Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕರ್ನಾಟಕದಲ್ಲಿ ಆಗಸ್ಟ್‌ 4ರಿಂದ ಮತ್ತೆ ಮಳೆ ಹೆಚ್ಚಳ : ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌, ಕೆಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌

ಬೆಂಗಳೂರು: ರಾಜ್ಯದಲ್ಲಿ ಕೊಂಚ ವಿರಾಮ ನೀಡಿರುವ ಮಳೆ, ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಮತ್ತೆ ಹೆಚ್ಚಾಗುವ ಮುನ್ಸೂಚನೆ ಇದೆ. ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ ಆಗಸ್ಟ್ 3 ರಿಂದ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ನೀಡಲಾಗಿದೆ.

ಆಗಸ್ಟ್ 4 ರಂದು ಕರ್ನಾಟಕದಾದ್ಯಂತ ಸಾಧಾರಣ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಬಹುತೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಆಗಸ್ಟ್ 5 ರಂದು ಬೆಂಗಳೂರು ನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರಕ್ಕೆ ಅತಿ ಭಾರಿ ಮಳೆಯ ಹಿನ್ನೆಲೆ ಆರೆಂಜ್ ಅಲರ್ಟ್‌ ಕೊಡಲಾಗಿದೆ. ಆಗಸ್ಟ್ 6 ರಂದು ಹಾಸನ ಹಾಗೂ ಕೊಡಗಿಗೆ ಭಾರಿ ಮಳೆ ಆಗಲಿದೆ.
ಆಗಸ್ಟ್ 3ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಲಘು ಅಥವಾ ಸಾಧಾರಣ ಮಳೆಯಾಗಲಿದ್ದು, ಉತ್ತರ ಒಳನಾಡಿನ ಬೀದರ, ಕಲಬುರಗಿ, ಕೊಪ್ಪಳ, ಗದಗ ಮತ್ತು ಧಾರವಾಡ , ಬಾಗಲಕೋಟೆ, ಬೆಳಗಾವಿ, ಹಾವೇರಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆ ಆಗಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಾಮರಾಜನಗರ, ಮಂಡ್ಯ, ಮೈಸೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಅನೇಕ ಕಡೆಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಬಿರುಗಾಳಿ (40-50 ಕಿ.ಮೀ ವೇಗದಲ್ಲಿ) ಬೀಸುವ ಸಾಧ್ಯತೆಯಿದೆ.

ಆಗಸ್ಟ್ 4 ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ನಿರಂತರ ಗಾಳಿ (30-40 ಕಿ.ಮೀ ವೇಗದಲ್ಲಿ) ಸಹಿತ ಲಘು ಅಥವಾ ಸಾಧಾರಣ ಮಳೆಯಾಗಲಿದ್ದು, ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಬಿರುಗಾಳಿ (40-50 ಕಿ.ಮೀ ವೇಗದಲ್ಲಿ) ಸಹಿತ ಲಘು ಅಥವಾ ಸಾಧಾರಣ ಮಳೆ ಆಗಲಿದೆ. ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಬಿರುಗಾಳಿ (40-50 ಕಿ.ಮೀ ವೇಗದಲ್ಲಿ) ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು, ಕೊಡಗು, ಹಾಸನ ಮತ್ತು ರಾಮನಗರ ಜಿಲ್ಲೆಗಳಲ್ಲಿ ಅನೇಕ ಕಡೆಗಳಲ್ಲಿ ಗುಡುಗು ಸಹಿತ ಬಿರುಗಾಳಿ (40-50 ಕಿ.ಮೀ ವೇಗದಲ್ಲಿ) ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಆಗಸ್ಟ್ 5ರಂದು ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಗುಡುಗು-ಬಿರುಗಾಳಿ ಸಹಿತ (40-50 ಕಿ.ಮೀ ವೇಗದಲ್ಲಿ) ಸಹಿತ ಭಾರಿ ಅಥವಾ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಮಂಡ್ಯ, ಮೈಸೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಬಿರುಗಾಳಿ (40-50 ಕಿ.ಮೀ ವೇಗದಲ್ಲಿ) ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಆಗಸ್ಟ್‌ 6ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅತಿ ಭಾರಿ ಮಳೆಯಾಗಲಿದ್ದು, ಆರೆಂಜ್‌ ಅಲರ್ಟ್‌ ನೀಡಲಾಗಿದೆ. ಮಂಡ್ಯ, ಮೈಸೂರು, ರಾಮನಗರ, ಹಾಸನ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ತಿಳಿಸಲಾಗಿದ್ದು, ಯೆಲ್ಲೋ ಅಲರ್ಟ್‌ ನೀಡಲಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ