ಬೆಳಗಾವಿ: ಹರ್ ಘರ್ ತಿರಂಗಾ ಅಭಿಯಾನದ ಪೂರ್ವಭಾವಿ ಸಭೆ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆಯಿತು.
ಸಭೆಯನ್ನು ಉದ್ದೇಶಿಸಿ ವಿಧಾನಪರಿಷತ್ ಸದಸ್ಯ ಲಿಂಗರಾಜ ಪಾಟೀಲ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರ ಕರೆಯ ಮೇರೆಗೆ ಆಯೋಜಿತವಾದ ಹರ್ ಘರ್
ತಿರಂಗಾ ಅಭಿಯಾನ ಇಂದು ದೇಶಾದ್ಯಂತ ರಾಷ್ಟ್ರೀಯ ಅಭಿಯಾನವಾಗಿ ರೂಪಿತವಾಗಿದೆ. ಈ ಅಭಿಯಾನವು ಪ್ರತಿ
ಭಾರತೀಯನ ಹೃದಯದಲ್ಲಿಯೂ ತಿರಂಗಾ ಧ್ವಜದ ಬಗ್ಗೆ ಹೆಮ್ಮೆ, ಗೌರವದ ಭಾವನೆ ಮೂಡುವಂತೆ ಮಾಡುವಲ್ಲಿ
ಯಶಸ್ವಿಯಾಗಿದೆ ಎಂದು ಹೇಳಿದರು
ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಮತ್ತು ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡ್ರ ಮಾತನಾಡಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರ ಸೂಚನೆಯ ಮೇರೆಗೆ
ಆಗಸ್ಟ್ 11 ರಿಂದ ಆಗಸ್ಟ್ 15 ರವರೆಗೆ ನಡೆಯಲಿರುವ ಹರ್ ಘರ್ ತಿರಂಗಾ ಅಭಿಯಾನ
ಹಾಗೂ ತಿರಂಗಾ ಯಾತ್ರೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಲು ಮುಖಂಡರಿಗೆ, ಕಾರ್ಯಕರ್ತರಿಗೆ ಕರೆ ನೀಡಿದರು ಹಾಗೂ ಹರ್ ಘರ್ ತಿರಂಗಾ ಅಭಿಯಾನದ ನಿಮಿತ್ತ ಆಯೋಜಿಸಬೇಕಾದ ವಿವಿಧ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು
ವಿಭಾಗ ಪ್ರಭಾರಿಗಳಾದ ಸಂಜಯ ಪಾಟೀಲ, ಮಾಜಿ ಶಾಸಕರಾದ ಡಾ.ವಿಶ್ವನಾಥ ಪಾಟೀಲ,ಅರವಿಂದ ಪಾಟೀಲ, ರಾಷ್ಟ್ರೀಯ ಓ.ಬಿ.ಸಿ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಲಕ್ಷ್ಮಣ ತಪಸಿ,ಜಿಲ್ಲಾ ಪ್ರದಾನ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ ಮಾದಮ್ಮನವರ, ಸಂದೀಪ ದೇಶಪಾಂಡೆ,ಧನಶ್ರೀ ದೇಸಾಯಿ, ಅಭಿಯಾನದ ಸಂಚಾಲಕ ಮಹೇಶ ಮೋಹಿತೆ, ಮನೋಜ ಪಾಟೀಲ, ಪ್ರಮೋದ ಕೊಚೇರಿ,ಸೋನಾಲಿ ಸರ್ನೊಬತ್ ಹಾಗೂ ಇತರರು ಉಪಸ್ಥಿತರಿದ್ದರು.