Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮಗದೊಮ್ಮೆ ಬೆಳಗಾವಿ ಗ್ರಾಮೀಣದಲ್ಲಿ ಕೈ ಶಾಸಕಿಯನ್ನು ಸೋಲಿಸಲು ಕರೆ ನೀಡಿದ ರಮೇಶ ಜಾರಕಿಹೊಳಿ !

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನಾವು ಬೆಳಗಾವಿ ಗ್ರಾಮೀಣದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲೇಬೇಕು. ಇಲ್ಲವಾದರೆ ನಿಮ್ಮ ಜಮೀನುಗಳೆಲ್ಲ ಹೋಗುತ್ತದೆ. ಬೆಂಗಳೂರು ಸುತ್ತಮುತ್ತ ಅವರ ಬಾಸ್ ಇದ್ದಾರಲ್ಲ. ಹೇಗೆ ಅತಿಕ್ರಮಣ ಮಾಡಿಕೊಂಡಿದ್ದರೋ ಅದೇ ರೀತಿ ಇಲ್ಲಿಯೂ ಶಾಸಕರ ಸಂಬಂಧಿಗಳು ಸಹ ಬಂದರೆ ನಿಮ್ಮ ಹೊಲವನ್ನು ಬಿಡಬೇಕಾಗುತ್ತದೆ. ಆದಕಾರಣ ನೀವು ಯಾವುದೇ ಆಮಿಷಕ್ಕೂ ಈ ಬಾರಿ ಬಲಿಯಾಗಬೇಡಿ ಎಂದು ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಮತದಾರರಲ್ಲಿ ಶಾಸಕ ರಮೇಶ್ ಜಾರಕಿಹೊಳಿ ಅವರು ಮನವಿ ಮಾಡಿಕೊಂಡರು.

ಕರ್ನಾಟಕ ಹಾಗೂ ಬೆಳಗಾವಿ ಗ್ರಾಮೀಣ ಮತಕ್ಷೇತ್ರಕ್ಕೆ ಒಳಿತಾಗಬೇಕಾದರೆ ಬೆಳಗಾವಿ ಗ್ರಾಮೀಣ ಶಾಸಕಿ ಈ ಬಾರಿ ಸೋಲಲೇ ಬೇಕಾಗಿದೆ. ಉಚಗಾವಿಯಲ್ಲಿ ಮತ್ತೊಂದು ಸಮಾವೇಶ ನಡೆಸುತ್ತೇವೆ. ನಂತರ ಬಿಜೆಪಿ ವತಿಯಿಂದ ಪಕ್ಷದ ಸಮಾವೇಶ ಮಾಡುತ್ತೇವೆ. ಪಕ್ಷ ಸೂಚಿಸಿದ ಉತ್ತಮ ಅಭ್ಯರ್ಥಿಯನ್ನು ಈ ಬಾರಿ ಗೆಲ್ಲಿಸೋಣ ಎಂದು ಅವರು ವಿನಂತಿಸಿಕೊಂಡರು.

ಬೆಳಗಾವಿ : ಕರ್ನಾಟಕ ವಿಧಾನಸಭಾ ಚುನಾವಣೆ ದಿನಕ್ಕೆ ಕಾವೇರತೊಡಗಿದೆ. ಅದರಲ್ಲೂ ಬೆಳಗಾವಿ ಜಿಲ್ಲೆಯಲ್ಲಿ ಚುನಾವಣೆ ದಿನ ಹತ್ತಿರವಾದಂತೆ ಪರಸ್ಪರ ವಾಗ್ದಾಳಿ ತಾರಕಕ್ಕೆ ಏರುವ ಸಾಧ್ಯತೆ ನಿಚ್ಚಳವಾಗಿದೆ. ಅದರಲ್ಲೂ ಈ ಬಾರಿ ಬೆಳಗಾವಿ ಗ್ರಾಮೀಣ ಮತ ಕ್ಷೇತ್ರ ಕದನ ಕಣವಾಗುವ ಎಲ್ಲಾ ಸಾಧ್ಯತೆ ಇದೆ.

ಬೆಳಗಾವಿ ಗ್ರಾಮೀಣ ಕ್ಷೇತ್ರವನ್ನು ಇದೀಗ ಮಾಜಿ ಸಚಿವ ಹಾಗೂ ಗೋಕಾಕ ಹಾಲಿ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅತ್ಯಂತ ಪ್ರತಿಷ್ಠೆಯನ್ನಾಗಿ ಪರಿಗಣಿಸಿದ್ದಾರೆ. ಇಲ್ಲಿ ಕಾಂಗ್ರೆಸ್ ಗೆಲ್ಲಲೇ ಬಾರದು ಎಂದು ಅವರು ಪಣತೊಟ್ಟಿದ್ದು ಹಾಲಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಸೋಲಿಸುವ ನಿಟ್ಟಿನಲ್ಲಿ ಗ್ರಾಮೀಣ ಮತಕ್ಷೇತ್ರಾದ್ಯಂತ ಸರಣಿ ಸಮಾವೇಶಗಳನ್ನು ನಡೆಸುವ ಮೂಲಕ ಎಚ್ಚರಿಕೆ ರವಾನಿಸಿದ್ದಾರೆ.

ಗುರುವಾರ ಹಿರೇಬಾಗೇವಾಡಿಯಲ್ಲಿ ರಮೇಶ ಜಾರಕಿಹೊಳಿ ಅಭಿಮಾನಿಗಳ ಬಳಗದವರು ಏರ್ಪಡಿಸಿದ್ದ ಅಭಿಮಾನದ ಸಮಾವೇಶ ಉದ್ದೇಶಿಸಿ ತಮ್ಮ ರಾಜಕೀಯ ವಿರೋಧಿಗಳ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದರು.

ರಮೇಶ ಜಾರಕಿಹೊಳಿ ಮಾತನಾಡಿ, ಸುಳೇಬಾವಿ ಹಾಗೂ ಹಿಂಡಲಗಾದಲ್ಲಿ ನಡೆದ
ಎರಡು ಸಮಾವೇಶದಲ್ಲಿ ನಾನು ಮಾತನಾಡಿರುವೆ. ಆ ಸಂದರ್ಭದಲ್ಲಿ ಕಾಂಗ್ರೆಸ್ಸಿಗರು ನನ್ನ ವಿರುದ್ಧ ರಾಜ್ಯಮಟ್ಟದಲ್ಲಿ ವಾಗ್ದಾಳಿ ನಡೆಸಿದರು. ನನ್ನ ಮೇಲೆ ದೂರು ಸಹ ದಾಖಲು ಮಾಡಿದರು.ಕಾಂಗ್ರೆಸ್ ಪಕ್ಷ ಇಂದು ತೀರಾ ಕೆಳಮಟ್ಟಕ್ಕೆ ಇಳಿದಿದೆ. ನಾನು ಬಹಳ ಕಳಪೆ ಮಟ್ಟದ ಭಾಷಣಕ್ಕೆ ಹೋಗುವುದಿಲ್ಲ. ಆದರೆ ಅವರಿಗೆ ಉತ್ತರ ಕೊಡಲೇಬೇಕಾಗಿದೆ. ಬೆಳಗಾವಿ ಗ್ರಾಮೀಣ ಮತ ಕ್ಷೇತ್ರದ ಶಾಸಕರ ಬಗ್ಗೆ ವೈಯಕ್ತಿಕವಾಗಿ ನಾನು ಮಾತನಾಡಲಾರೆ. ರಸ್ತೆ ಅಭಿವೃದ್ಧಿ ಮಾತ್ರ ಕ್ಷೇತ್ರದ ಅಭಿವೃದ್ಧಿ ಕೆಲಸವಲ್ಲ. ಪ್ರತಿ ವರ್ಷ ಶಾಸಕರ ಅನುದಾನ ಬರುತ್ತದೆ. ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಯಾವುದೇ ಶಾಸಕರು ಇರಲಿ. ಸರಕಾರ ಅನುದಾನ ಬಿಡುಗಡೆಗೊಳಿಸುತ್ತದೆ. ಈ ನಿಟ್ಟಿನಲ್ಲಿ ಬೆಳಗಾವಿ ಗ್ರಾಮೀಣ ಮತಕ್ಷೇತ್ರಕ್ಕೆ ಸಹ ಸರಕಾರ ಅನುದಾನ ಬಿಡುಗಡೆ ಮಾಡಿದೆ.

ಬೆಳಗಾವಿ ಗ್ರಾಮೀಣ ಮತ ಕ್ಷೇತ್ರದಲ್ಲಿ ಅಭಿವೃದ್ಧಿಪರ ಕೆಲಸಗಳಿಗೆ ನಾನು ಎಂದಿಗೂ ಅಡ್ಡಿ ಮಾಡಿಲ್ಲ ಎಂದು ಹೇಳಿದರು. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನಾವು ಈ ಕ್ಷೇತ್ರವನ್ನು ಗೆಲ್ಲಲೇ ಬೇಕಾಗಿದೆ. ಬಿಜೆಪಿಯ ವರಿಷ್ಠರು ಬೆಳಗಾವಿ ಗ್ರಾಮೀಣಕ್ಕೆ ಅತ್ಯುತ್ತಮ ಅಭ್ಯರ್ಥಿಯನ್ನು ನೀಡಬೇಕು. ನಾವು ಇಲ್ಲಿ ಬಿಜೆಪಿ ಅಭ್ಯರ್ಥಿಯ ಗೆಲುವಿಗೆ ಪಣತೊಡೋಣ ಎಂದು ಹೇಳಿದರು.

ಮಹಾ ನಾಯಕರು ಇರಲಿ ಅಥವಾ ಸ್ಥಳೀಯ ಶಾಸಕರ ಇರಲಿ. ಎಷ್ಟು ಕೆಳಮಟ್ಟದ ರಾಜಕಾರಣ ಮಾಡುತ್ತಾರೆ. ಬೆಳಗಾವಿ ಗ್ರಾಮೀಣ ಶಾಸಕರನ್ನು ವೀರರಾಣಿ ಚೆನ್ನಮ್ಮಳಿಗೆ ಹೋಲಿಸುವುದು ಎಂತಹ ದುರ್ದೈವ. ಈ ಮೂಲಕ ಚೆನ್ನಮ್ಮಳಿಗೆ ಅಪಮಾನ ಮಾಡುವುದು ಸಹಿಸುವುದಿಲ್ಲ. ಈ ಅಮ್ಮನಿಗೆ ಕನಿಷ್ಠ ಜ್ಞಾನವೂ ಸಹ ಇಲ್ಲ ಎಂದು ಪರೋಕ್ಷವಾಗಿ ಬೆಳಗಾವಿ ಗ್ರಾಮೀಣ ಶಾಸಕರ ವಿರುದ್ಧ ಕಿಡಿಕಾರಿದರು.

ಶಾಸಕರ ಸ್ಥಾನಕ್ಕೆ ನಾವು ಗೌರವ ಕೊಡೋಣ.
ಆದರೆ ಅವರು ರಾಜ್ಯ ಸರ್ಕಾರದ ಕಾರ್ಯಕ್ರಮಗಳನ್ನು ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ ಎಂಬಂತೆ ನಡೆಸಲು ಬಿಡೆವು ಎಂದು ತಿಳಿಸಿದರು. ಕಳೆದ ನಾಲ್ಕು ವರ್ಷಗಳಿಂದ ಇಲ್ಲಿ ಬಿಜೆಪಿ ಸಂಘಟನೆ ಕುಂಠಿತವಾಗಿತ್ತು. ಆದರೆ ಮೂರ್ನಾಲ್ಕು ತಿಂಗಳಿನಿಂದ ಬಿಜೆಪಿ ಸಂಘಟನೆ ಬಲಿಷ್ಠವಾಗಿದೆ. ನಾವು ಅತ್ಯಂತ ಸಮರ್ಥ್ಯವಾಗಿ ಕೆಲಸ ಮಾಡೋಣ. ರಾಜ್ಯದಲ್ಲಿ ಮಾದರಿಯಾಗಿ ಬೆಳಗಾವಿ ಗ್ರಾಮೀಣ ಮತಕ್ಷೇತ್ರದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸೋಣ ಎಂದು ಅವರು ಮನವಿ ಮಾಡಿದರು.

ಸಭೆಯಲ್ಲಿ ಮಾತನಾಡಿದ ವಿವಿಧ ನಾಯಕರು ರಮೇಶ ಜಾರಕಿಹೊಳಿ ಅವರು ಸೂಚಿಸುವ ಅಭ್ಯರ್ಥಿಯ ಗೆಲುವಿಗೆ ಪಣತೊಡುವುದಾಗಿ ವಾಗ್ದಾನ ನೀಡಿದರು. ಬೆಳಗಾವಿ ಗ್ರಾಮೀಣ ಮತಕ್ಷೇತ್ರ ವ್ಯಾಪ್ತಿಯ ಹಿರೇಬಾಗೇವಾಡಿ ಸಿದ್ದನಭಾವಿಕೆರೆ ಅಭಿವೃದ್ಧಿ ಹಾಗೂ ಹಲಗಿ ಮರಡಿ ಬಳಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ನೂತನ ಕ್ಯಾಂಪಸ್ ನಿರ್ಮಾಣಕ್ಕೆ ರಮೇಶ ಜಾರಕಿಹೊಳಿ ಅವರೇ ನೇರ ಕಾರಣ ಎಂದು ಅನೇಕರು ಅವರ ಕಾರ್ಯವೈಖರಿ ಬಗ್ಗೆ ಅಭಿಮಾನ ಸೂಚಿಸಿದರು.

ಬೆಳಗಾವಿ ಗ್ರಾಮೀಣ ಮತಕ್ಷೇತ್ರ ವ್ಯಾಪ್ತಿಯ
ಹಿಂಡಲಗಾ, ಸುಳೇಭಾವಿ ನಂತರ ಇದೀಗ ಹಿರೇಬಾಗೇವಾಡಿಯಲ್ಲಿ ರಮೇಶ ಜಾರಕಿಹೊಳಿ ಅವರ ಅಭಿಮಾನಿಗಳು ಅಭಿಮಾನದ ಸಮಾವೇಶ ನಡೆಸಿದ್ದಾರೆ. ಇಂದಿನ ಸಭೆಯಲ್ಲೂ ಭಾರಿ ಸಂಖ್ಯೆಯಲ್ಲಿ ಜನ ಭಾಗವಹಿಸಿ ಗಮನ ಸೆಳೆದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ