Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಸಂಗೊಳ್ಳಿ ರಾಯಣ್ಣ ಘಟಕ ಕಾಲೇಜಿನಲ್ಲಿ ಪ್ರೇಮಚಂದ್ ಜಯಂತಿ

ಬೆಳಗಾವಿ:  ನಗರದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಹಿಂದಿ ವಿಭಾಗದ ವತಿಯಿಂದ ಹಿಂದಿ ಸಾಹಿತ್ಯದ ಮಹಾನ್ ಕಾದಂಬರಿಕಾರ ಹಾಗೂ ವಾಸ್ತವವಾದಿ ಲೇಖಕ ಮುಂಶಿ ಪ್ರೇಮಚಂದ್ ಅವರ ಜಯಂತಿಯನ್ನು ಮಹಾವಿದ್ಯಾಲಯದ ಸಭಾಂಗಣದಲ್ಲಿ ಶುಕ್ರವಾರ ಆಚರಿಸಲಾಯಿತು.

ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ. ಎಸ್. ಸಿ. ಪಾಟೀಲ ಅವರು ಮುಂಶಿ ಪ್ರೇಮಚಂದ್ ಅವರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿ ಮಾತನಾಡಿದರು.  ಅವರು, ಪ್ರೇಮಚಂದ್ ಅವರ ಸಾಹಿತ್ಯವು ಸಮಾಜದ ನೈಜ ಚಿತ್ರಣವನ್ನು ಬಿಂಬಿಸುವುದರ ಜೊತೆಗೆ ಮಾನವೀಯ ಮೌಲ್ಯಗಳು, ಸಾಮಾಜಿಕ ಸಮಾನತೆ ಹಾಗೂ ರಾಷ್ಟ್ರಪ್ರೇಮದ ಸಂದೇಶವನ್ನು ಸಾರುತ್ತದೆ. ವಿದ್ಯಾರ್ಥಿಗಳು ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ನಾಗರಿಕರಾಗಿ ರೂಪುಗೊಳ್ಳಬೇಕು. 
ಶಿಕ್ಷಣವು ಕೇವಲ ಪದವಿಗಳಿಸುವ ಸಾಧನವಲ್ಲ; ಉತ್ತಮ ನಡತೆ, ಸಂಸ್ಕಾರ ಹಾಗೂ ವ್ಯಕ್ತಿತ್ವವನ್ನು ರೂಪಿಸುವ ಮಹತ್ತರ ಸಾಧನವಾಗಿದೆ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. 

ಹಿಂದಿ ವಿಭಾಗದ ಮುಖ್ಯಸ್ಥ ಡಾ. ಎಂ. ಎಂ. ಮುತವಳ್ಳಿ ಮಾತನಾಡಿ, ಮುಂಶಿ ಪ್ರೇಮಚಂದ್ ಅವರ ಜೀವನ, ಸಾಹಿತ್ಯಿಕ ಸಾಧನೆ ಹಾಗೂ ವಾಸ್ತವವಾದಿ ಬರವಣಿಗೆಯ ವೈಶಿಷ್ಟ್ಯವನ್ನು ವಿವರಿಸಿದರು.

ಹಿಂದಿ ವಿಭಾಗದ ವಿದ್ಯಾರ್ಥಿಗಳು ಪ್ರೇಮಚಂದ್ ಅವರ ಕಾದಂಬರಿಗಳು, ಕಥೆಗಳು, ಸಾಹಿತ್ಯ ಮತ್ತು ಸಾಮಾಜಿಕ ಚಿಂತನೆಗಳ ಕುರಿತು ತಮ್ಮ ಅಭಿಪ್ರಾಯ ಹಂಚಿಕೊಂಡರು. 

 ಹಿಂದಿ ವಿಭಾಗದ ಉಪನ್ಯಾಸಕಿ ಡಾ. ದೀಪಾ ಅಂಟಿನ್ ಅವರು  ಪರಿಚಯಿಸಿ, ಸ್ವಾಗತಿಸಿದರು.  ಹಿಂದಿ ವಿಭಾಗದ ಉಪನ್ಯಾಸಕಿ ಉಜ್ವಲಾ ಪಾಟೀಲ ಅವರು ವಂದಿಸಿದರು. ವಿದ್ಯಾರ್ಥಿನಿ ನೇತ್ರಾ ನಿರೂಪಿಸಿದರು.

Author
Jana Jeevala News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ