Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಾಮತೀರ್ಥನಗರ : ಅತಿಕ್ರಮಣ ವಿರುದ್ಧ ಸಿಡಿದೆದ್ದ ನಾಗರಿಕರು

ಬೆಳಗಾವಿ : ಇಲ್ಲಿನ ರಾಮತೀರ್ಥನಗರದಲ್ಲಿ ಸಾರ್ವಜನಿಕರ ಉದ್ದೇಶಕ್ಕೆ ಮೀಸಲಿಟ್ಟ ಜಾಗವನ್ನು ಅಲ್ಪಸಂಖ್ಯಾತರ ಇಲಾಖೆ ಅತಿಕ್ರಮಣ ಮಾಡಿಕೊಳ್ಳಲು  ಬುಡಾ ಆಯುಕ್ತರು ಸಹಕರಿಸುತ್ತಿದ್ದಾರೆ. ಅವರ ವಿರುದ್ಧ ಕ್ರಮ ಜರುಗಿಸಲು ಒತ್ತಾಯಿಸಿ ರಾಮತೀರ್ಥ ನಗರದ ನಾಗರಿಕರು ಭಾರೀ ಪ್ರತಿಭಟನೆ ನಡೆಸಿದರು.

ರಾಮತೀರ್ಥನಗರದ ಸರ್ವೆ ನಂ 561, 562 ಸಿಎ ನಿವೇಶನದಲ್ಲಿ ಎಸ್‌ಟಿಪಿ ಪ್ಲಾಂಟ್ ಸ್ಥಾಪನೆಗೆ 20 ಗುಂಟೆ ಮೀಸಲಿಡಲಾಗಿತ್ತು. ಅಲ್ಪಸಂಖ್ಯಾತ ಇಲಾಖೆ ಹಾಸ್ಟೆಲ್ ಅಧಿಕಾರಿಗಳು ಅತಿಕ್ರಮಣ ಮಾಡಿಕೊಂಡು ಕಾಂಪೌಂಡ್ ನಿರ್ಮಿಸಿಕೊಂಡಿದ್ದರು. ಈ ಕುರಿತು ದೂರು ನೀಡಿದ್ದರೂ ಬುಡಾ ಅಧಿಕಾರಿಗಳು ಕ್ರಮ ಜರುಗಿಸಿಲ್ಲ. ಅದರ ಬದಲು ಅತಿಕ್ರಮಣಕ್ಕೆ ಸಹಕಾರ ನೀಡಿದ್ದಾರೆ. ಇದೇ ರೀತಿ ಸಿಎ ನಿವೇಶನ ದುರ್ಬಳಕೆ ಮಾಡಿಕೊಂಡಿರುವುದು ಕಂಡು ಬಂದಿದೆ. ಇವೆಲ್ಲವನ್ನೂ ಸಹ ತನಿಖೆಗೆ ಒಳಪಡಿಸಬೇಕು ಎಂದರು.

ಬಿಜೆಪಿ ಮುಖಂಡ ಮುರುಗೇಂದ್ರಗೌಡ ಪಾಟೀಲ, ಮಾಜಿ ಮೇಯರ್ ಎನ್.ಬಿ.ನಿರ್ವಾಣಿ, ಸಾಮಾಜಿಕ ಕಾರ್ಯಕರ್ತ ಸುರೇಶ ಯಾದವ ಸೇರಿದಂತೆ ಹಲವರು ಭಾಗವಹಿದ್ದರು.

Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST