E-PAPER
08 Nov 2026, 11:02:59 PM|
Gold₹14180/gGold24K ₹14,180/g - 22K ₹12,998/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಬದುಕಿರುವ ವ್ಯಕ್ತಿಗೆ ಮರಣ ಪ್ರಮಾಣಪತ್ರ ನೀಡಿದ ಅಧಿಕಾರಿಗಳು.! ಯಡವಟ್ಟು ಮಾಡಿದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ

ಬೆಳಗಾವಿ: ವ್ಯಕ್ತಿಯೊಬ್ಬರು ಜೀವಂತವಿದ್ದರೂ ಅವರ ಮರಣ ಪ್ರಮಾಣಪತ್ರ ನೀಡಿದ ಘಟನೆ ಸವದತ್ತಿ ತಾಲೂಕಿನ ಸುತಗಟ್ಟಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

ತುಂತುರು ಹನಿ ನೀರಾವರಿ ಯೋಜನೆಗೆ ಅರ್ಜಿ ಕೊಡಲು ಮುರಗೋಡ ಕೃಷಿ ಇಲಾಖೆಗೆ ಹೋದಾಗ ಈ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ಸವದತ್ತಿ ತಾಲೂಕಿನ ಸುತಗಟ್ಟಿ ಗ್ರಾಮದ ಈಶ್ವರ ನಾಗಪ್ಪ ಅಬ್ಬಾಯಿ ಎಂಬವರು ಜೀವಂತವಿದ್ದರೂ ಗ್ರಾಮಲೇಕ್ಕಾಧಿಕಾರಿ ನೀಲಾ ಮೂರಗೋಡ(ಬಾನಿ) ಎಂಬುವರ ಎಡವಟ್ಟಿನಿಂದ ಇವರ ಮರಣ ಹೊಂದಿದ್ದಾರೆಂದು ತಹಶೀಲ್ದಾರ್‌ ಕಚೇರಿಯಲ್ಲಿ ದಾಖಲಾಗಿದೆ. ಈ ನೊಂದ ವ್ಯಕ್ತಿ ದೋಷ ಸರಿಪಡಿಸುವಂತೆ ಮುರಗೋಡ ನಾಡ ಕಚೇರಿ ಹಾಗೂ ಸವದತ್ತಿ ತಹಶೀಲ್ದಾರ್‌ ಚೇರಿಗಳಿಗೆ 5 ತಿಂಗಳಿನಿಂದ ಅಲೆದಾಡುತ್ತಿದ್ದರೂ ಅಧಿಕಾರಿಗಳು ಮಾತ್ರ ಸ್ಪಂದಿಸುತ್ತಿಲ್ಲ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ.

2021ರಲ್ಲಿ ಮರಣ ಪ್ರಮಾಣ ಪತ್ರ ದಾಖಲು: ಸುತಗಟ್ಟಿ ಗ್ರಾಮದ ಈಶ್ವರ ನಾಗಪ್ಪ ಅಬ್ಬಾಯಿ ಎಂಬವರು ರೈತರಾಗಿದ್ದು, ತಾವು ಮಾತ್ರ ಈಗಲೂ ಕೃಷಿಯಲ್ಲಿ ಕೆಲಸ ಮಾಡುತ್ತಾ ಜೀವನ ಸಾಗಿಸುತ್ತಿದ್ದಾರೆ. ಈ ವ್ಯಕ್ತಿ ಮರಣ ಹೊಂದಿದ್ದಾರೆ ಎಂದು 08-07-2021ರಂದು ಮರಣ ಪ್ರಮಾಣಪತ್ರ ದಾಖಲು ಮಾಡಿ ಅಧಿಕಾರಿಗಳು ಯಡವಟ್ಟು ಮಾಡಿದ್ದಾರೆ. ಇಷ್ಟೇ ಅಲ್ಲದೆ ತಾವು ಮಾಡಿದ ಯಡವಟ್ಟುನ್ನು ಮುಚ್ಚಿ ಹಾಕಲು ಅಧಿಕಾರಿಗಳು ಈ ದಾಖಲೆಯನ್ನು ಸರಿ ಪಡಿಸಲಾಗುವುದು ಎಂದು ಹಾರಿಕೆ ಉತ್ತರ ನೀಡಿ ನೊಂದ ವ್ಯಕ್ತಿಗೆ ಕಳುಹಿಸಿ ಕೊಟ್ಟು ಕೈ ತೊಳೆದುಕೊಂಡಿದ್ದಾರೆ.

ಕಚೇರಿಗೆ ನಿತ್ಯ ಅಲೆದರೂ ರದ್ದಾಗದ ಮರಣ ಪ್ರಮಾಣ ಪತ್ರ: ಇತ್ತ ತನ್ನ ಮರಣ ಪ್ರಮಾಣಪತ್ರವನ್ನು ರದ್ದು ಪಡಿಸುವಂತೆ ಈಶ್ವರ ಅಬ್ಬಾಯಿ ಕಳೆದ 5 ತಿಂಗಳಿಂದ ಮುರಗೋಡ ನಾಡ ಕಚೇರಿ ಸೇರಿದಂತೆ ಸವದತ್ತಿ ತಹಶೀಲ್ದಾರ್‌ ಕಚೇರಿಗೆ ಅಲೆಯುತ್ತಿದ್ದರೂ ಮರಣ ಪ್ರಮಾಣಪತ್ರ ರದ್ದಾಗಿಲ್ಲ. ಜೀವಂತ ಇದ್ದರೂ ತನಗೆ ಮರಣ ಪ್ರಮಾಣಪತ್ರ ನೀಡಿದ್ದರಿಂದ ಅವರಿಗೆ ಸರ್ಕಾರದಿಂದ ದೊರೆಯಬೇಕಾದ ಸೌಲಭ್ಯ ಪಡೆಯಲು ಸಾಧ್ಯವಾಗಿಲ್ಲ ಎಂದು ಈಶ್ವರ ಅಬ್ಬಾಯಿ ತಮ್ಮ ಅಳಲು ತೋಡಿಕೊಂಡಿದ್ದಾರೆ.
ಎಚ್ಚೆತ್ತಕೊಳ್ಳದ ಅಧಿಕಾರಿಗಳು: ಕಳೆದ 5 ತಿಂಗಳಿಂದ ಮರಣ ಪ್ರಮಾಣ ಪತ್ರ ರದ್ದು ಪಡಿಸುವಂತೆ ಈಶ್ವರ ಅಬ್ಬಾಯಿ ಮನವಿ ಸಲ್ಲಿಸಿದ್ದರೂ ಮುರಗೋಡ ನಾಡ ಕಚೇರಿ ಹಾಗೂ ಸವದತ್ತಿ ತಹಶೀಲ್ದಾರ್‌ ಕಚೇರಿ ಅಧಿಕಾರಿಗಳು ಅತ್ತ ಇತ್ತ ಕಡೆಗೆ ಕೈ ತೋರಿಸಿ ಬಚಾವ್ ಆಗಿದ್ದರು. ಯಾವಾಗ ಪತ್ರಕರ್ತರಿಗೆ ಈ ವಿಷಯ ತಿಳಿದಿದೆ ಎಂದು ಗೊತ್ತಾದ ತಕ್ಷಣ ಅಲರ್ಟ್ ಆಗಿ ಮರಣ ಪ್ರಮಾಣಪತ್ರ ರದ್ದು ಪಡಿಸಲು ಸಂಬಂಧಿಸಿದ ಇಲಾಖೆಯ ಬಾಗಿಲು ಬಡಿಯುತ್ತಿರುವ ವಿಷಯ ತಿಳಿದು ಬಂದಿದೆ. ಜೀವಂತ ಇದ್ದರೂ ಮರಣ ಪ್ರಮಾಣ ಪತ್ರ ನೀಡಿ ಯಡವಟ್ಟು ಮಾಡಿದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಬದುಕಿರುವ ವ್ಯಕ್ತಿಗೆ ಮರಣ ಪ್ರಮಾಣಪತ್ರ ನೀಡಿರುವ ಬಗ್ಗೆ ದೂರು ಬಂದಿದ್ದು, ಈಗ ಮರಣ ಪ್ರಮಾಣಪತ್ರ ನೋಂದಣಿ ಆಗಿರುವುದು ಗೊತ್ತಾಗಿದೆ. ಯಾವ ಉದ್ದೇಶದಿಂದ ಬದುಕಿರುವ ವ್ಯಕ್ತಿಯ ಮರಣ ಪ್ರಮಾಣಪತ್ರ ನೋಂದಣಿ ಮಾಡಿದ್ದಾರೆ ಎಂಬುದರ ಬಗ್ಗೆ ತನಿಖೆ ನಡೆಸುತ್ತಿದ್ದು, ತಪ್ಪಿತಸ್ಥರ ಮೇಲೆ ಕ್ರಮ ವಹಿಸಲಾಗುವುದು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸುತಗಟ್ಟಿ ಗ್ರಾಮಲೇಕ್ಕಾಧಿಕಾರಿಗೆ ನೋಟಿಸ್ ನೀಡಲಾಗಿದೆ.

-ಮಲ್ಲಿಕಾರ್ಜುನ ಹೆಗ್ಗನವರ‌, ಸವದತ್ತಿ ತಹಶೀಲ್ದಾರ್‌

ಸುತಗಟ್ಟಿ ಗ್ರಾಮದಲ್ಲಿ ಬದುಕಿರುವ ವ್ಯಕ್ತಿಗೆ ಮರಣ ಪ್ರಮಾಣಪತ್ರ ನೀಡಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಶೀಘ್ರವೇ ಈ ಪ್ರಕರಣದ ಕುರಿತು ಮಾಹಿತಿ ಪಡೆದು ಎಡವಟ್ಟು ಮಾಡಿದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು.
.-ಪ್ರವೀಣ ಜೈನ್‌ , ಬೈಲಹೊಂಗಲ ಉಪವಿಭಾಗಾಧಿಕಾರಿ

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾರ್ಕಂಡೇಯ ನದಿಯಲ್ಲಿ  ಮರ್ಡರ್..?ಬೆಳಗಾವಿಯಲ್ಲಿ ಹೊಸ ಶೋರೂಮ್ ಮೂಲಕ ಕರ್ನಾಟಕದಲ್ಲಿ ತನ್ನ ಅಸ್ತಿತ್ವ ವಿಸ್ತರಿಸಿದ PuREPowerನೀಲಿ ಡ್ರಮ್ ಕೊಲೆ ಪ್ರಕರಣ : ಪತ್ನಿ ಮುಸ್ಕಾನ್‌, ಪ್ರಿಯಕರ ಸಾಹಿಲ್‌ಗೆ ಮರಣದಂಡನೆ ಶಿಕ್ಷೆRCU ದಲ್ಲಿ ಲಕ್ಷಾಂತರ ರೂ  ಗೋಲ್ಮಾಲ್, ಮೂವರು ಜೈಲುಪಾಲು.ಚೌತಿ ರಾತ್ರಿ ಅವಘಡ:  ಚವಾಟಗಲ್ಲಿಯಲ್ಲಿ ನಾಲ್ವರು ಸಜೀವ ದಹನದ್ವಿಚಕ್ರ ವಾಹನ-ಸಾರಿಗೆ ಬಸ್ ಅಪಘಾತ: ಮೂವರು ಸ್ಥಳದಲ್ಲೇ ಸಾವುಬೆಂಗಳೂರು-ಬೆಳಗಾವಿ ನಡುವೆ ಎರಡು ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.ಪಾರ್ಕಿಂಗ್‌ ಮಾಡಿದ್ದ ಕಾರಿನ ಬಾನೆಟ್‌ನಲ್ಲಿ ಅಡಗಿತ್ತು ಬೃಹತ್‌ ಹೆಬ್ಬಾವು ; ಬೆಚ್ಚಿಬಿದ್ದ ನಿವಾಸಿಗಳು  ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ