Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕರ್ನಾಟಕದ 11 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಮುನ್ಸೂಚನೆ

 

ಬೆಂಗಳೂರು : ಕರ್ನಾಟಕದ 11 ಜಿಲ್ಲೆಗಳಲ್ಲಿ ಇಂದು (ಮಾರ್ಚ್​ 27) ಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಾದ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನ ಹಾವೇರಿ ಜಿಲ್ಲೆಗಳಾದ ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದ್ದು, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬಾಗಲಕೋಟೆ, ಬೀದರ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಒಣಹವೆ ಇರಲಿದೆ.
ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್​ರಾಕ್, ಜೋಯಿಡಾ, ಕುಮಟಾ, ಯಲ್ಲಾಪುರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಕಳ, ಬೆಳಗಾವಿ ಜಿಲ್ಲೆಯ ಸಂಕೇಶ್ವರ, ಗದಗ ಜಿಲ್ಲೆಯ ಶಿರಹಟ್ಟಿ, ಲಕ್ಷ್ಮೀಪುರ ಹಾಗೂ ಧಾರವಾಡ, ಕೆಆರ್ ನಗರ, ಹುಂಚದಕಟ್ಟೆ, ಶೃಂಗೇರಿ, ಜಯಪುರ, ಸಾಗರದಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಧಾರವಾಡದಲ್ಲಿ 18.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ