ಬೆಳಗಾವಿ: ಇಲ್ಲಿಯ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಕೈದಿ ಆತ್ಮಹತ್ಯೆಗೆ ಯತ್ನಿಸಿದ್ದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಬಳ್ಳಾರಿ ಮೂಲದ ಗಿರೀಶ್ ಆತ್ಮಹತ್ಯೆಗೆ ಮುಂದಾಗಿ ಸೆಲ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ಇದನ್ನು ಗಮನಿಸಿದ ಇತರ ಸಹಕೈದಿಗಳು ತಕ್ಷಣ ಜೈಲಿನ ಅಧಿಕಾರಿಗಳಿಗೆ ಮಾಹಿತಿ ರವಾನಿಸಿದ್ದಾರೆ. ಅಂಬುಲೆನ್ಸ್ ಮೂಲಕ ಆತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಬುಧವಾರದಂದು ಆತ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.