Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಚಿಕ್ಕೋಡಿ ಉಪವಿಭಾಗಕ್ಕೊಬ್ಬರು ಜಿಲ್ಲಾಧಿಕಾರಿಯವರನ್ನು ನೇಮಿಸಲು ಮನವಿ

ಬೆಳಗಾವಿ : ಕರ್ನಾಟಕ ರಾಜ್ಯದಲ್ಲಿಯೇ ಅತೀ ದೊಡ್ಡ ಜಿಲ್ಲೆಯಾದ ಬೆಳಗಾವಿ ಜಿಲ್ಲೆಗೆ ಒಬ್ಬರೇ ಜಿಲ್ಲಾಧಿಕಾರಿ ಇರುವುದರಿಂದ, ಚಿಕ್ಕೋಡಿ ಉಪವಿಭಾಗಕ್ಕೆ ಪ್ರತ್ಯೇಕ ಜಿಲ್ಲಾಧಿಕಾರಿ ಒಬ್ಬರನ್ನು ನೇಮಿಸಬೇಕೆಂದು, ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯ ಅಧ್ಯಕ್ಷ ಸಂಜು ಬಡಿಗೇರ ಅವರ ನೇತೃತ್ವದಲ್ಲಿ, ಸರಕಾರಕ್ಕೆ ಚಿಕ್ಕೋಡಿ ತಹಶೀಲ್ದಾರ ಚಿದಂಬರ ಕುಲಕರ್ಣಿ ಇವರ ಮುಖಾಂತರ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

ಸಂಜು ಬಡಿಗೇರ ಮಾತನಾಡಿ, ಕರ್ನಾಟಕ ಆಡಳಿತ ಸುಧಾರಣೆ ಆಯೋಗದ ಅಧ್ಯಕ್ಷರು, ಬೆಳಗಾವಿಗೆ ಬಂದಾಗ ಆಗಿನ ಜಿಲ್ಲಾಧಿಕಾರಿಗಳು, ಚಿಕ್ಕೋಡಿಗೆ ಮತ್ತೊಬ್ಬರು ಅಪರ ಜಿಲ್ಲಾಧಿಕಾರಿ ನೇಮಕವಾಗಬೇಕೆಂದು ಸಲಹೆ ನೀಡಿದ್ದಾರೆ, ರಾಜ್ಯ ಸರಕಾರಕ್ಕೆ ಪ್ರಸ್ತಾವನೆಯನ್ನೂ ಸಹ ಕಳುಹಿಸಿದ್ದಾರೆ, ಬೆಳಗಾವಿ ಜಿಲ್ಲೆಯ ವಿಸ್ತೀರ್ಣ 13,433 ಚದರ ಕಿ. ಮಿ. ಇರುವುದರಿಂದ, ಸಂಪೂರ್ಣ ಜಿಲ್ಲೆಯನ್ನು ಹತೋಟಿಯಲ್ಲಿ ಇರಿಸಿಕೊಳ್ಳುವುದು ಒಬ್ಬ ಜಿಲ್ಲಾಧಿಕಾರಿಯವರಿಂದ ಅಸಾಧ್ಯದ ಮಾತು ಎಂದು ಹೇಳಿದರು.

ಸಮಾಜ ಸೇವಕ ಚಂದ್ರಕಾಂತ ಹುಕ್ಕೇರಿ ಮಾತನಾಡಿ, ಬೆಳಗಾವಿ ಜಿಲ್ಲೆಯಲ್ಲಿ 15 ತಾಲೂಕುಗಳು, 18 ವಿಧಾನ ಸಭಾ ಕ್ಷೇತ್ರಗಳು, 53 ಲಕ್ಷ ಜನಸಂಖ್ಯೆ ಇದೆ, ಭೌಗೋಳಿಕ ವಿಸ್ತೀರ್ಣದ ಕಾರಣದಿಂದ ಜಿಲ್ಲೆಯು ಅಭಿವೃದ್ಧಿ ಕಂಡಿಲ್ಲ, ದಕ್ಷಿಣ ಕರ್ನಾಟಕದಲ್ಲಿ ಪ್ರತಿ 100 ಕಿ.ಮಿ.ಅಂತರದಲ್ಲಿ 2 ಜಿಲ್ಲೆಗಳು ಕಾರ್ಯ ನಿರ್ವಹಿಸುತ್ತಲಿವೆ, ಬೆಳಗಾವಿ ಜಿಲ್ಲೆಯ ಒಂದು ತುದಿಯಿಂದ ಇನ್ನೊಂದು ತುದಿಗೆ ಹೋಗಬೇಕಾದರೆ ಸುಮಾರು 250 ಕಿ.ಮಿ. ಅಂತರವಿದೆ. ಬೆಳಗಾವಿ ನಗರದಿಂದ ಅಥಣಿ ತಾಲೂಕಿನ ತೇಲಸಂಗ ಮತ್ತು ಕೊಟ್ಟಲಗಿ ಸುಮಾರು180 ರಿಂದ 190 ಕಿ.ಮಿ.ಅಂತರವಿದೆ, ಈ ಭಾಗದ ಜನರು ಜಿಲ್ಲಾ ಕೇಂದ್ರಕ್ಕೆ ಬರಲು ಹರಸಾಹಸ ಪಡುತ್ತಿದ್ದಾರೆ, ಜನರಿಗೆ ಮಾತ್ರ ತೊಂದರೆ ಆಗದೇ ಆಡಳಿತ ನಡೆಸಲು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೂ ಸಹ ಕಾರ್ಯದ ಒತ್ತಡ ವಿಪರೀತ ಹೆಚ್ಚಾಗಿದೆ ಎಂದು ಹೇಳಿದರು, ಕೂಡಲೇ ಚಿಕ್ಕೋಡಿಗೆ ಅಪರ ಜಿಲ್ಲಾಧಿಕಾರಿಗಳ ಬದಲಾಗಿ ಪ್ರತ್ಯೇಕ ಒಬ್ಬರು ಜಿಲ್ಲಾಧಿಕಾರಿಗಳನ್ನು ನೇಮಕ ಮಾಡಿ, ಆಡಳಿತ ವ್ಯವಸ್ಥೆಯ ಸುಧಾರಣೆಗೆ ಕೈ ಜೋಡಿಸಬೇಕೆಂದು ಮನವಿಯಲ್ಲಿ ವಿನಂತಿಸಿದ್ದಾರೆ.

ಸಂಜಯ ಪಾಟೀಲ, ಬಸವರಾಜ ಸಾಜನೆ, ಶ್ರೀಕಾಂತ ಅಸೋದೆ, ಅಮೋಲ ನಾವಿ, ರುದ್ರಯ್ಯಾ ಹಿರೇಮಠ, ರಣಜೀತ ಶಿಂದೆ, ಸುಲೇಮಾನ ನಾಲಬಂದ, ಖಾನಪ್ಪಾ ಬಾಡಕರ, ಸಚೀನ ದೊಡಮನಿ, ರಫೀಕ ಪಠಾಣ ಸೇರಿದಂತೆ ಹಲವಾರು ಜನ ಹೋರಾಟಗಾರರು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ