Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಚುನಾವಣಾ ಜಾಹೀರಾತು: ಪೂರ್ವಾನುಮತಿ ಕಡ್ಡಾಯ

 

ಬೆಳಗಾವಿ :
ಕರ್ನಾಟಕ ವಿಧಾನಸಭೆ ಚುನಾವಣೆ-೨೦೨೩ ಅಂಗವಾಗಿ ಮೇ ೧೦, ೨೦೨೩ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮೇ ೯ ಹಾಗೂ ೧೦ ರಂದು ಅಭ್ಯರ್ಥಿಗಳು/ಸಂಸ್ಥೆಗಳು ಅಥವಾ ಯಾವುದೇ ವ್ಯಕ್ತಿಯು ದಿನಪತ್ರಿಕೆಗಳಲ್ಲಿ ಯಾವುದೇ ರೀತಿಯ ಚುನಾವಣಾ ಜಾಹೀರಾತು ಪ್ರಕಟಿಸಬೇಕಾದರೆ ಸದರಿ ಜಾಹೀರಾತಿಗೆ ಜಿಲ್ಲಾ ಮಟ್ಟದ ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿಯ(ಎಂಸಿಎಸಿ) ಕಡೆಯಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.

ಚುನಾವಣಾ ಜಾಹೀರಾತು ಪ್ರಕಟಿಸಲು ಬಯಸುವ ಅಭ್ಯರ್ಥಿಗಳು ಮೇ ೯ ಹಾಗೂ ೧೦ರಂದು ಮುದ್ರಣ ಮಾಧ್ಯಮಗಳಲ್ಲಿ ಜಾಹೀರಾತು ಪ್ರಕಟಿಸಬೇಕಾದರೆ ಸದರಿ ಜಾಹೀರಾತಿನ ಎರಡು ಸ್ವಯಂ ದೃಢೀಕೃತ ಪ್ರತಿಗಳೊಂದಿಗೆ ನಿಗದಿತ ಅರ್ಜಿ ನಮೂನೆಯಲ್ಲಿ ಮೇ ೭ ರೊಳಗೆ ಜಿಲ್ಲಾ ಮಟ್ಟದ ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿ(ಎಂಸಿಎಸಿ)ಗೆ ಅರ್ಜಿ ಸಲ್ಲಿಸಬೇಕು.

ಚುನಾವಣೆಗೆ ಸಂಬಂಧಿಸಿದ ಯಾವುದೇ ರೀತಿಯ ಜಾಹೀರಾತುಗಳನ್ನು ಪ್ರಕಟಿಸಲು ಜಿಲ್ಲಾಮಟ್ಟದ ಎಂಸಿಎಸಿ ಕಡೆಯಿಂದ ಪೂರ್ವಾನುಮತಿ ಪಡೆಯದ ಅಭ್ಯರ್ಥಿಗಳ ಜಾಹೀರಾತುಗಳನ್ನು ಸ್ಥಳೀಯ, ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರಮಟ್ಟದ ದಿನಪತ್ರಿಕೆಗಳು ಪ್ರಕಟಿಸಬಾರದು ಎಂದು ಚುನಾವಣಾ ಆಯೋಗ ತಿಳಿಸಿದೆ.

ಪೂರ್ವಾನುಮತಿಗೆ ಅರ್ಜಿ ಲಭ್ಯ:

ಮೇ ೧ ಹಾಗೂ ೧೦ ರಂದು ಮುದ್ರಣ ಮಾಧ್ಯಮದಲ್ಲಿ ಪ್ರಕಟಿಸಲು ಅಗತ್ಯವಿರುವ ನಿಗದಿತ ನಮೂನೆಯ ಅರ್ಜಿ ನಮೂನೆಗಳು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ‘ವಾರ್ತಾಭವನ’ ನ್ಯಾಯಾಲಯ ಆವರಣ, ಬೆಳಗಾವಿ- ಈ ಕಚೇರಿಯಿಂದ ಪಡೆಯಬಹುದು.

ಎಲೆಕ್ಟಾನಿಕ್ ಮಾಧ್ಯಮಗಳಿಗೆ ಮಾರ್ಗಸೂಚಿ:
ಮತದಾನಕ್ಕೆ ನಿಗದಿಪಡಿಸಿರುವ ಅವಧಿ ಕೊನೆಗೊಳ್ಳುವ ೪೮ ಗಂಟೆಗಳ ಮುಂಚೆ ಎಲೆಕ್ಟಾನಿಕ್ ಮಾಧ್ಯಮಗಳಲ್ಲಿ (ಟಿವಿ, ಸಿನಿಮಾಟೋಗ್ರಾಫ್, ದೃಶ್ಯಶ್ರವಣ) ಚುನಾವಣಾ ಸಂಬಂಧಿ ವಿಷಯಗಳ ಪ್ರಸಾರವನ್ನು ಪ್ರಜಾಪ್ರತಿನಿಧಿ ಕಾಯ್ದೆ-೧೯೫೧ ರ ಕಲಂ ೧೨೬ ರ ಪ್ರಕಾರ ನಿಷೇಧಿಸಲಾಗಿದೆ.
ಚುನಾವಣಾ ಸಂಬಂಧಿ ವಿಷಯ ಎಂದರೆ ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಅಥವಾ ಪರಿಣಾಮ ಬೀರುವಂತಹ ವಿಷಯಗಳಾಗಿರುತ್ತವೆ.
ಈ ಕಾಯ್ದೆಯನ್ನು ಉಲ್ಲಂಘಿಸುವವರಿಗೆ ಎರಡು ವರ್ಷಗಳವರೆಗೆ ವಿಸ್ತರಿಸಬಹುದಾದ ಕಾರಾಗೃಹ ಶಿಕ್ಷೆ ಅಥವಾ ದಂಡ ಅಥವಾ ದಂಡ ಮತ್ತು ಶಿಕ್ಷೆ ಎರಡನ್ನೂ ವಿಧಿಸಬಹುದಾಗಿದೆ.
ಟಿವಿ/ರೇಡಿಯೋ/ಕೇಬಲ್ ನೆಟವರ್ಕ ಮತ್ತು ಎಲ್ಲ ಡಿಜಿಟಲ್ ಮಾಧ್ಯಮಗಳು ಮತದಾನಪೂರ್ವ ೪೮ ಗಂಟೆಗಳ ಅವಧಿಯಲ್ಲಿ ಚುನಾವಣೆ ಸಂಬಂಧಿ ವಿಷಯಗಳು ಪ್ರಸಾರ ಮಾಡದಂತೆ ಕ್ರಮವಹಿಸಬೇಕು.
ಕಾರ್ಯಕ್ರಮದಲ್ಲಿ ಭಾಗವಹಿಸುವವರು(ಪ್ಯಾನಲಿಸ್ಟ್) ಯಾವುದೇ ಪಕ್ಷ ಅಥವಾ ಅಭ್ಯರ್ಥಿಗಳ ಪರ ಅಥವಾ ವಿರೋಧವಾಗಿರುವ ಅಭಿಪ್ರಾಯಗಳು/ಮನವಿಗಳು ಮತ್ತು ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುವಂತಹ ವಿಷಯಗಳನ್ನು ಕೂಡ ಪ್ರಸಾರ ಮಾಡಕೂಡದು.
ನಿಗದಿತ ೪೮ ಗಂಟೆಗಳ ಅವಧಿಯಲ್ಲಿ ಓಪಿನಿಯನ್ ಪೋಲ್ ಫಲಿತಾಂಶ ಪ್ರಕಟಿಸುವುದು. ಚರ್ಚೆ ಅಥವಾ ವಿಶ್ಲೇಷಣೆ ಏರ್ಪಡಿಸುವುದು. ಅದೇ ರೀತಿ ಚುನಾವಣೋತ್ತರ ಸಮೀಕ್ಷೆಗಳನ್ನು ಪ್ರಸಾರ ಮಾಡುವುದು ಕೂಡ ಪ್ರಜಾಪ್ರತಿನಿಧಿ ಕಾಯ್ದೆ-೧೯೫೧ ರ ಕಲಂ ೧೨೬ ರ ವ್ಯಾಪ್ತಿಯಲ್ಲಿ ಬರುತ್ತದೆ.

ಕರ್ನಾಟಕ ವಿಧಾನಸಭೆ ಚುನಾವಣೆ-೨೦೨೩ರ ಅಂಗವಾಗಿ ಮೇ ೧೦ ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಆದ್ದರಿಂದ ಎಲ್ಲ ಎಲೆಕ್ಟಾನಿಕ್ ಹಾಗೂ ಡಿಜಿಟಲ್ ಮಾಧ್ಯಮಗಳು ಮೇ ೮ ರ ಸಂಜೆ ೬ ಗಂಟೆಯಿಂದ ಮೇ ೧೦ ರ ಸಂಜೆ ೬.೩೦ ಗಂಟೆಯವರೆಗೆ ಮೇಲ್ಕಂಡ ನಿರ್ದೇಶನಗಳನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ