Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಉಕ- ದಕ ಭೇದವಿಲ್ಲದೆ ಸರಕಾರದಿಂದ ಕಾರ್ಯಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಎನ್ನುವ ತಾರತಮ್ಯವಿಲ್ಲದೆ ಸರಕಾರದ ಕಾರ್ಯಕ್ರಮಗಳು ನಡೆಯುತ್ತಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಬೆಳಗಾವಿಯಲ್ಲಿ ಮಂಗಳವಾರ ಸಂಜೆ ಕಿತ್ತೂರು ಚೆನ್ನಮ್ಮ ವಿಜಯೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ರಸಮಂಜರಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ಧ ವಿಜಯ ಸಾಧಿಸಿ 200 ವರ್ಷವಾದ ಹಿನ್ನೆಲೆಯಲ್ಲಿ ಈ ಕಾರ್ಯವನ್ನು ಸರಕಾರ ಅದ್ಧೂರಿಯಾಗಿ ಆಚರಿಸುತ್ತಿದೆ. ಈ ಮೊದಲು ದಕ್ಷಿಣ ಕರ್ನಾಟಕದಲ್ಲಿ ಮಾತ್ರ ದೊಡ್ಡ ದೊಡ್ಡ ಕಾರ್ಯಕ್ರಮಗಳಾಗುತ್ತವೆ ಎನ್ನುವ ದೂರು ಇತ್ತು. ಆದರೆ ಸಿದ್ದರಾಮಯ್ಯ ನೇತೃತ್ವದ ನಮ್ಮ ಸರಕಾರ ಆ ರೀತಿಯ ತಾರತಮ್ಯವಿಲ್ಲದೆ ಸಮಾನವಾಗಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮಕ್ಕೆ ಅದ್ದೂರಿಯ ಚಾಲನೆ ಸಿಕ್ಕಿದೆ. ನಾಳೆಯಿಂದ 3 ದಿನ ಕಿತ್ತೂರಿನಲ್ಲಿ ಜನೋತ್ಸವ ನಡೆಯಲಿದೆ. ಇತಿಹಾಸದ ಗತವೈಭವ ತೋರಿಸಲು‌ ಈ ಉತ್ಸವ ಆಚರಿಸಲಾಗುತ್ತಿದೆ. ಮೊಟ್ಟಮೊದಲು ಸ್ವಾತಂತ್ರ್ಯದ ಕಹಳೆ ಮೊಳಗಿಸಿದ ಕಿತ್ತೂರು ರಾಣಿ ಚೆನ್ನಮ್ಮ ಮಹಿಳೆಯರಿಗೆ ಶಕ್ತಿ ತುಂಬುವ ಹೆಸರು. ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ನಮ್ಮ ಅಭಿಮಾನದ ಸಂಕೇತ ಎಂದು ಹೆಬ್ಬಾಳಕರ್ ಹೇಳಿದರು.
ಕಿತ್ತೂರು ಉತ್ಸವ ನಮ್ಮ ಉತ್ಸವ. ಸರಕಾರ ಮುತುವರ್ಜಿಯಿಂದ ಆಯೋಜನೆ ಮಾಡಿದೆ. ಈ ಮೂಲಕ ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕ ಎರಡೂ ಸಮಾನ ಎನ್ನುವ ಸಂದೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರಿದ್ದಾರೆ. ಅವರು ಅ.25ರಂದು ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರು ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಕಾರ್ಯಕ್ರಮ ಉದ್ಘಾಟಿಸಿದರು.
ಶಾಸಕ ರಾಜು ಸೇಠ್ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಶಾಸಕ
ಬಾಬಾ ಸಾಹೇಬ ಪಾಟೀಲ, ಮೇಯರ್ ಸವಿತಾ ಕಾಂಬಳೆ, ಉಪಮೇಯರ್ ಅನಂದ ಚವ್ಹಾಣ, ಜಿಲ್ಲಾಧಿಕಾರಿ ಮೊಹ್ಮದ್ ರೋಷನ್, ಜಿಲ್ಲಾ ಪಂಚಾಯತ ಸಿಇಒ ರಾಹುಲ್ ಶಿಂಧೆ, ಯುವ ಕಾಂಗ್ರೆಸ್ ಮುಖಂಡ ಮೃಣಾಲ್‌ ಹೆಬ್ಬಾಳಕರ್, ಉಪವಿಭಾಗಾಧಿಕಾರಿ ಶ್ರವಣ ನಾಯಕ ಮೊದಲಾದವರಿದ್ದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಕಲಗಿ ಪಟ್ಟಣದಲ್ಲಿ ವಿಜಯ ದಶಮಿ ನಿಮಿತ್ತ ಶ್ರೀ ಮಹಾಲಕ್ಷ್ಮೀ ದೇವಿ ಅಗ್ನಿ ಹಾಯುವ ಕಾರ್ಯಕ್ರಮ.ಮಾರ್ಕಂಡೇಯ ನದಿಯಲ್ಲಿ  ಮರ್ಡರ್..?ಬೆಳಗಾವಿಯಲ್ಲಿ ಹೊಸ ಶೋರೂಮ್ ಮೂಲಕ ಕರ್ನಾಟಕದಲ್ಲಿ ತನ್ನ ಅಸ್ತಿತ್ವ ವಿಸ್ತರಿಸಿದ PuREPowerನೀಲಿ ಡ್ರಮ್ ಕೊಲೆ ಪ್ರಕರಣ : ಪತ್ನಿ ಮುಸ್ಕಾನ್‌, ಪ್ರಿಯಕರ ಸಾಹಿಲ್‌ಗೆ ಮರಣದಂಡನೆ ಶಿಕ್ಷೆRCU ದಲ್ಲಿ ಲಕ್ಷಾಂತರ ರೂ  ಗೋಲ್ಮಾಲ್, ಮೂವರು ಜೈಲುಪಾಲು.ಚೌತಿ ರಾತ್ರಿ ಅವಘಡ:  ಚವಾಟಗಲ್ಲಿಯಲ್ಲಿ ನಾಲ್ವರು ಸಜೀವ ದಹನದ್ವಿಚಕ್ರ ವಾಹನ-ಸಾರಿಗೆ ಬಸ್ ಅಪಘಾತ: ಮೂವರು ಸ್ಥಳದಲ್ಲೇ ಸಾವುಬೆಂಗಳೂರು-ಬೆಳಗಾವಿ ನಡುವೆ ಎರಡು ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.ಪಾರ್ಕಿಂಗ್‌ ಮಾಡಿದ್ದ ಕಾರಿನ ಬಾನೆಟ್‌ನಲ್ಲಿ ಅಡಗಿತ್ತು ಬೃಹತ್‌ ಹೆಬ್ಬಾವು ; ಬೆಚ್ಚಿಬಿದ್ದ ನಿವಾಸಿಗಳು  ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರು