Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಂಗಸೃಷ್ಟಿ ಉದ್ಘಾಟನೆ; ಈಸಕ್ಕಿಯ ಆಸೆ ನಾಟಕ ಪ್ರದರ್ಶನ

 

ಬೆಳಗಾವಿ: ರಂಗಸೃಷ್ಟಿ ಎನ್ನುವ ರಂಗಕಲಾವಿದರ ನೂತನ ಸಂಘಟನೆ ಉದ್ಘಾಟನೆ ಮತ್ತು ನಾಟಕ ಪ್ರದರ್ಶನ ಕಾರ್ಯಕ್ರಮ ಈಚೆಗೆ ಬೆಳಗಾವಿಯಲ್ಲಿ ನಡೆಯಿತು.
ಕನ್ನಡ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ತೋಂಟದ ಶ್ರೀ ಸಿದ್ದರಾಮ ಸ್ವಾಮಿಗಳು ಉದ್ಘಾಟಿಸಿದರು. ಕಾರಂಜಿ ಮಠದ ಗುರುಸಿದ್ಧ ಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು. ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಕಾರ್ಯಕ್ರಮವನ್ನು ಪ್ರಾಯೋಜಿಸಿದ್ದರು.
ಈ ವೇಳೆ ಮಾತನಾಡಿದ ಶ್ರೀ ಸಿದ್ಧರಾಮ ಸ್ವಾಮೀಜಿ, ಬಸವಾದಿ ಶರಣರ ವಚನಗಳ ಅಶಯವನ್ನು ಜನಸಾಮಾನ್ಯರಿಗೆ ತಲುಪಿಸುವ ಕೆಲಸ ನಾಟಕಗಳಿಂದ ಆಗುತ್ತಿದೆ. ಕಾಯಕ ಮಾಡುವವರು ನಿಜವಾದ ಭಕ್ತರು,
ಕಾಯಕದ ಜೊತೆಗೆ ದಾಸೋಹ ಸಹ ಬಹಳ ಮುಖ್ಯ, ಗಳಿಕೆಯಷ್ಟೇ ಬಳಕೆಯೂ ಮುಖ್ಯ ಎಂದು ಹೇಳಿದರು. ನೂತನ ರಂಗಸೃಷ್ಟಿ ತಂಡಕ್ಕೆ ಅವರು ಶುಭ ಹಾರೈಸಿದರು.
ಮಹಾಂತೇಶ ಕವಟಗಿಮಠ ಮಾತನಾಡಿ, ಸಮಾಜಕ್ಕೆ ಸಂಸ್ಕಾರ ನೀಡುವ, ಯುವ ಜನಾಂಗವನ್ನು ಸರಿದಾರಿಗೆ ತರುವ ಕೆಲಸ ನಾಟಕಗಳಿಂದ ಆಗಬೇಕಿದೆ, ಕಾಯಕದೆಡೆಗೆ ದಾರಿ ತೋರಿಸುವ ಕೆಲಸವಾಗಬೇಕಿದೆ ಎನ್ನುತ್ತ, ಹೊಸದಾಗಿ ಅಸ್ಥಿತ್ವಕ್ಕೆ ಬಂದಿರುವ ರಂಗಸೃಷ್ಟಿಗೆ ಶುಭ ಕೋರಿದರು.

ಹಿರಿಯ ಸಾಹಿತಿ ಡಾ. ರಾಮಕೃಷ್ಣ ಮರಾಠೆ ರಚಿಸಿದ, ಶಿರೀಷ್ ಜೋಶಿ ನಿರ್ದೇಶಿಸಿದ ಈಸಕ್ಕಿಯ ಆಸೆ ನಾಟಕ ಈ ವೇಳೆ ಕಿಕ್ಕಿರಿದು ಸೇರಿದ್ದ ಪ್ರೇಕ್ಷಕರ ಮಧ್ಯೆ ರಂಗಸೃಷ್ಟಿ ಕಲಾವಿದರಿಂದ ಪ್ರದರ್ಶನಗೊಂಡಿತು. ಶರಣಗೌಡ ಪಾಟೀಲ ರಂಗ ವಿನ್ಯಾಸ, ಶಾಂತಾ ಆಚಾರ್ಯ ನೃತ್ಯ ಸಂಯೋಜನೆ, ಮಂಜುಳಾ ಜೋಶಿ ಸಂಗೀತ ನಿರ್ದೇಶನ ಮಾಡಿದ್ದರು. ಲಿಂಗಾಯತ ಮಹಿಳಾ ಸಮಾಜ ಕಾರ್ಯಕ್ರಮಕ್ಕೆ ಸಹಕಾರ ನೀಡಿತ್ತು.
ರಂಗಸೃಷ್ಟಿ ಅಧ್ಯಕ್ಷ ರಮೇಶ ಜಂಗಲ್, ಉಪಾಧ್ಯಕ್ಷ ಎಂ.ಕೆ.ಹೆಗಡೆ, ರಾಜೇಶ್ವರಿ ಕವಟಗಿಮಠ, ರಾಮಕೃಷ್ಣ ಮರಾಠೆ, ಶಿರೀಷ್ ಜೋಶಿ, ರತ್ಮಪ್ರಭಾ ಬೆಲ್ಲದ, ಶೈಲಜಾ ಭಿಂಗೆ, ನಯನಾ ಗಿರಿಗೌಡರ್, ಕಾವೇರಿ ಖಿಲಾರಿ ಮೊದಲಾದವರು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ