Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯ ಬಂಧನ:  ಯುವತಿಯ ರಕ್ಷಣೆ

Advertisement

ಬೆಳಗಾವಿ: ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿರುವ ಬೆಳಗಾವಿ ಪೊಲೀಸರು, ಆರೋಪಿಯನ್ನು ಬಂಧಿಸಿ ಯುವತಿಯನ್ನು ರಕ್ಷಣೆ ಮಾಡಿದ್ದಾರೆ.

ಬೆಳಗಾವಿಯ ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಅಪಾರ್ಟ್ ಮೆಂಟ್‌ ಒಂದರಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ದಂಧೆ ನಡೆಸುತ್ತಿದ್ದ ಮಹಿಳೆಯನ್ನು ಬಂಧಿಸಿ ತೆಲಂಗಾಣ ಮೂಲದ ಯುವತಿಯನ್ನು ರಕ್ಷಿಸಿದ್ದಾರೆ.

ಆಯೇಶಾ ಶಬ್ಬಿರ್ ಶೇಖ್ ಅಲಿಯಾಸ್ ರೇಷ್ಮಾ ಅಂಕಲೆವಾಲೆ (31) ಬಂಧಿತ ಆರೋಪಿ.‌ ಆರೋಪಿ ಮಹಿಳೆ ಅಪಾರ್ಟೆಂಟ್‌ನಲ್ಲಿ ಮನೆ ಬಾಡಿಗೆಗೆ ಪಡೆದು, ತೆಲಂಗಾಣ ರಾಜ್ಯದ ಯುವತಿಯನ್ನು ಅಲ್ಲೇ ಇರಿಸಿಕೊಂಡು ಗಿರಾಕಿಗಳನ್ನು ಮನೆಗೆ ಕರೆಯಿಸಿ ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದಳು ಎನ್ನಲಾಗಿದೆ.

ಈ ಕುರಿತು ದೊರೆತ ಮಾಹಿತಿ ಆಧರಿಸಿ ಸಿಪಿಐ ಪರಶುರಾಮ ಪೂಜೇರಿ ನೇತೃತ್ವದಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ಒಳಗೊಂಡ ವಿಶೇಷ ತಂಡ ಕಾರ್ಯಾಚರಣೆ ನಡೆಸಿತು. ದಾಳಿ ವೇಳೆ ಯುವತಿಯನ್ನು ರಕ್ಷಿಸಿ ಆರೋಪಿತೆಯನ್ನು ವಶಕ್ಕೆ ಪಡೆಯಲಾಗಿದೆ.

ಈ ಸಂಬಂಧ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಅನೈತಿಕ ಮಾನವ ಸಾಗಣೆ ತಡೆ ಕಾಯ್ದೆ (PIT Act)-1956ರ ಕಲಂ 3, 4 ಹಾಗೂ 5ರಅಡಿಯಲ್ಲಿ ಪ್ರಕರಣ ದಾಖಲಿಸಿ ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಡಿನಲ್ಲಿ ನಾಪತ್ತೆಯಾಗಿದ್ದ 65 ವರ್ಷದ ವೃದ್ಧನನ್ನು ರಕ್ಷಿಸಿದ ಅರಣ್ಯ ಇಲಾಖೆ ಸಿಬ್ಬಂದಿ...!ಬೆಳಗಾವಿಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯ ಬಂಧನ:  ಯುವತಿಯ ರಕ್ಷಣೆಮೊದಲ ರೈಲ್ವೆ ಗೇಟ್ ಪ್ರದೇಶದಲ್ಲಿ ಸಿಕ್ಕ ಶವ ಯಾರದ್ದು ?ಮಹಿಳೆಯ ಖಾಸಗಿ ಪೋಟೋ ಹಂಚಿಕೊಂಡು ಕಿರುಕುಳ : ಕೊನೆಗೂ ಕಾರ್ಯಾಚರಣೆಗೆ ಮುಂದಾದ ಪೊಲೀಸರುಇಬ್ಬರೂ ವೃತ್ತಿಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ: ರೋಹಿಣಿ ಸಿಂಧೂರಿ–ರೂಪಾ ಜಗಳದ ಕುರಿತು ಸುಪ್ರೀಂ ಕೋರ್ಟ್‌KSCA ಅಧ್ಯಕ್ಷ ವೆಂಕಟೇಶ ಪ್ರಸಾದ್ ಬೆಳಗಾವಿಗೆ : ಸತ್ಯಾತ್ಮತೀರ್ಥ ಶಿಕ್ಷಣ ಸಂಸ್ಥೆಯ ಪರಿಸರ ದಿನಾಚರಣೆಯಲ್ಲಿ ಭಾಗಿಕೊನೆಗೂ ಶಿವಾನಂದ ನೀಲಣ್ಣವರಿಗೆ ಜಾಮೀನು ಮಂಜೂರು : ನಿಟ್ಟುಸಿರು ಬಿಟ್ಟ ಶಿವಾನಂದ...!ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಪ್ರಕ್ರಿಯೆಗೆ ಚಾಲನೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಪ್ರಕ್ರಿಯೆಗೆ ಚಾಲನೆ ಧರ್ಮಸ್ಥಳ ಬುರುಡೆ ಪ್ರಕರಣ : ಎಸ್‌ಐಟಿ ಮುಂದೆ ಷಡ್ಯಂತ್ರದ ವಿವರ ಬಿಚ್ಚಿಟ್ಟ ಚಿನ್ನಯ್ಯ