Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಖ್ಯಾತ ಕನ್ನಡ ನಟ ದುನಿಯಾ ವಿಜಯ – ನಾಗರತ್ನ ದಂಪತಿ ವಿಚ್ಛೇದನ : 2 ಕೋಟಿ ಜೀವನಾಂಶ ನೀಡಲು ಆದೇಶ

ಬೆಂಗಳೂರು: ಖ್ಯಾತ ಕನ್ನಡ ನಟ ದುನಿಯಾ ವಿಜಯ ಮತ್ತು ಅವರ ಪತ್ನಿ ನಾಗರತ್ನ ಅವರ ನಡುವಿನ ಸುದೀರ್ಘ ವೈವಾಹಿಕ ವಿವಾದ ಅಂತ್ಯಗೊಂಡಿದೆ. ಗುರುವಾರ ಕರ್ನಾಟಕ ಹೈಕೋರ್ಟ್ ಇಬ್ಬರಿಗೂ ವಿಚ್ಛೇದನ ಮಂಜೂರು ಮಾಡಿ ಆದೇಶ ಹೊರಡಿಸಿದೆ.
ಇದರ ಜೊತೆಗೆ, ಪತ್ನಿ ನಾಗರತ್ನ ಅವರಿಗೆ ಒಂದು ಬಾರಿಯ ಕಾಯಂ ಜೀವನಾಂಶವಾಗಿ (ಅಲಿಮೋನಿ) 2 ಕೋಟಿ ರೂಪಾಯಿ ಪಾವತಿಸುವಂತೆ ನಟ ದುನಿಯಾ ವಿಜಯ ಅವರಿಗೆ ನ್ಯಾಯಾಲಯ ನಿರ್ದೇಶನ ನೀಡಿದೆ.
ನ್ಯಾಯಮೂರ್ತಿ ಡಿ.ಕೆ. ಸಿಂಗ್ ಹಾಗೂ ನ್ಯಾಯಮೂರ್ತಿ ಹೆಚ್. ಶಾಂತಿ ಭೂಷಣ ಅವರನ್ನೊಳಗೊಂಡ ವಿಭಾಗೀಯ ಪೀಠವು ಈ ಮದುವೆಯನ್ನು ರದ್ದುಗೊಳಿಸಿ ತೀರ್ಪು ನೀಡಿದೆ. ಈ ಸಂದರ್ಭದಲ್ಲಿ ನಾಗರತ್ನ ಅವರ ಪರಿಸ್ಥಿತಿ, ದಂಪತಿಯ ಮೂವರು ಮಕ್ಕಳ ಭವಿಷ್ಯ ಹಾಗೂ ಚಿತ್ರರಂಗದಲ್ಲಿ ದುನಿಯಾ ವಿಜಯ ಅವರ ಆರ್ಥಿಕ ಸ್ಥಿತಿಗತಿ ಮತ್ತು ಸ್ಥಾನಮಾನಗಳನ್ನು ನ್ಯಾಯಪೀಠ ಪರಿಗಣನೆಗೆ ತೆಗೆದುಕೊಂಡಿದೆ.
ಪ್ರಕರಣದ ಹಿನ್ನೆಲೆ:
ನಾಗರತ್ನ ಜೊತೆ ದುನಿಯಾ ವಿಜಯ್ 1999ರಲ್ಲಿ ಮದುವೆ ಆಗಿ ಹಲವು ವರ್ಷಗಳ ಕಾಲ ಸಂಸಾರ ನಡೆಸಿದ್ದರೂ ನಂತರ ವೈಮನಸ್ಸು ಉಂಟಾಗಿ ತಾರಕಕ್ಕೇರಿತ್ತು. ಹಲವು ಬಾರಿ ಮಾಧ್ಯಮಗಳಲ್ಲಿ ಕೂಡ ಸುದ್ದಿಯಾಗಿತ್ತು. ದುನಿಯಾ ವಿಜಯ್ 2013ರಲ್ಲಿ ಡಿವೋರ್ಸ್ ಅರ್ಜಿ ಸಲ್ಲಿಕೆ ಮಾಡಿದ್ದರು.
ಆರಂಭದಲ್ಲಿ ದುನಿಯಾ ವಿಜಯ ಅವರು ‘ಕ್ರೌರ್ಯ’ದ ಆಧಾರದ ಮೇಲೆ ಸಲ್ಲಿಸಿದ್ದ ವಿಚ್ಛೇದನ ಅರ್ಜಿಯನ್ನು ಕುಟುಂಬ ನ್ಯಾಯಾಲಯ (ಫ್ಯಾಮಿಲಿ ಕೋರ್ಟ್) ವಜಾಗೊಳಿಸಿತ್ತು. ವಿಜಯ್ ಅವರು ಹೇಳಿದ ಕ್ರೌರ್ಯದ ಕಾರಣಗಳು ಸಾಬೀತಾಗಿಲ್ಲ ಎಂದು ಹೇಳಿತ್ತು. ಆದರೂ, ಇಬ್ಬರ ನಡುವಿನ ಸಂಬಂಧ ಸುಧಾರಿಸಿರಲಿಲ್ಲ. ವಿಜಯ ಅವರು ಮತ್ತೆ ಜೊತೆಯಾಗಿ ಬಾಳಲು ನಿರಾಕರಿಸಿದ್ದರೆ, ನಾಗರತ್ನ ಅವರು ಆರಂಭದಲ್ಲಿ ವಿಚ್ಛೇದನವನ್ನು ವಿರೋಧಿಸಿದ್ದರು. ವಿಚಾರಣೆ ವೇಳೆ, ನಾಗರತ್ನ ಅವರು ತಮ್ಮ ತಂದೆ-ತಾಯಿಯನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಎಂಬುದು ಸೇರಿದಂತೆ ಹಲವು ಆರೋಪಗಳನ್ನು ವಿಜಯ ಮಾಡಿದ್ದರು.
ಸುದೀರ್ಘ ಕಾಲದಿಂದ ದಂಪತಿ ಬೇರೆಯಾಗಿದ್ದು, ಮದುವೆ ಸಂಪೂರ್ಣ ಮುರಿದುಬಿದ್ದಿರುವುದು ಹಾಗೂ ಪತ್ನಿ-ಮಕ್ಕಳ ಕಲ್ಯಾಣವನ್ನು ಗಮನದಲ್ಲಿಟ್ಟುಕೊಂಡು ಹೈಕೋರ್ಟ್ ಅಂತಿಮವಾಗಿ ವಿಚ್ಛೇದನ ಮಂಜೂರು ಮಾಡಿದೆ.

2 ತಿಂಗಳ ಕಾಲಾವಕಾಶ:
ವಿಧಿಸಲಾಗಿರುವ 2 ಕೋಟಿ ರೂಪಾಯಿ ಜೀವನಾಂಶವನ್ನು ಎರಡು ತಿಂಗಳ ಒಳಗಾಗಿ ಪಾವತಿಸಬೇಕು ಎಂದು ಕೋರ್ಟ್ ಆದೇಶಿಸಿದೆ. ಒಂದು ವೇಳೆ ನಿಗದಿತ ಅವಧಿಯಲ್ಲಿ ಹಣ ಪಾವತಿಸಲು ವಿಫಲವಾದರೆ, ವಾರ್ಷಿಕ ಶೇಕಡಾ 6 ರಷ್ಟು ಬಡ್ಡಿಯೊಂದಿಗೆ ಜೀವನಾಂಶವನ್ನು ಪಾವತಿಸಬೇಕಾಗುತ್ತದೆ ಎಂದು ಹೇಳಿದೆ.
ರಿಯಲ್ ಲೈಫ್‌ನಲ್ಲೂ ಮೌಲ್ಯವಿರಲಿ:
ವಿಚಾರಣೆ ವೇಳೆ ಪೀಠವು ಪ್ರಮುಖ ಮಾರ್ಮಿಕ ಹೇಳಿಕೆಯೊಂದನ್ನು ನೀಡಿದ್ದು, “ಸಾರ್ವಜನಿಕ ಜೀವನದಲ್ಲಿರುವ ವ್ಯಕ್ತಿಗಳು ಬೆಳ್ಳಿತೆರೆಯ ಮೇಲೆ ಪ್ರದರ್ಶಿಸುವ ಉತ್ತಮ ನಡತೆ ಹಾಗೂ ಮೌಲ್ಯಗಳು ಅವರ ವೈಯಕ್ತಿಕ ಜೀವನದಲ್ಲೂ ಪ್ರತಿಫಲಿಸಬೇಕು” ಎಂದು ಕಿವಿಮಾತು ಹೇಳಿದೆ. ಈ ತೀರ್ಪನ್ನು ಪ್ರಶ್ನಿಸಿ ಸೂಕ್ತ ನ್ಯಾಯಿಕ ವೇದಿಕೆಯಲ್ಲಿ ಮೇಲ್ಮನವಿ ಸಲ್ಲಿಸಲು ಎರಡೂ ಕಡೆಯವರಿಗೆ ಅವಕಾಶವಿದೆ.
2007ರಲ್ಲಿ ತೆರೆಕಂಡ ‘ದುನಿಯಾ’ ಬ್ಲಾಕ್‌ಬಸ್ಟರ್ ಸಿನಿಮಾ ಮೂಲಕ ಮನೆಮಾತಾದ ವಿಜಯ, ಬಳಿಕ ಸ್ಯಾಂಡಲ್‌ವುಡ್‌ನಲ್ಲಿ ನಟ, ನಿರ್ದೇಶಕ ಹಾಗೂ ನಿರ್ಮಾಪಕರಾಗಿ ಗುರುತಿಸಿಕೊಂಡರು.
 ಅವರ ಮಗಳು ಮೋನಿಷಾ 

 ಅವರು ವಿನಯ ರಾಜಕುಮಾರ್ ನಟನೆಯ ಹಾಗೂ ದುನಿಯಾ ವಿಜಯ ನಿರ್ದೇಶನದ ‘ಸಿಟಿ ಲೈಟ್ಸ್’ ಕನ್ನಡ ಚಿತ್ರದ ಮೂಲಕ ನಟಿಯಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ.

ಹೊಸ ಬದುಕಿನ ಪ್ರಯಾಣದತ್ತ ಹೆಜ್ಜೆ: ವಿಚ್ಛೇದನದ ಬಳಿಕ ದುನಿಯಾ ವಿಜಯ್ ಪೋಸ್ಟ್

ಪತ್ನಿ ನಾಗರತ್ನ ಅವರಿಂದ ವಿಚ್ಛೇದನ ಕೋರಿ ನಟ ದುನಿಯಾ ವಿಜಯ್ ಅವರು ಸಲ್ಲಿಸಿದ್ದ ಅರ್ಜಿಗೆ ಹೈಕೋರ್ಟ್ ಅಸ್ತು ಎಂದಿದೆ. ಈ ಮೂಲಕ ವಿಜಯ್ -ನಾಗರತ್ನ ದಾಂಪತ್ಯ ಅಂತ್ಯಗೊಂಡಿದೆ.

ವಿಚ್ಛೇದನದ ಬಳಿಕ ದುನಿಯಾ ವಿಜಯ್ ಅವರು ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ.

'ಸಮಸ್ತ ಅಭಿಮಾನಿಗಳಲ್ಲಿ ಹಾಗೂ ನನ್ನ ಬದುಕಿನುದ್ದಕ್ಕೂ ಜೊತೆಯಾಗಿ ನಿಂತ ಮಾಧ್ಯಮ ಮಿತ್ರರಲ್ಲಿ ಕಳಕಳಿಯ ಮನವಿ ಎಂದು ಬರೆದಿರುವ ಅವರು, ನ್ಯಾಯಾಲಯದ ಆದೇಶಕ್ಕೆ ಶಿರಸಾಷ್ಟಾಂಗ ಪ್ರಣಾಮಗಳೊಂದಿಗೆ ಶರಣಾಗಿದ್ದೇನೆ. ಕಾನೂನಿನ ಮೇಲಿನ ನಂಬಿಕೆ ಮತ್ತಷ್ಟು ಹೆಚ್ಚಾಗಿದೆ. ನನ್ನ ಮೇಲಿನ ಮಾನಸಿಕ ಕ್ರೌರ್ಯವನ್ನು ಪರಿಗಣಿಸಿ, ಮಾನ್ಯ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಡಿ.ಕೆ. ಸಿಂಗ್ ಹಾಗೂ ಶಾಂತಿಭೂಷಣ್‌ ಅವರ ಆದೇಶಕ್ಕೆ ತಲೆಬಾಗಿದ್ದೇನೆ. ಈ ಆದೇಶಕ್ಕೆ ನನ್ನ ಗೌರವಪೂರ್ವಕ ಧನ್ಯವಾದಗಳು. ನನ್ನ ವಕೀಲರಾದ ಹಿರಿಯ ಕೌನ್ಸಿಲ್ ಶ್ರೀವತ್ಸ ಹಾಗೂ ಯುಕ್ತ ಅನಿಲ್ ಅವರಿಗೆ ನನ್ನ ಹೃತ್ತೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ' ಎಂದು ಬರೆದಿದ್ದಾರೆ.

ವಿಚ್ಛೇದನದ ವಿಚಾರವನ್ನು ಮಾಧ್ಯಮಗಳಲ್ಲಾಗಲಿ ಅಥವಾ ಸಾರ್ವಜನಿಕವಾಗಲಿ ಮಾತನಾಡಲು ಇಚ್ಛಿಸುವುದಿಲ್ಲ ಎಂದು ಹೇಳಿರುವ ದುನಿಯಾ ವಿಜಯ್, ' ನನ್ನ ಹೆಣ್ಣುಮಕ್ಕಳು ವಯಸ್ಕರಾಗಿದ್ದು, ಸಮಾಜದಲ್ಲಿ ತಮ್ಮದೇ ಸ್ಥಾನಮಾನ ಗಳಿಸಿದ್ದಾರೆ. ಅವರಿಗೆ ಸಮಾಜದಲ್ಲಿ ಯಾವುದೇ ಮುಜುಗರವಾಗಬಾರದು. ಮಕ್ಕಳ ಭವಿಷ್ಯ ಹಾಗೂ ಹಿತದೃಷ್ಟಿಯಿಂದ, ನನ್ನ ವೈಯಕ್ತಿಕ ಸಾಂಸಾರಿಕ ವಿಚಾರಕ್ಕೆ ನ್ಯಾಯಾಲಯ ನೀಡಿದ ಆದೇಶವನ್ನು ಆತ್ಮಸಾಕ್ಷಿಯಿಂದ ಸ್ವೀಕರಿಸಿದ್ದೇನೆ. ಇಲ್ಲಿಂದ ಹೊಸ ಬದುಕಿನ ಪ್ರಯಾಣದತ್ತ ಹೆಜ್ಜೆ ಹಾಕುತ್ತಿದ್ದೇನೆ. ನಿಮ್ಮ ಆಶೀರ್ವಾದ ಮತ್ತು ಹಾರೈಕೆ ಹೀಗೆಯೇ ಇರಲಿ' ಎಂದು ಹೇಳಿದ್ದಾರೆ.

Author
Jana Jeevala News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
RCU ದಲ್ಲಿ ಲಕ್ಷಾಂತರ ರೂ  ಗೋಲ್ಮಾಲ್, ಮೂವರು ಜೈಲುಪಾಲು.ಚೌತಿ ರಾತ್ರಿ ಅವಘಡ:  ಚವಾಟಗಲ್ಲಿಯಲ್ಲಿ ನಾಲ್ವರು ಸಜೀವ ದಹನದ್ವಿಚಕ್ರ ವಾಹನ-ಸಾರಿಗೆ ಬಸ್ ಅಪಘಾತ: ಮೂವರು ಸ್ಥಳದಲ್ಲೇ ಸಾವುಬೆಂಗಳೂರು-ಬೆಳಗಾವಿ ನಡುವೆ ಎರಡು ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.ಪಾರ್ಕಿಂಗ್‌ ಮಾಡಿದ್ದ ಕಾರಿನ ಬಾನೆಟ್‌ನಲ್ಲಿ ಅಡಗಿತ್ತು ಬೃಹತ್‌ ಹೆಬ್ಬಾವು ; ಬೆಚ್ಚಿಬಿದ್ದ ನಿವಾಸಿಗಳು  ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರು