Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಯನಾಡು ತೊರೆಯಲು ಮುಂದಾದ ರಾಹುಲ್ ?

 

ಮಲಪ್ಪುರಂ: ಲೋಕಸಭಾ ಚುನಾವಣೆಯಲ್ಲಿ ವಯನಾಡು ಮತ್ತು ರಾಯ್‌ಬರೇಲಿಯಲ್ಲಿ ಎರಡೂ ಕ್ಷೇತ್ರಗಳಲ್ಲೂ ಗೆದ್ದಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಕೇರಳದ ವಯನಾಡು ಕ್ಷೇತ್ರ ತೊರೆಯುವ ಸಾಧ್ಯತೆ ದಟ್ಟವಾಗಿದೆ.

ತಮ್ಮನ್ನು ಗೆಲ್ಲಿಸಿದ ವಯನಾಡು ಮತದಾರರಿಗೆ ಕೃತಜ್ಞತೆ ಸಲ್ಲಿಸುವ ಸಲುವಾಗಿ ರಾಹುಲ್‌ ಬುಧವಾರ ಇಲ್ಲಿ ರೋಡ್‌ಶೋ ನಡೆಸಿದರು. ಬಳಿಕ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ವಯನಾಡು ಜನತೆ ಮತ್ತೆ ನನ್ನ ಕೈ ಹಿಡಿದಿದ್ದು, ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿದ್ದೀರಿ. ಎಲ್ಲರಿಗೂ ಧನ್ಯವಾದಗಳು. ನಾನು ಈಗ ಯಾವ ಕ್ಷೇತ್ರವನ್ನು ಉಳಿಸಿಕೊಳ್ಳಬೇಕು ಎಂಬುದು ತಿಳಿಯುತ್ತಿಲ್ಲ. ವಯನಾಡು, ರಾಯ್‌ಬರೇಲಿ ಯಾವುದಾದರೂ ಒಂದು ಕ್ಷೇತ್ರವನ್ನು ಉಳಿಸಿಕೊಳ್ಳಲು ನಾನು ನಿರ್ಧಾರ ತೆಗೆದುಕೊಂಡರೆ ಎರಡೂ ಕ್ಷೇತ್ರದ ಜನತೆ ನನ್ನ ನಿರ್ಧಾರವನ್ನು ಸಂತೋಷವಾಗಿ ಸ್ವೀಕರಿಸುತ್ತಾರೆ ಎಂದು ನಾನು ಭಾವುಸುತ್ತೇನೆ ಎಂದರು.

ಆದರೆ ಇದೇ ಕಾರ್ಯಕ್ರಮದಲ್ಲಿ ಮಾತನಾಡಿದ ಕೇರಳ ರಾಜ್ಯ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಕೆ.ಸುಧಾಕರನ್‌, ದೇಶ ಮುನ್ನಡೆಸಬೇಕಾದ ರಾಹುಲ್‌ ಗಾಂಧಿ ವಯನಾಡಲ್ಲೇ ಇರಬೇಕೆಂದು ನಾವು ಬಯಸುವುದು ಸರಿಯಲ್ಲ. ಈ ವಿಷಯದಲ್ಲಿ ನಾವು ದುಃಖ ಪಡಬಾರದು ಎನ್ನುವ ಮೂಲಕ ರಾಹುಲ್‌ ವಯನಾಡು ತೊರೆದು ಉತ್ತರಪ್ರದೇಶ ಉಳಿಸಿಕೊಳ್ಳುವ ಸಾಧ್ಯತೆ ಇದೆ ಎಂಬ ಸುಳಿವು ನೀಡಿದ್ದಾರೆ.

ಗಾಂಧಿ ಕುಟುಂಬದ ಸಾಂಪ್ರದಾಯಿಕ ಕ್ಷೇತ್ರ, ತೊರೆದರೆ ಗಾಂಧಿ ಕುಟುಂಬ ನಂಟು ತಪ್ಪುತ್ತದೆ.
ಯುಪಿಯಲ್ಲಿ ಇಂಡಿ ಕೂಟ ಉತ್ತಮ ಸಾಧನೆ ಮಾಡಿದ್ದು, ಅದನ್ನು ಕಾಪಾಡಿಕೊಳ್ಳೂವ ಹೊಣೆ ಇದೆ.
ವಯನಾಡಿಗೆ ಹೋಲಿಸಿದರೆ ದೆಹಲಿಗೆ ಸಮೀಪದ ರಾಯ್‌ಬರೇಲಿಗೆ ಹೋಗಿಬರುವುದು ಸುಲಭವಾಗುತ್ತದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ