Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಹೆಬ್ಬಾವಿನ ಮೊಟ್ಟೆಗಳಿಗೆ ಕೃತಕ ಕಾವು ನೀಡಿ ಮರಿಗಳ ರಕ್ಷಣೆ

ಪುತ್ತೂರು : ಹಾವು ಅದರಲ್ಲೂ ಹೆಬ್ಬಾವು, ಕಾಳಿಂಗ ಸರ್ಪಗಳು ಎಂದರೆ ಹೆದರದೆ ಇರುವವರೇ ವಿರಳ ಎನ್ನಬಹುದು. ಆದರೆ ತಂತ್ರಜ್ಞಾನ ಮುಂದುವರಿದಂತೆ ಹಾವುಗಳ ಬಗ್ಗೆ ಇರುವ ಭಯ ಕಡಿಮೆಯಾಗುತ್ತಿದೆ.

ಇಲ್ಲೊಂದು ಅಂತಹ ಅಪರೂಪದ ಘಟನೆ ನಮ್ಮ ಮುಂದಿದೆ. ಅನಾಥವಾಗಿದ್ದ ಹೆಬ್ಬಾವಿನ ಮೊಟ್ಟೆಗಳಿಗೆ ಕೃತಕ ಕಾವು ನೀಡಿ ಸುಮಾರು 25 ಕ್ಕೂ ಅಧಿಕ ಮರಿಗಳನ್ನು ಮಾಡಿ ಅವುಗಳನ್ನು ಸುರಕ್ಷಿತವಾಗಿ ರಕ್ಷಿತಾರಣ್ಯದೊಳಗೆ ಬಿಟ್ಟು ಬಿಡುವ ಮೂಲಕ ಯುವ ಉರಗ ಪ್ರೇಮಿ ಪುತ್ತೂರು ತಾಲೂಕಿನ ಸ್ನೇಕ್ ತೇಜಸ್ ಬನ್ನೂರು ಅವರು ಮಾನವೀಯತೆ ಮೆರೆದಿದ್ದಾರೆ.

ತಾಯಿ ಹಾವುಗಳಿಲ್ಲದೆ ಅನಾಥವಾಗಿರುವ ಮೊಟ್ಟೆಗಳನ್ನು ಶ್ರೇಯಸ್‌ ಅರಣ್ಯ ಇಲಾಖೆಯ ಅನುಮತಿಯೊಂದಿಗೆ ತಮ್ಮ ಮನೆಗೆ ಕೊಂಡೊಯ್ದು ಅವುಗಳಿಗೆ ಕೃತಕ ಕಾವನ್ನು ನೀಡುವ ವ್ಯವಸ್ಥೆ ಮಾಡುತ್ತಾರೆ. ಬಂಟ್ವಾಳ ತಾಲೂಕಿನ ಅನಂತಾಡಿ ಎಂಬಲ್ಲಿಂದ ಸಂಗ್ರಹಿಸಿದ 12 ಮೊಟ್ಟೆ ಹಾಗೂ ಕನ್ಯಾನ ಎಂಬಲ್ಲಿಂದ ಸಂಗ್ರಹಿಸಿದ 13 ಮೊಟ್ಟೆಗಳಿಗೆ ಕೃತಕ ಕಾವು ನೀಡಿ ಮರಿ ಮಾಡುವ ಮೂಲಕ ವಿವಿಧ ಅರಣ್ಯ ಪ್ರದೇಶಗಳಲ್ಲಿ ಬಿಟ್ಟಿದ್ದಾರೆ.
ತೇಜಸ್ ಬನ್ನೂರು 25 ಕ್ಕೂ ಮಿಕ್ಕಿದ ಹೆಬ್ಬಾವಿನ ಮರಿಗಳನ್ನು ರಕ್ಷಿಸಿ ಬೇರೆ ಬೇರೆ ಅರಣ್ಯಕ್ಕೆ ಬಿಡುವ ಮೂಲಕ ತನ್ನ ಉರಗಪ್ರೇಮವನ್ನು ತೋರಿಸಿಕೊಟ್ಟಿದ್ದಾರೆ.

ಅವರೇ ಹೇಳುವಂತೆ ಇದುವರೆಗೆ ಸುಮಾರು 100 ಕ್ಕೂ ಮಿಕ್ಕಿದ ಹೆಬ್ಬಾವಿನ ಮರಿಗಳನ್ನು ಕಾಡಿಗೆ ಬಿಟ್ಟು ಹೆಬ್ಬಾವುಗಳ ಸಂತತಿಯನ್ನು ಸಂರಕ್ಷಣೆ ಮಾಡಿದ್ದಾರೆ. ಹೆಚ್ಚಾಗಿ ಮರದ ಪೊಟರೆಯೊಳಗೆ, ಬಿದ್ದ ತೆಂಗಿನ ಮರದ ಟೊಳ್ಳಾದ ಭಾಗದಲ್ಲಿ ಹೆಬ್ಬಾವುಗಳು ಮೊಟ್ಟೆಗಳನ್ನು ಇಡುತ್ತವೆ. ಸುಮಾರು 60 ದಿನಗಳ ಕಾಲ ಹೆಬ್ಬಾವುಗಳು ಮರಿಗಳಿಗೆ ಕಾವು ನೀಡುತ್ತದೆ. ಹಾವುಗಳಲ್ಲಿ ಹೆಬ್ಬಾವು ಮತ್ತು ಕಾಳಿಂಗ ಸರ್ಪ ಮಾತ್ರ ತಮ್ಮ ಮೊಟ್ಟೆಗಳಿಗೆ ಕಾವು ನೀಡುವ ಮೂಲಕ ಮರಿ ಮಾಡುವ ಹಾವುಗಳು. ಮಾನವ ಅಥವಾ ಇತರ ಪ್ರಾಣಿಗಳ ತೊಂದರೆಯಾದಾಗ ಹೆಬ್ಬಾವು ಮತ್ತು ಕಾಳಿಂಗ ಸರ್ಪ ತಮ್ಮ ಮೊಟ್ಟೆಗಳನ್ನು ಬಿಟ್ಟು ಬೇರೆಡೆ ಸಾಗುತ್ತದೆ. ಹೀಗೆ ಸಾಗಿದ ಸಂದರ್ಭದಲ್ಲಿ ಮೊಟ್ಟೆಗಳು ಕಾವಿಲ್ಲದೆ ಅನಾಥವಾಗಿ ಹಾಳಾಗುವ ಸಾಧ್ಯತೆಗಳೂ ಹೆಚ್ಚಾಗಿರುತ್ತದೆ. ಅಂತಹ ಮೊಟ್ಟೆಗಳು ಕಂಡು ಬಂದಾಗ ತೇಜಸ್ ಅವರು ಅದನ್ನು ಸಂರಕ್ಷಣೆ ಮಾಡಿ ಕೃತಕ ಕಾವು ನೀಡುವ ಮೂಲಕ ಜೀವಸೃಷ್ಟಿಯನ್ನು ಮಾಡಿ ಪ್ರಕೃತಿಗೆ ಸೇರ್ಪಡೆ ಮಾಡುವ ಕಾಯಕ ಮಾಡುತ್ತಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆವಿದ್ಯಾರ್ಥಿಗಳು  ಎನ್ ಸಿಸಿ   ಮಹತ್ವ ಮತ್ತು ಅದರ ಉಪಯೋಗ ಹಾಗೂ ಅನುಕೂಲಗಳ  ಮಾಹಿತಿ ಪಡೆಯಬೇಕು: ಪ್ರೊ . ಹನುಮಂತ ಬನ್ನೂರಇನ್ನಿಬ್ಬರಿಗೆ ಉಪ ಮುಖ್ಯಮಂತ್ರಿ ಹುದ್ದೆ ?ಈಜಲು ಬಾರದ ಕಾರಣ ಕೃಷಿ ಹೊಂಡದಲ್ಲಿ ಮುಳುಗಿ ಸಾವುನೀಟ್ ಪರೀಕ್ಷೆಯಲ್ಲಿ ಹೊಸಮನಿ ಸಹೋದರಿಯರ ಸಾಧನೆಹಾವು ಕಡಿತ ಔಷಧ: ಸಾಮಾಜಿಕ ಜಾಲತಾಣದಲ್ಲಿ ತಪ್ಪು ಸಂದೇಶ