Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಗುಲಾಮಗಿರಿ ಮನಸ್ಥಿತಿ ನಾಯಕರಿಂದ ಧಾರ್ಮಿಕ ನಂಬಿಕೆಗಳ ಮೇಲೆ ದಾಳಿ: ಪ್ರಧಾನಿ ಮೋದಿ

 

ಛತ್ತರಪುರ(ಮಧ್ಯಪ್ರದೇಶ): ಪ್ರಯಾಗರಾಜ್‌ದಲ್ಲಿ
ನಡೆಯುತ್ತಿರುವ ಮಹಾ ಕುಂಭ ಮೇಳ ಟೀಕಿಸಿ ಹೇಳಿಕೆ ನೀಡಿರುವ ಕೆಲ ನಾಯಕರ ನಡೆಯನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಖಂಡಿಸಿದ್ದಾರೆ.

ವಿದೇಶಿ ಶಕ್ತಿಗಳ ಬೆಂಬಲ ಹೊಂದಿರುವ 'ಗುಲಾಮಗಿರಿ ಮನಸ್ಥಿತಿ'ಯ ನಾಯಕರು ದೇಶದ ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆ ಮೇಲೆ ದಾಳಿ ನಡೆಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಛತ್ತರಪುರದಲ್ಲಿ ಶ್ರೀ ಬಾಗೇಶ್ವರ ವೈದ್ಯಕೀಯ ವಿಜ್ಞಾನಗಳ ಮತ್ತು ಸಂಶೋಧನಾ ಸಂಸ್ಥೆಗೆ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.

ಈ ಸಂಸ್ಥೆಯು ಕ್ಯಾನ್ಸರ್ ಆಸ್ಪತ್ರೆಯನ್ನೂ ಒಳಗೊಂಡಿದೆ. ಬಾಗೇಶ್ವರ ಧಾಮವು ಹನುಮಾನ್ ದೇವರ ಸನ್ನಿಧಾನವಾಗಿದ್ದು, ಈ ಸ್ಥಳಕ್ಕೆ ಭಾರಿ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡುತ್ತಾರೆ. ಬಾಗೇಶ್ವರ ಧಾಮದ ಪೀಠಾಧೀಶ ಧೀರೇಂದ್ರ ಶಾಸ್ತ್ರಿ ಅವರು ಈ ವೈದ್ಯಕೀಯ ಕಾಲೇಜು ಹಾಗೂ ಕ್ಯಾನ್ಸ‌ರ್ ಆಸ್ಪತ್ರೆ ನಿರ್ಮಿಸುತ್ತಿದ್ದಾರೆ.

ಹಿಂದೂ ನಂಬಿಕೆಗಳನ್ನು ದ್ವೇಷಿಸುವವರು ಹಲವು ಶತಮಾನಗಳಿಂದ ಬೇರೆ ಬೇರೆ ವೇಷಗಳಲ್ಲಿ ಇಲ್ಲಿ ವಾಸಿಸುತ್ತಿದ್ದಾರೆ. 'ಗುಲಾಮಗಿರಿ ಮನಸ್ಥಿತಿ' ಹೊಂದಿರುವವರು ನಮ್ಮ ನಂಬಿಕೆಗಳು ದೇವಸ್ಥಾನಗಳು ಸಂತರು ಸಂಸ್ಕೃತಿ ಮೇಲೆ ದಾಳಿ ನಡೆಸುತ್ತಿದ್ದಾರೆ. ಈ ಜನರು ನಮ್ಮ ಹಬ್ಬಗಳು ಹಾಗೂ ಪರಂಪರೆಗಳ ನಿಂದನೆ ಮಾಡುತ್ತಿದ್ದಾರೆ. ದೇಶದ ಏಕತೆಗೆ ಧಕ್ಕೆ ತರುವುದು ಹಾಗೂ ಸಮಾಜವನ್ನು ಒಡೆಯುವುದೇ ಇವರ ಕಾರ್ಯಸೂಚಿ. ಮೂಲಭೂತವಾಗಿ ಪ್ರಗತಿಪರ ಆಗಿರುವ ನಮ್ಮ ಧರ್ಮ ಹಾಗೂ ಸಂಸ್ಕೃತಿಗೆ ಕೆಸರೆರಚುವ ಕಾರ್ಯವನ್ನೂ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

 

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇತ್ತೀಚೆಗೆ ಮಹಾ ಕುಂಭ ಮೇಳವನ್ನು 'ಮೃತ್ಯು ಕುಂಭ' ಎಂದು ಕರೆದಿದ್ದರು. ಇದು ವಿವಾದಕ್ಕೆ ಈಡಾಗಿರುವ ಸಂದರ್ಭದಲ್ಲಿಯೇ ಮೋದಿ ಅವರಿಂದ ಈ ಮಾತು ಹೊರಬಿದ್ದಿದೆ.

'ಇತ್ತೀಚಿನ ದಿನಗಳಲ್ಲಿ ಕೆಲ ನಾಯಕರ ಗುಂಪು ನಮ್ಮ ಧರ್ಮವನ್ನು ಅಣಕಿಸುವುದು ಹಾಗೂ ಅಪಹಾಸ್ಯ ಮಾಡುವುದನ್ನು ನೋಡುತ್ತಿದ್ದೇವೆ. ದೇಶದ ಜನರಲ್ಲಿನ ಒಗ್ಗಟ್ಟು ಮುರಿಯುವುದೇ ಅವರ ಉದ್ದೇಶವಾಗಿದೆ' ಎಂದು ಮೋದಿ ವಾಗ್ದಾಳಿ ನಡೆಸಿದರು.

ಇಂತಹ ಜನರನ್ನು ಬೆಂಬಲಿಸುವ ಮೂಲಕ ದೇಶ ಹಾಗೂ ನಮ್ಮ ಧರ್ಮವನ್ನು ದುರ್ಬಲಗೊಳಿಸಲು ವಿದೇಶಿ ಶಕ್ತಿಗಳು ಯತ್ನಿಸುತ್ತಿರುವುದನ್ನು ಸಹ ನೋಡಿದ್ದೇವೆ ಎಂದರು.

ಮಹಾ ಕುಂಭ ಮೇಳದ ವೇಳೆ, ಸಫಾಯಿ ಕರ್ಮಚಾರಿಗಳು ಹಾಗೂ ಪೊಲೀಸ್ ಸಿಬ್ಬಂದಿ ಮಾಡುತ್ತಿರುವ ಕಾರ್ಯ ಶ್ಲಾಘಿಸಿದ ಮೋದಿ, 'ಈ ಬೃಹತ್ ಧಾರ್ಮಿಕ ಕಾರ್ಯಕ್ರಮ ಯಶಸ್ವಿಯಾಗಲು ಇವರ ಶ್ರಮ ದೊಡ್ಡದು ಎಂದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ