Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

'ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ': ಒಂದು ಕೋಟಿ ಮನೆಗಳಿಗೆ ಸೌರಫಲಕ ಗುರಿ

 

ದೆಹಲಿ:
ಅಯೋಧ್ಯೆಯ ನೂತನ ರಾಮ ಮಂದಿರದಲ್ಲಿನ ಶ್ರೀಬಾಲರಾಮ ಪ್ರಾಣಪ್ರತಿಷ್ಠಾಪನೆಯ ಸಂಭ್ರಮ ದೇಶಾದ್ಯಂತ ಮನೆಮಾಡಿತ್ತು. ದೇಶದ ಹಳ್ಳಿಹಳ್ಳಿಗಳಲ್ಲೂ ರಾಮನಸ್ಮರಣೆ, ರಾಮಜಪ, ಜೈಶ್ರೀರಾಮ್ ಉದ್ಘೋಷಗಳು ಅನುರಣಿಸಿವೆ. ರಾಮಮಂದಿರ ಉದ್ಘಾಟನೆಯ ಬಳಿಕ ಪ್ರಧಾನಿ ಮೋದಿ ಹೊಸ ಯೋಜನೆಯೊಂದನ್ನು ಘೋಷಣೆ ಮಾಡಿದ್ದಾರೆ.

ಅಯೋಧ್ಯೆಯಿಂದ ಹಿಂದಿರುಗಿದ ನಂತರ ನಾನು ತೆಗೆದುಕೊಂಡ ಮೊದಲ ನಿರ್ಧಾರವೆಂದರೆ 'ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ'. ಈ ಯೋಜನೆಯಡಿ 1 ಕೋಟಿ ಮನೆಗಳಿಗೆ ಸೌರಫಲಕಗಳನ್ನು ಅಳವಡಿಸುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ ಎಂದು ಪ್ರಧಾನಿ ಮೋದಿ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಪ್ರಪಂಚದ ಎಲ್ಲಾ ಭಕ್ತರು ಸೂರ್ಯವಂಶಸ್ಥ ಭಗವಾನ್ ಶ್ರೀರಾಮನ ಬೆಳಕಿನಿಂದ ಯಾವಾಗಲೂ ಶಕ್ತಿಯನ್ನು ಪಡೆಯುತ್ತಾರೆ. ಸೋಮವಾರ ಅಯೋಧ್ಯೆಯಲ್ಲಿ ಪ್ರಾಣ-ಪ್ರತಿಷ್ಠಾಪನೆಯ ಶುಭ ಸಂದರ್ಭದಲ್ಲಿ ನನ್ನ ಸಂಕಲ್ಪ ಮತ್ತಷ್ಟು ಬಲಗೊಂಡಿದೆ ಎಂದು ತಮ್ಮ ಎಕ್ಸ್​ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ರಾಮ ಮಂದಿರ ಉದ್ಘಾಟನೆ ಬಳಿಕ ನಮ್ಮ ಸರ್ಕಾರವು ಒಂದು ಕೋಟಿ ಮನೆಗಳ ಮೇಲ್ಛಾವಣಿಗೆ ಸೋಲಾರ್ ಅಳವಡಿಸುವ ಗುರಿಯೊಂದಿಗೆ 'ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ' ಅನ್ನು ಪ್ರಾರಂಭಿಸಲಿದೆ. ಈ ಯೋಜನೆಯು ಬಡ ಮತ್ತು ಮಧ್ಯಮ ವರ್ಗದವರ ವಿದ್ಯುತ್ ಬಿಲ್ ಅನ್ನು ಕಡಿಮೆ ಮಾಡುವುದಲ್ಲದೆ, ಇಂಧನ ಕ್ಷೇತ್ರದಲ್ಲಿ ಭಾರತವನ್ನು ಸ್ವಾವಲಂಬಿಯನ್ನಾಗಿ ಮಾಡುತ್ತದೆ ಎಂದು ಹೇಳಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ