Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮತ್ತೊಂದು ಪಾದಯಾತ್ರೆಗೆ  ರಾಹುಲ್ ಗಾಂಧಿ ಸಜ್ಜು

 

ಬೆಂಗಳೂರು :
ದೇಶದಲ್ಲಿ ದಕ್ಷಿಣದ ತುದಿ ಕನ್ಯಾಕುಮಾರಿಯಿಂದ ಉತ್ತರದ ಕಾಶ್ಮೀರವದವರೆಗೆ ಪಾದಯಾತ್ರೆಯನ್ನು ಮಾಡಿದ್ದ ರಾಹುಲ್‌ಗಾಂಧಿ ಅವರಿಗೆ ಅಭೂತಪೂರ್ವ ಬೆಂಬಲ ಸಿಕ್ಕಿದೆ. ಈಗ ಅವರನ್ನು ಸಂಸತ್‌ ಸದಸ್ಯ ಸ್ಥಾನದಿಂದ ಅನರ್ಹತೆಗೊಳಿಸಿದ್ದರೂ, ಧೃತಿಗಡೆದೇ ಮತ್ತೊಮ್ಮೆ ಪೂರ್ವದಿಂದ ಪಶ್ಚಿಮಕ್ಕೆ ಭಾರತ್‌ ಜೋಡೋ ಯಾತ್ರೆಯನ್ನು ಮಾಡಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಹುಲ್‌ ಗಾಂಧಿ ಅವರ ಭಾರತ್‌ ಜೋಡೋ ಯಾತ್ರೆ ಹೋದ ಕಡೆಗಳಲ್ಲಿ ಎಲ್ಲವೂ ಕಾಂಗ್ರೆಸ್‌ ಜಯಭೇರಿ ಬಾರಿಸಿದೆ. ಅವರು ಈಸ್ಟ್‌ ಅಂಡ್‌ ವೆಸ್ಟ್‌ ಭಾರತ್‌ ಜೋಡೋ ಯಾತ್ರೆ ಮಾಡಲು ಚಿಂತನೆ ನಡೆಸಿದ್ದಾರೆ. ಈ ಯಾತ್ರೆಗೆ ಹಿನ್ನಡೆಯನ್ನುಂಟು ಮಾಡುವ ಉದ್ದೇಶದಿಂದಲೇ ಷಡ್ಯಂತ್ರವನ್ನು ಮಾಡಲಾಗುತ್ತಿದೆ. ಆದ್ದರಿಂದ ಬಿಜೆಪಿ ಹಾಗೂ ಕಾಂಗ್ರೆಸ್‌ ವಿರೋಧಿ ಪಕ್ಷಗಳಿಗೆ ಬುದ್ಧಿ ಕಲಿಸಲಿಕ್ಕೆಂದೇ ಅಖಿಲ ಭಾರತ ಕಾಂಗ್ರೆಸ್‌ ಸಮಿತಿ ಕಡೆಯಿಂದ ಒಂದು ನಿರ್ಧಾರ ಮಾಡಲಾಗಿದೆ. ದೇಶದ ಉದ್ದಗಲಕ್ಕೂ ರಾಹುಲ್ ಗಾಂಧಿ ಪರವಾಗಿ ನಿಲ್ಲುವ ಸಂದೇಶವನ್ನು ವಿರೋಧಿಗಳಿಗೆ ಕಳಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಜು.12ರಂದು ಕಾಂಗ್ರೆಸ್‌ನಿಂದ ದೇಶಾದ್ಯಂತ ಕಪ್ಪು ಪಟ್ಟಿ ಕಟ್ಟಿಕೊಂಡು ಮೌನ ಪ್ರತಿಭಟನೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ದೇಶಾದ್ಯಂತ ಪ್ರತಿಭಟನೆ ಮಾಡಲಾಗುತ್ತದೆ. ಕರ್ನಾಟಕದಲ್ಲಿ ಎಲ್ಲ ಶಾಸಕರು, 30 ಜಿಲ್ಲೆಗಳ ಕಾಂಗ್ರೆಸ್‌ ಜಿಲ್ಲಾಧ್ಯಕ್ಷರು, ತಾಲೂಕು ಮತ್ತು ಬ್ಲಾಕ್ ಮಟ್ಟದ ಅಧ್ಯಕ್ಷರು ಭಾಗಿ ಆಗುತ್ತಾರೆ. ಇನ್ನು ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ನಾನೂ ಪ್ರತಿಭಟನೆಯಲ್ಲಿ ಭಾಗವಹಿಸುತ್ತೇನೆ. ಜು.12ರಂದು ಅಧಿವೇಶನ ಇದ್ದರೂ ನಾವು ಬೇರೆಯವರಿಗೆ ಜವಾಬ್ದಾರಿ ವಹಿಸಿ ಭಾಗವಹಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ರಾಹುಲ್‌ ಗಾಂಧಿ ಅವರು ಕರ್ನಾಟಕದಲ್ಲಿ ಮಾತನಾಡಿದ್ದ ಬಗ್ಗೆ ನ್ಯಾಯಾಲಯದಲ್ಲಿ ತೀರ್ಪು ಸಿಕ್ಕದೆ. ಅವರನ್ನು ರಾಜಕೀಯದಲ್ಲಿ ಮುಗಿಸಬೇಕು ಅಂತಾ ದೊಡ್ಡ ಷಡ್ಯಂತ್ರ ನಡೆಸಲಾಗುತ್ತಿದೆ. ಬರೋಬ್ಬರಿ 7 ಲಕ್ಷ ಮತಗಳ ಅಂತರದಲ್ಲಿ ಗೆದ್ದುಬಂದ ಸಂಸದರನ್ನು ರಾತ್ರೋ ರಾತ್ರಿ ಇಳಿಸಿದ್ದಾರೆ. ಆದರೆ, ಅವರಿಗೆ ಭಾರತ್‌ ಜೋಡೋ ಯಾತ್ರೇಲಿ ಸಿಕ್ಕಿರೋ ಪ್ರೀತಿ ಅವರ ಮೇಲಿದೆ. ಅವರು ಜೋಡೋ ಯಾತ್ರೆಲಿ ಎಲ್ಲೆಲ್ಲಿ ಹೋಗಿದ್ದಾರೆ ಎಲ್ಲಾ ಕಡೆಯೂ ಗೆದ್ದಿದ್ದೇವೆ ಎಂದು ಹೇಳಿದರು.

 

 

ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಪತ್ರಿಕಾಗೋಷ್ಠಿ ಮುಖ್ಯಾಂಶಗಳು:

ರಾಹುಲ್ ಗಾಂಧಿ ಅವರ ರಾಜಕೀಯ ಜೀವನ ಮುಗಿಸಲು ಬಿಜೆಪಿ ನಡೆಸುತ್ತಿರುವ ಷಡ್ಯಂತ್ರವನ್ನು ಖಂಡಿಸಿ ಜುಲೈ 12ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೂ ಸ್ವಾತಂತ್ರ್ಯ ಉದ್ಯಾನವನದಲ್ಲಿ ಮೌನ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಈ ಪ್ರತಿಭಟನೆಯಲ್ಲಿ ನಾನು, ಮುಖ್ಯಮಂತ್ರಿಗಳು ಹಾಗೂ ಎಐಸಿಸಿ ಪ್ರಧಾನಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಸೇರಿದಂತೆ ಎಲ್ಲಾ ಮಂತ್ರಿಗಳು, ಸಂಸದರು, ಶಾಸಕರು, ಕಾರ್ಯಕರ್ತರು, ಬ್ಲಾಕ್ ಕಾಂಗ್ರೆಸ್, ಮುಂಚೂಣಿ ಘಟಕದ ಅಧ್ಯಕ್ಷರು, ಕೌನ್ಸಿಲರ್ ಗಳು ಭಾಗವಹಿಸುತ್ತೇವೆ.

ರಾಹುಲ್ ಗಾಂಧಿ ಅವರು ಎಂದಿಗೂ ದೇಶದ ಸ್ವಾಭಿಮಾನಕ್ಕೆ ಧಕ್ಕೆ ತಂದಿಲ್ಲ. ರಾಜ್ಯದಲ್ಲಿ ಅವರು ಮಾಡಿದ ಭಾಷಣ ಮುಂದಿಟ್ಟುಕೊಂಡು ರಾಜಕೀಯವಾಗಿ ಅವರನ್ನು ಮುಗಿಸುವ ಷಡ್ಯಂತ್ರ ನಡೆಯುತ್ತಿದ್ದು, ನಾವು ಅದನ್ನು ಖಂಡಿಸುತ್ತೇವೆ. ದೇಶದ ಪರವಾಗಿ, ಸತ್ಯದ ಪರವಾಗಿ ಧ್ವನಿ ಎತ್ತುತ್ತಿರುವ ರಾಹುಲ್ ಗಾಂಧಿ ಅವರ ಪರವಾಗಿ ಇಡೀ ದೇಶ ಹಾಗೂ ವಿರೋಧ ಪಕ್ಷಗಳು ನಿಲ್ಲುವ ಸಂದೇಶ ರವಾನಿಸಬೇಕಾಗಿದೆ.

ಭಾರತ ಜೋಡೋ ಯಾತ್ರೆಯಲ್ಲಿ ಅವರಿಗೆ ಜನರಿಂದ ಸಿಕ್ಕ ಪ್ರೀತಿ ವಿಶ್ವಾಸ, ಕರ್ನಾಟಕ ರಾಜ್ಯದಲ್ಲಿ ಅವರಿಗೆ ಸಿಕ್ಕ ಭವ್ಯ ಯಶಸ್ಸು ಸಹಿಸಲಾಗದೇ ರಾತ್ರೋರಾತ್ರಿ ಅವರ ಸಂಸತ್ ಸದಸ್ಯತ್ವವನ್ನು ಅನರ್ಹಗೊಳಿಸಲಾಗಿದೆ. ರಾಜ್ಯದಲ್ಲಿ ಅವರು ಯಾತ್ರೆ ಮಾಡಿದ ಮಾರ್ಗದ ಎಲ್ಲಾ ಕ್ಷೇತ್ರಗಳಲ್ಲಿ ಪಕ್ಷ ಗೆಲುವು ಸಾಧಿಸಿದೆ.

ಮುಂದೆ ಅವರಿಗೆ ದೇಶದ ಪೂರ್ವದಿಂದ ಪಶ್ಚಿಮದವರೆಗೆ ಯಾತ್ರೆ ಮಾಡುವ ಸಲಹೆ ಬಂದಿದ್ದು, ಅವರ ಈ ಯಶಸ್ಸು, ಜನಪ್ರಿಯತೆ ಸಹಿಸಲಾಗದೇ ಬಿಜೆಪಿಯವರು ಈ ಷಡ್ಯಂತ್ರ ರೂಪಿಸಿದ್ದಾರೆ.

ಹೀಗಾಗಿ ಎಐಸಿಸಿಸ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ದೇಶದ ಎಲ್ಲಾ ಪ್ರಮುಖ ಕೇಂದ್ರಗಳಲ್ಲಿ ಮೌನ ಪ್ರತಿಭಟನೆ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ. ರಾಜ್ಯದಲ್ಲಿ ಪಕ್ಷದ ಎಲ್ಲ ಕಾರ್ಯಕರ್ತರು ಈ ಪ್ರತಿಭಟನೆಯಲ್ಲಿ ಭಾಗವಹಿಸಬೇಕು ಎಂದು ಈ ಮೂಲಕ ಮನವಿ ಮಾಡುತ್ತೇನೆ.

ಇನ್ನು ಜುಲೈ 17- 18ರಂದು ದೇಶದ ವಿರೋಧ ಪಕ್ಷಗಳ ನಾಯಕರ ಸಭೆ ಬೆಂಗಳೂರಿನಲ್ಲಿ ನಡೆಯಲಿದ್ದು, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಈ ಸಭೆಯಲ್ಲಿ ಭಾಗವಹಿಸಬೇಕು ಎಂದು ಆಹ್ವಾನ ನೀಡಿದ್ದು, ಅವರು ಕೂಡ ಭಾಗವಹಿಸುವ ಸಂದೇಶ ಬಂದಿದೆ. ಈ ಸಭೆಯಲ್ಲಿ ಭಾಗವಹಿಸುತ್ತಿರುವ ದೇಶದ ಎಲ್ಲಾ ವಿರೋಧ ಪಕ್ಷಗಳ ನಾಯಕರನ್ನು ನಾವು ಸ್ವಾಗತಿಸುತ್ತೇವೆ.

*ಪ್ರಶ್ನೋತ್ತರ*

ಮುಸ್ಲಿಂ ಮೀಸಲಾತಿ ರದ್ದು ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ಈ ವಿಚಾರವಾಗಿ ಇಂದು ಪ್ರಮುಖ ದಿನಪತ್ರಿಕೆಗಳು ಕೂಲಂಕುಶವಾಗಿ ಅಧ್ಯಯನ ಮಾಡಿ ವರದಿ ಮಾಡಿದ್ದು, ನಾವು ಈ ವಿಚಾರದಲ್ಲಿ ಸುದೀರ್ಘವಾಗಿ ಚರ್ಚೆ ಮಾಡುತ್ತೇವೆ. ಸೂಕ್ತ ಮಾಹಿತಿ ಪಡೆದ ನಂತರ ಸರ್ಕಾರದ ಅಭಿಪ್ರಾಯ ತಿಳಿಸುತ್ತೇನೆ’ ಎಂದು ತಿಳಿಸಿದರು.

ಭಾರತೀಯ ಆಹಾರ ನಿಗಮದ ಹರಾಜಿನಲ್ಲಿ ಹೆಚ್ಚಿನ ರಾಜ್ಯಗಳು ಅಕ್ಕಿ ಖರೀದಿಗೆ ಆಸಕ್ತಿ ವಹಿಸದ ವಿಚಾರವಾಗಿ ಕೇಳಿದ ಪ್ರಶ್ನೆಗೆ, “ನಾವು ಪುಕ್ಸಟ್ಟೆಯಾಗಿ ಅಕ್ಕಿ ಕೇಳುತ್ತಿಲ್ಲ. ನಮ್ಮ ಅಕ್ಕಿ ಎಲ್ಲೂ ಹೋಗುವುದಿಲ್ಲ. ವಿರೋಧ ಪಕ್ಷದವರ ಮಾರ್ಗದರ್ಶನದಂತೆ ಹಣ ಹಾಕುತ್ತಿದ್ದೇವೆ. ಅವರು ನಮಗೆ ಮಾರ್ಗದರ್ಶನ ಎಚ್ಚರಿಕೆ ನೀಡುತ್ತಿದ್ದು, ನಾವು ಅವರ ಸಲಹೆ ಅಭಿಪ್ರಾಯಕ್ಕೆ ಗೌರವ ನೀಡಬೇಕು” ಎಂದು ತಿಳಿಸಿದರು.

ಇಂದಿರಾ ಕ್ಯಾಂಟೀನ್ ಭೇಟಿ ವಿಚಾರವಾಗಿ ಕೇಳಿದಾಗ, “ನಾನು ಎಲ್ಲಾ ಶಾಸಕರಿಗೆ ಪತ್ರ ಬರೆದು, ವಾರಕ್ಕೊಮ್ಮೆ ಇಂದಿರಾ ಕ್ಯಾಟೀನ್ ಗೆ ಭೇಟಿ ನೀಡಿ ಪರಿಶೀಲನೆ ಮಾಡಬೇಕು ಎಂದು ಸೂಚಿಸುತ್ತೇನೆ. ನಾನು ದಾಸರಹಳ್ಳಿಯಲ್ಲಿರುವ ತಂಗುದಾಣಕ್ಕೂ ಭೇಟಿ ನೀಡಬೇಕು ಎಂದು ಆಲೋಚಿಸಿದ್ದೆ. ಅದನ್ನು ಬಂದ್ ಮಾಡಿದ್ದಾರೆ ಎಂಬ ಮಾಹಿತಿ ಬಂದಿದೆ. ಮುಂದಿನ ದಿನಗಳಲ್ಲಿ ಬೇರೆ ಬೇರೆ ಪ್ರದೇಶಗಳಿಗೆ ಭೇಟಿ ನೀಡುತ್ತೇನೆ” ಎಂದು ತಿಳಿಸಿದರು.

ಜೈನಮುನಿ ಹತ್ಯೆ ಪ್ರಕರಣ ಸಿಬಿಐಗೆ ನೀಡಬೇಕು ಎಂಬ ಮಾಜಿ ಗೃಹಮಂತ್ರಿಗಳ ಹೇಳಿಕೆ ಬಗ್ಗೆ ಕೇಳಿದಾಗ, ‘ಈ ವಿಚಾರವಾಗಿ ಗೃಹಸಚಿವರು ಉತ್ತರ ನೀಡಲಿದ್ದಾರೆ’ ಎಂದು ತಿಳಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ