Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

RCU ನಲ್ಲೂ ಅರ್ಥಶಾಸ್ತ್ರ ವಿಷಯವನ್ನು ಕಡ್ಡಾಯಗೊಳಿಸುವಂತೆ ಮನವಿ

ಬೆಳಗಾವಿ : ರಾಜ್ಯ ಶಿಕ್ಷಣ ನೀತಿಯಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ವಾಣಿಜ್ಯ ವಿಭಾಗದಲ್ಲಿ ಅರ್ಥಶಾಸ್ತ್ರ ವಿಷಯವನ್ನು ಕಡ್ಡಾಯಗೊಳಿಸುವಂತೆ ಆಗ್ರಹಿಸಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ಪ್ರಾಧ್ಯಾಪಕರ ನಿಯೋಗವು ಮಂಗಳವಾರ ದಿನಾಂಕ:06-08-2024 ರಂದು ಕುಲಪತಿ ಪ್ರೊ.ಸಿ.ಎಮ್.ತ್ಯಾಗರಾಜ್ ಅವರಿಗೆ ಮನವಿ ಸಲ್ಲಿಸಲಾಯಿತು.

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ಪ್ರಾಧ್ಯಾಪಕರ ವೇದಿಕೆಯ ಅಧ್ಯಕ್ಷ ಪ್ರೊ ಆರ್.ಎಮ್.ತೇಲಿ ಮಾತನಾಡಿ, ಶೈಕ್ಷಣಿಕ ವರ್ಷ 2024-25 ನೇ ಸಾಲಿನಿಂದ ಕಾಂಗ್ರೆಸ್ ಸರ್ಕಾರ ಅಸ್ಥಿತ್ವಕ್ಕೆ ತಂದ ರಾಜ್ಯ ಶಿಕ್ಷಣ ನೀತಿಯಲ್ಲಿ ರಾಜ್ಯದ ಮಹಿಳಾ ವಿಶ್ವವಿದ್ಯಾಲಯ, ಕರ್ನಾಟಕ ವಿಶ್ವವಿದ್ಯಾಲಯ, ಹಾಗೂ ಇನ್ನಿತರ ವಿಶ್ವವಿದ್ಯಾಲಯಗಳು ವಾಣಿಜ್ಯ ವಿಭಾಗದಲ್ಲಿ ಅರ್ಥಶಾಸ್ತ್ರ ವಿಷಯವನ್ನು ಸೇರ್ಪಡೆ ಮಾಡಿರುತ್ತವೆ.
ಆದರೆ, ಗಡಿನಾಡಿನ ಭಾಗದಲ್ಲಿರುವ ಅತ್ಯಂತ ಹೆಚ್ಚಿನ ವಿದ್ಯಾರ್ಥಿಗಳ ಸಂಖ್ಯೆಯನ್ನು ಹೊಂದಿರುವ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಮಾತ್ರ ವಾಣಿಜ್ಯ ವಿಭಾಗಕ್ಕೆ ಅರ್ಥಶಾಸ್ತ್ರ ವಿಷಯವನ್ನು ಸೇರ್ಪಡೆ ಮಾಡದಿರುವುದು ಖೇದಕರ ಸಂಗತಿಯಾಗಿದ್ದು ಇದರಿಂದ ವಿದ್ಯಾರ್ಥಿಗಳಿಗೂ ತೊಂದರೆಯಾಗುವುದರ ಜೊತೆಗೆ ಸ್ನಾತಕೋತ್ತರ ಪದವಿಯಲ್ಲಿ ಅರ್ಥಶಾಸ್ತ್ರ ವಿಷಯವನ್ನು ಬೋಧಿಸುತ್ತಿರುವ ಪ್ರಾಧ್ಯಾಪಕರ ಬದುಕು ಬೀದಿಗೆ ಬರುತ್ತದೆ.
ಆದ್ದರಿಂದ ಕುಲಪತಿಗಳು ಕೂಡಲೇ ಎಚ್ಚೆತ್ತುಕೊಂಡು ವಾಣಿಜ್ಯ ವಿಭಾಗಕ್ಕೆ ಪ್ರತಿ ಸೆಮಿಸ್ಟರ್ ನಲ್ಲಿ ತಲಾ ಒಂದರಂತೆ ಅರ್ಥಶಾಸ್ತ್ರ ವಿಷಯವನ್ನು ಸೇರ್ಪಡೆ ಮಾಡಬೇಕೆಂದು ಆಗ್ರಹಿಸಿದರು.

ಅರ್ಥಶಾಸ್ತ್ರ. ವಿಷಯದ ಪ್ರಾಧ್ಯಾಪಕರಾದ
ಡಾ . ಹಿರಿಯಕ್ಕನವರ,
ಪ್ರೊ. ರವಿ ಶಂಕರ ಮೆಟಗೇರಿ,
ಪ್ರೊ‌.ಎಸ್.ಎ.ಮರೆಪ್ಪಗೋಳ,
ಪ್ರೊ.ಆನಂದ ಕರೆಪ್ಪನವರ,
ಪ್ರೊ.ಪಿ.ಎಸ್.ಜಾಧವ,
ಪ್ರೊ.ಎ.ಡಿ.ಕೋಳಿ,
ಪ್ರೊ.ಯಲ್ಲಪ್ಪ ದಭಾಲಿ,
ಪ್ರೊ.ಈರಣ್ಣಾ ರಾಮದುರ್ಗ,
ಪ್ರೊ.ಗುಗ್ಗರಿ,
ಪ್ರೊ.ಎ.ವೈ.ಸೋನ್ಯಾಗೋಳ ಮುಂತಾದವರು ಉಪಸ್ಥಿತರಿದ್ದರು.
----
"ವಾಣಿಜ್ಯ ಶಾಸ್ತ್ರ ವಿಭಾಗದಲ್ಲಿ ಅರ್ಥಶಾಸ್ತ್ರ ವಿಷಯವನ್ನು ಸೇರ್ಪಡೆ ಮಾಡುವ ವಿಚಾರದ ಕುರಿತು ಅರ್ಥಶಾಸ್ತ್ರ ಪ್ರಾಧ್ಯಾಪಕರು ಮನವಿ ಸಲ್ಲಿಸಿದ್ದು ಎರಡೂ ವಿಭಾಗಗಳ ಮುಖ್ಯಸ್ಥರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು " ಪ್ರೊ.ಸಿ.ಎಮ್.ತ್ಯಾಗರಾಜ,
ಕುಲಪತಿ,
ರಾಣಿ ಚನ್ನಮ್ಮ ವಿಶ್ವವಿದ್ಯಾಲಯ-ಬೆಳಗಾವಿ
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ