರೂ ಇನ್ನು ಮಕ್ಕಳು ಆಗುತ್ತಿಲ್ಲ. ನಮ್ಮದು ಶಿಸ್ತಿನ ಇಲಾಖೆ ಹಾಗಾಗಿ ಬೇರೆ ಇಲಾಖೆಯವರಂತೆ ಪ್ರತಿಭಟನೆ ಮಾಡಲು ಅವಕಾಶ ವಿರುವುದಿಲ್ಲ. ಬೇರೆ ಇಲಾಖೆಯಲ್ಲಿ ಅಂತ‌ರ್ ಜಿಲ್ಲಾ ವರ್ಗಾವಣೆ ನಡೆದಿದೆ. ಆದರೆ ಪೊಲೀಸ್ ಇಲಾಖೆಯಲ್ಲಿ 2021 ರಿಂದ ಯಾವುದೆ ವರ್ಗಾವಣೆ ಆಗಿರುವುದಿಲ್ಲ.

ಆದ ಕಾರಣ ನಮಗೆ ನೆಮ್ಮದಿಯಾಗಿ ಕರ್ತವ್ಯ ನಿರ್ವವಹಿಸಲು ಆಗುತ್ತಿಲ್ಲ. ನಮಗೆ ನೆಮ್ಮದಿ ಅನ್ನೋದು ಹಾಳಾಗಿ ಆರೋಗ್ಯದಲ್ಲಿ ತೊಂದರೆ ಉಂಟಾಗಿವೆ. ಆದ ಕಾರಣ ದಯಾಳುಗಳಾದ ತಾವುಗಳು ನಮಗೆ ಸಾಮೂಹಿಕ ಮರಣ ಪಡೆಯಲು ದಯಾಮಾಡಿ ದಯಾಮರಣ ಕಲ್ಪಿಸಿಕೊಂಡಬೆಕೆಂದು ಸೊಂದ ಮನಸ್ಸಿನಿಂದ ಈ ಮೂಲಕ ಕಳಕಳಿಯಿಂದ ಬೇಡಿಕೊಳ್ಳುತ್ತೆವೆ ಎಂದು ಪೊಲೀಸ್​ ಸಿಬ್ಬಂದಿ ಪತ್ರ ಬರೆದಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ