Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ಪ್ರಜ್ವಲ್ ರೇವಣ್ಣ ಮಾದರಿ ಪ್ರಕರಣ; ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ಎಸಗಿ ವಿಡಿಯೋ ಮಾಡುತ್ತಿದ್ದ ಕಾಮುಕ

ಉಡುಪಿ : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಇಡೀ ದೇಶದಲ್ಲಿ ಭಾರಿ ಸದ್ದು ಮಾಡುತ್ತಿದೆ. ಈಗ ಇದೇ ಮಾದರಿ ಎನ್ನಲಾದ ಮತ್ತೊಂದು ಘಟನೆ ಉಡುಪಿಯಲ್ಲಿ ನಡೆದಿದೆ.

ಪ್ರಜ್ವಲ್ ಪ್ರಕರಣ ಇಡೀ ದೇಶದಲ್ಲಿ ಸಂಚಲನಕ್ಕೆ ಕಾರಣವಾಗಿತ್ತು. ಅದರಲ್ಲೂ ಬಿಜೆಪಿ, ಜೆಡಿಎಸ್ ಹಾಗೂ ಕಾಂಗ್ರೆಸ್ ನಡುವೆ ಭಾರಿ ವಾಗ್ವಾದಕ್ಕೆ ಹುಟ್ಟು ಹಾಕಿತ್ತು. ಇದೇ ಅವಧಿಯಲ್ಲಿ ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ ಮತ್ತು ಅಂಜಲಿ ಅಂಬಿಗೇರ ಅವರ ಭೀಕರ ಕೊಲೆ ಆಗಿತ್ತು. ಪ್ರಜ್ವಲ್ ಲೈಂಗಿಕ ಪ್ರಕರಣ ಮಾದರಿಯಲ್ಲೇ ಮತ್ತೊಂದು ಪ್ರಕರಣ ನಡೆದಿರುವುದು ಇದೀಗ ಗೊತ್ತಾಗಿದೆ. ಆದರೆ, ಈತ ವಿದ್ಯಾರ್ಥಿನಿಯರನ್ನು ತನ್ನ ಪ್ರಭಾವ ಬಳಸಿ ಲೈಂಗಿಕ ಶೋಷಣೆಗೆ ಬಳಸಿಕೊಳ್ಳುತ್ತಿದ್ದ ಯುವಕನ ಕೃತ್ಯ ಬೆಳಕಿಗೆ ಬಂದಿದೆ‌. ಕಾಲೇಜು ವಿದ್ಯಾರ್ಥಿನಿಯರನ್ನೇ ಗುರಿಯಾಗಿರುತ್ತಿದ್ದ ಈತನ ಕೃತ್ಯಕ್ಕೆ ಎಲ್ಲೆಡೆ ವಿರೋಧ ವ್ಯಕ್ತವಾಗಿದೆ.

ಉಡುಪಿ ಪ್ರಕರಣ ಪ್ರಜ್ವಲ್ ರೇವಣ್ಣ ಪ್ರಕರಣದ ಮಾದರಿಯನ್ನು ಹೋಲುತ್ತಿದೆ. ಈ ಪ್ರಕರಣದಲ್ಲಿ ಉದ್ಯಮಿಯಾಗಿರುವ ಶ್ರೇಯಸ್ (25) ಎಂಬ ಆರೋಪಿ ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಉಡುಪಿಯ ಕುಂದಾಪುರ ತಾಲೂಕಿನ ಅಮಾವಾಸ್ಯೆಬೈಲು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾನೆ.

ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರನ್ನು ತನ್ನ ಭೋಗಕ್ಕೆ ಬಳಸುತ್ತಿದ್ದ ಆರೋಪಿ ಲೈಂಗಿಕ ದೌರ್ಜನ್ಯ ಎಸಗುವ ದೃಶ್ಯಗಳನ್ನು ಸೆರೆ ಹಿಡಿದು ತನ್ನ ಖಾಸಗಿ ಲ್ಯಾಪ್ ಟಾಪ್ ನಲ್ಲಿ ಇರಿಸಿಕೊಳ್ಳುತ್ತಿದ್ದ. ಈತ ಶಾಲೆ, ಕಾಲೇಜು ವಿದ್ಯಾರ್ಥಿನಿಯರನ್ನೇ ಟಾರ್ಗೆಟ್ ಮಾಡುತ್ತಿದ್ದ. ಈತ ಬಾಲಕಿಯೊಬ್ಬಳ ಮೇಲೆ ಕಳೆದ ಒಂದು ವರ್ಷದಿಂದ ನಿರಂತರ ಅತ್ಯಾಚಾರ ಎಸಗಿದ್ದಾನೆ. ಹಾಲಾಡಿ ರಸ್ತೆ ಹೆಗ್ಗೋಡ್ಲುವಿನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕಾರಿನಲ್ಲಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ. ಅತ್ಯಾಚಾರದ ದೃಶ್ಯ ಸೆರೆ ಹಿಡಿದು ಬ್ಲ್ಯಾಕ್ ಮೇಲ್ ಮಾಡಿ ಪದೇ ಪದೇ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಗರ್ಭವತಿ ಆಗಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ.

ಪ್ರಜ್ವಲ್ ರೇವಣ್ಣ ಮಾದರಿಯಲ್ಲೇ ವಿಡಿಯೋ ಮಾಡಿಕೊಳ್ಳುತ್ತಿದ್ದ ವಿಕೃತ ಕಾಮಿ ವಿರುದ್ಧ ಮೇ 18 ರಂದು ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ಪರಾರಿಯಾಗಿದ್ದಾನೆ. ಆರೋಪಿ ಶ್ರೇಯಸ್ ಬಂಧನಕ್ಕೆ ವಿಶೇಷ ತನಿಖಾ ತಂಡ ರಚನೆ ಮಾಡಿ ಹುಡುಕಾಡಲಾಗುತ್ತಿದೆ.

ಮತ್ತೊಂದೆಡೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ. ರಾಬರ್ಟ್ ರೆಬಲ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕೇಳಿಬಂದಿದೆ. ಆಸ್ಪತ್ರೆಯ ಮಹಿಳಾ ಸಹೋದ್ಯೋಗಿ ಮೇಲೆ ವೈದ್ಯಾಧಿಕಾರಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನುವ ಆರೋಪವಿದ್ದು, ಮಹಿಳಾ ಸಹೋದ್ಯೋಗಿ ನೀಡಿದ ದೂರಿನ ಮೇರೆಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಡಾ.ರಾಬರ್ಟ್ ರೆಬೆಲ್ಲೋ ಅವರನ್ನು ತಕ್ಷಣದಿಂದ ಕರ್ತವ್ಯದಿಂದ ಬಿಡುಗಡೆಗೊಳಿಸಿ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಆದೇಶಿಸಿದ್ದಾರೆ. ಹಾಗೂ ಡಾ.ರಾಬರ್ಟ್ ರೆಬೆಲ್ಲೊ ತಕ್ಷಣವೇ ಆಯುಕ್ತರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯ ಬೆಂಗಳೂರು ಇವರಿಗೆ ವರದಿ ಮಾಡುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

Author
Jana Jeevala News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
RCU ದಲ್ಲಿ ಲಕ್ಷಾಂತರ ರೂ  ಗೋಲ್ಮಾಲ್, ಮೂವರು ಜೈಲುಪಾಲು.ಚೌತಿ ರಾತ್ರಿ ಅವಘಡ:  ಚವಾಟಗಲ್ಲಿಯಲ್ಲಿ ನಾಲ್ವರು ಸಜೀವ ದಹನದ್ವಿಚಕ್ರ ವಾಹನ-ಸಾರಿಗೆ ಬಸ್ ಅಪಘಾತ: ಮೂವರು ಸ್ಥಳದಲ್ಲೇ ಸಾವುಬೆಂಗಳೂರು-ಬೆಳಗಾವಿ ನಡುವೆ ಎರಡು ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.ಪಾರ್ಕಿಂಗ್‌ ಮಾಡಿದ್ದ ಕಾರಿನ ಬಾನೆಟ್‌ನಲ್ಲಿ ಅಡಗಿತ್ತು ಬೃಹತ್‌ ಹೆಬ್ಬಾವು ; ಬೆಚ್ಚಿಬಿದ್ದ ನಿವಾಸಿಗಳು  ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರು