Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕರ್ನಾಟಕ ಜಾತಿಗಣತಿ ವರದಿಯಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿ 51% ಹೆಚ್ಚಳಕ್ಕೆ ಶಿಫಾರಸು ?

ಬೆಂಗಳೂರು : ಜಾತಿಗಣತಿ ಆಯೋಗವು ರಾಜ್ಯದಲ್ಲಿ ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿ) ಮೀಸಲಾತಿ ಕೋಟಾವನ್ನು ಪ್ರಸ್ತುತ ಶೇ. 32 ರಿಂದ ಶೇ. 51 ಕ್ಕೆ ಹೆಚ್ಚಿಸಲು ಶಿಫಾರಸು ಮಾಡಿದೆ ಎಂದು ಹೇಳಲಾಗಿದೆ.

ಶುಕ್ರವಾರ ಜಾತಿಗಣತಿ ವರದಿ ಕ್ಯಾಬಿನೆಟ್‌ನಲ್ಲಿ ಮಂಡನೆಯಾಗಿದೆ. ವರದಿಯಲ್ಲಿ ಏನಿದೆ ಎಂಬುದನ್ನು ಸರ್ಕಾರ ಬಿಡುಗಡೆ ಮಾಡಿಲ್ಲ. ಏಪ್ರಿಲ್ 17ರ ಕ್ಯಾಬಿನೆಟ್‌ನಲ್ಲಿ ವರದಿ ಅಂಗೀಕಾರದ ಬಳಿಕ ಅಧಿಕೃತ ದತ್ತಾಂಶ ಬಿಡುಗಡೆಯಾಗುವ ಸಾಧ್ಯತೆ ಇದೆ. ಆದರೆ ಜಯಪ್ರಕಾಶ್ ಹೆಗ್ಡೆ (Jayaprakash Hegde) ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಕೆಲ ಶಿಫಾರಸುಗಳ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿವೆ.

ಇದು ಜಾರಿಗೆ ಬಂದರೆ, ರಾಜ್ಯದಲ್ಲಿ ಒಟ್ಟು ಮೀಸಲಾತಿ ಪ್ರಮಾಣವು ಶೇ. 85 ಕ್ಕೆ ಏರಲಿದೆ. ಇದರಲ್ಲಿ ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ (ಇಡಬ್ಲ್ಯೂಎಸ್) ಶೇ. 10 ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ (ಎಸ್‌ಸಿ/ಎಸ್‌ಟಿ) ಶೇ. 24 ಸೇರಿವೆ.
ಆಯೋಗವು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಉದ್ಯೋಗ ಮೀಸಲಾತಿಯೊಳಗೆಮೀಸಲಾತಿ ನೀತಿಗಳನ್ನು ಜಾರಿಗೆ ತರುವಂತೆ ಸಲಹೆ ನೀಡಿದೆ.

ಒಬಿಸಿ ವಿಭಾಗಗಳ ಜನಸಂಖ್ಯೆಯು ಒಟ್ಟು ಜನಸಂಖ್ಯೆಯ ಸುಮಾರು ಶೇ. 70 ಕ್ಕೆ ಏರಿದೆ ಎಂದು ಸಮೀಕ್ಷೆಯಲ್ಲಿ ಕಂಡುಬಂದಿದೆ. ಆದಾಗ್ಯೂ, ಮೀಸಲಾತಿಗಳ ಪ್ರಮಾಣವು ಅದಕ್ಕೆ ತಕ್ಕಂತೆ ಹೆಚ್ಚಿಗೆಯಾಗಿಲ್ಲ ಎಂದು ಸಮಿತಿ ಗಮನಿಸಿದೆ.
ಜನಸಂಖ್ಯೆಯ ಆಧಾರದ ಮೇಲೆ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡದಿದ್ದರೆ, ಸರ್ಕಾರಿ ಸೌಲಭ್ಯಗಳನ್ನು ಸಮಾನವಾಗಿ ವಿತರಿಸಲಾಗುವುದಿಲ್ಲ” ಎಂದು ಸಮಿತಿ ತನ್ನ ಶಿಫಾರಸುಗಳಲ್ಲಿ ತಿಳಿಸಿದೆ.

ಈಗಿರುವ ಕಾನೂನಿನಂತೆ ಒಟ್ಟು ಮೀಸಲಾತಿ 50% ಮೀರುವಂತಿಲ್ಲ. ಹಿಂದುಳಿದವರ ಮೀಸಲು ಪ್ರಮಾಣವನ್ನು ಹೆಚ್ಚಿಸುವ ಶಿಫಾರಸು ಜಾರಿಯಾಗಬೇಕಾದರೆ ಕೇಂದ್ರ ಸರ್ಕಾರವು ಸಂವಿಧಾನದ ಒಂಬತ್ತನೇ ಪರಿಚ್ಛೇದಕ್ಕೆ ತಿದ್ದುಪಡಿ ತರಬೇಕು ಎಂದು ಆಯೋಗ ಶಿಫಾರಸು ಮಾಡಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ