PUC ಪ್ರಥಮ : ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಇಂದು
ಬೆಳಗಾವಿ : ಅಗಸಗಿ ಗ್ರಾಮದ ಶ್ರೀಮತಿ ಲೀಲಾವತಿ ವೆಂಕಟೇಶ ಕರಗುಪ್ಪಿಕರ ಪ್ರೌಢಶಾಲೆ ಹಾಗೂ ಆರ್. ಎ. ಪರ್ವತೆ ಪದವಿ ಪೂರ್ವ ಮಹಾವಿದ್ಯಾಲಯದ ವತಿಯಿಂದ 2024-25ನೇ ಸಾಲಿನ ಶಾಲಾ ಸಂಸತ್ತು, ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವನ್ನು ಆ.21 ರಂದು ಬೆಳಗ್ಗೆ 10.30 ಕ್ಕೆ ಅಗಸಗಿ ಪ್ರೌಢಶಾಲೆಯ ಸಭಾಗೃಹದಲ್ಲಿ ಹಮ್ಮಿಕೊಳ್ಳಲಾಗಿದೆ.
ನಾಗನೂರು ಶ್ರೀ ರುದ್ರಾಕ್ಷಿಮಠದ ಡಾ. ಅಲ್ಲಮಪ್ರಭು ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಶಾಲಾ ಸ್ಥಾನಿಕ ಆಡಳಿತ ಮಂಡಳಿ ಚೇರಮನ್ ಅಮೃತ ಮುದ್ದೆಣ್ಣವರ ಅಧ್ಯಕ್ಷತೆ ವಹಿಸುವರು. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಶಿಕ್ಷಣ ವಿಭಾಗದ ಡೀನ್ ಡಾ.ಎಂ.ಸಿ. ಯರ್ರಿಸ್ವಾಮಿ, ಶ್ರೀ ಸಿದ್ದರಾಮೇಶ್ವರ ಎಜುಕೇಶನ್ ಟ್ರಸ್ಟ್ ಕಾರ್ಯದರ್ಶಿ ಕೆ. ಬಿ. ಹಿರೇಮಠ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.