ನವದೆಹಲಿ: ಮುಂಬರುವ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ಹೈಕಮಾಂಡ್ ಗುರುವಾರ (ಜೂನ್ 4) ತನ್ನ 7 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. ಈ ಪಟ್ಟಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕರ್ನಾಟಕದಿಂದ ಮತ್ತೊಮ್ಮೆ ಕಣಕ್ಕಿಳಿಸಲಾಗಿದ್ದು, ಅವರೊಂದಿಗೆ ಪಕ್ಷದ ಪ್ರಮುಖ ನಾಯಕರಾದ ಪವನ್ ಖೇರಾ ಮತ್ತು ಮನ್ಸೂರ್ ಅಲಿ ಖಾನ್ ಅವರಿಗೂ ಕರ್ನಾಟಕದಿಂದಲೇ ಟಿಕೆಟ್ ನೀಡಲಾಗಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ ಈ ಅಭ್ಯರ್ಥಿಗಳ ಅಧಿಕೃತ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಜೂನ್ 18 ರಂದು ದೇಶದ ವಿವಿಧ ರಾಜ್ಯಗಳ ಒಟ್ಟು 24 ರಾಜ್ಯಸಭಾ ಸ್ಥಾನಗಳಿಗೆ ಮತದಾನ ನಡೆಯಲಿದ್ದು, ಅದಕ್ಕೂ ಮುನ್ನ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.
ಕರ್ನಾಟಕ, ಆಂಧ್ರಪ್ರದೇಶ, ಗುಜರಾತ್
ತಲಾ 4 ಸ್ಥಾನಗಳು, ಮಧ್ಯಪ್ರದೇಶ, ರಾಜಸ್ಥಾನತಲಾ 3 ಸ್ಥಾನಗಳು, ಜಾರ್ಖಂಡ್2 ಸ್ಥಾನಗಳು, ಮಣಿಪುರ, ಮೇಘಾಲಯ, ಅರುಣಾಚಲ ಪ್ರದೇಶ, ಮಿಜೋರಾಂತಲಾ 1 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಕಾಂಗ್ರೆಸ್ ಬಿಡುಗಡೆ ಮಾಡಿರುವ ಪಟ್ಟಿಯ ಪ್ರಕಾರ, ಕರ್ನಾಟಕದ ಮೂವರು ನಾಯಕರ ಜೊತೆಗೆ ಇತರ ರಾಜ್ಯಗಳಿಗೂ ಪ್ರಮುಖ ಮುಖಗಳನ್ನು ಆಯ್ಕೆ ಮಾಡಲಾಗಿದೆ:
ಕರ್ನಾಟಕ: ಮಲ್ಲಿಕಾರ್ಜುನ ಖರ್ಗೆ, ಪವನ್ ಖೇರಾ, ಮನ್ಸೂರ್ ಅಲಿ ಖಾನ್
ಮಧ್ಯಪ್ರದೇಶ: ಮೀನಾಕ್ಷಿ ನಟರಾಜನ್ (ಮಾಜಿ ಸಂಸದೆ)
ತಮಿಳುನಾಡು: ಪ್ರವೀಣ ಚಕ್ರವರ್ತಿ (ಕಾಂಗ್ರೆಸ್‌ನ ದತ್ತಾಂಶ ವಿಶ್ಲೇಷಣೆ ಮತ್ತು ವೃತ್ತಿಪರರ ವಿಭಾಗದ ಮುಖ್ಯಸ್ಥ)
ರಾಜಸ್ಥಾನ: ನೀರಜ್ ಡಾಂಗಿ
ಜಾರ್ಖಂಡ್: ಪ್ರಣವ್ ಝಾ ಅವರಿಗೆ ಟಿಕೆಟ್ ನೀಡಲಾಗಿದೆ.
ರಾಜ್ಯಸಭಾ ಚುನಾವಣೆ 2026: ಸಂಪೂರ್ಣ ಚಿತ್ರಣ
ಹಾಲಿ ಸಂಸದರ ನಿವೃತ್ತಿಯಿಂದ ತೆರವಾಗುತ್ತಿರುವ 24 ಸ್ಥಾನಗಳ ಭರ್ತಿಗಾಗಿ ಚುನಾವಣಾ ಆಯೋಗವು ಈಗಾಗಲೇ ವೇಳಾಪಟ್ಟಿ ಪ್ರಕಟಿಸಿದೆ. ಹಾಲಿ ಸದಸ್ಯರ ನಿವೃತ್ತಿ ಅವಧಿಯು ಜೂನ್ 21 ರಿಂದ ಜುಲೈ 19 ರ ನಡುವೆ ವಿವಿಧ ದಿನಾಂಕಗಳಲ್ಲಿದ್ದು, ಒಟ್ಟು 10 ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ.
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮಲ್ಲಿಕಾರ್ಜುನ ಖರ್ಗೆ ಮತ್ತು ದಿಗ್ವಿಜಯ ಸಿಂಗ್ ಸೇರಿದಂತೆ ಹಲವು ಹಿರಿಯ ನಾಯಕರ ಅವಧಿ ಮುಕ್ತಾಯಗೊಳ್ಳುತ್ತಿದೆ.
ರಾಜ್ಯಸಭೆಗೆ ಜೂನ್ 18ರಂದು ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಕೊನೆಯ ಜೂನ್ 8 ಕೊನೆಯ ದಿನವಾಗಿದೆ.