Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ : ಕರ್ನಾಟಕದಲ್ಲಿ ಒಂದು ವಾರ ಭಾರಿ ಮಳೆ ಮುನ್ಸೂಚನೆ ; 6 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಿದೆ.
ಮೇ 25 ರಿಂದ ಮೇ 28ರ ವರೆಗೆ ಕರ್ನಾಟಕದ ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೂ ಮೇ 28ರವರೆಗೆ ರೆಡ್‌ ಅಲರ್ಟ್‌ ಘೋಷಿಸಾಗಿದೆ. ಮೇ 25ರಂದು ಬೆಳಗಾವಿ, ಧಾರವಾಡ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಹಾಗೂ ಗದಗ, ಹಾವೇರಿ, ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಮೇ 26ರಂದು ಹಾಸನ, ಬೆಳಗಾವಿ, ಧಾರವಾಡ ಜಿಲ್ಲೆಗೆ ಆರೆಂಜ್‌ ಹಾಗೂ ಬೀದರ್‌, ಗದಗ, ಹಾವೇರಿ, ಕಲಬುರಗಿ, ವಿಜಯಪುರ ಮತ್ತು ರಾಮನಗರ ಜಿಲ್ಲೆಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಮೇ 27ರಂದು ಕೆಲ ಜಿಲ್ಲೆಗಳಿಗೆ ಆರೆಂಜ್‌ ಮತ್ತು ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.
ಮೇ 29 ಮತ್ತು 30ರಂದು ರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಎಚ್ಚರಿಕೆ ನೀಡಲಾಗಿದೆ.
ರಾಜ್ಯದ ಹಲವೆಡೆ ಶನಿವಾರ ಉತ್ತಮ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್‌ರಾಕ್‌ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರದಲ್ಲಿ ತಲಾ 16 ಸೆಂ.ಮೀ, ಕೊಡಗು ಜಿಲ್ಲೆ ಭಾಗಮಂಡಲದಲ್ಲಿ 10 ಸೆಂ.ಮೀ, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಉತ್ತರ ಕನ್ನಡ ಜಿಲ್ಲೆಯ ಮಂಕಿ, ಗೇರುಸೊಪ್ಪ ಮತ್ತು ಮಂಗಳೂರಿನಲ್ಲಿ ತಲಾ 8 ಸೆಂ.ಮೀ., ಕುಂದಾಪುರ, ಗೋಕರ್ಣ, ಅಂಕೋಲಾ ಮತ್ತು ಚಿಕ್ಕಮಗಳೂರು ಜಿಲ್ಲೆ ಕಳಸದಲ್ಲಿ ತಲಾ 7 ಸೆಂ.ಮೀ ಮಳೆಯಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ