Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬಸವನ ಕುಡಚಿ ಮಹಾಲಕ್ಷ್ಮೀ ನಗರಕ್ಕೆ ಮೂಲ ಸೌಲಭ್ಯ ಕಲ್ಪಿಸಿಕೊಡುವಂತೆ ಶಾಸಕರಿಗೆ ಮನವಿ

ಬೆಳಗಾವಿ: ಮಹಾನಗರ ಪಾಲಿಕೆಯ ವ್ಯಾಪ್ತಿಯ ಬಸವನ ಕುಡಚಿ ಮಹಾಲಕ್ಷ್ಮೀ ನಗರ ಹಲವಾರು ವರ್ಷಗಳಿಂದ ಮೂಲ ಸೌಲಭ್ಯಗಳಿಂದ ವಂಚಿತವಾಗಿದ್ದು, ಕೂಡಲೇ ಅಲ್ಲಿ ಮೂಲ ಸೌಲಭ್ಯ ಕಲಿಸಿಕೊಡುವಂತೆ ಆಗ್ರಹಿಸಿ ನಿವಾಸಿಗಳು ಶಾಸಕ ರಾಜು (ಆಸೀಫ್) ಶೇಠ ಅವರಿಗೆ ಮನವಿ ಸಲ್ಲಿಸಿದರು.

ಮಹಾಲಕ್ಷ್ಮೀ ನಗರದಲ್ಲಿರುವ ನಿವಾಸಿಗಳು ಶಾಸಕರ ಕಚೇರಿಗೆ ಭೇಟಿ ನೀಡಿ, ಮನವಿ ಮಾಡಿಕೊಂಡರು. ಈ ನಗರ ಪಾಲಿಕೆಯ ವ್ಯಾಪ್ತಿಯಲ್ಲಿದೆ. ಸುಮಾರು 10 ವರ್ಷಗಳಿಂದ ಇಲ್ಲಿ ನೆಲೆಸಿದ್ದೇವೆ. ಮಹಾಲಕ್ಷ್ಮೀನಗರಕ್ಕೆ ಯಾವುದೇ ಸೌಲಭ್ಯ ದೊರೆತಿಲ್ಲ, ಇಲ್ಲಿನ ರಸ್ತೆಗಳು ತುಂಬಾ ಹದಗೆಟ್ಟುಹೋಗಿದ್ದು, ಚರಂಡಿ ಸಹ ಹಾಳಾಗಿವೆ. ಇದರಿಂದ ಮಳೆ ಬಂದಾಗ ಚರಂಡಿ ನೀರು ರಸ್ತೆಯ ಮೇಲೆಲ್ಲೆ ಹರಿದು ಜನ ಓಡಾಡುವದು ದುಸ್ತರವಾಗುತ್ತದೆ. ಈ ಹಿನ್ನೆಲೆಯಲ್ಲಿ ಕೂಡಲೇ ಚರಂಡಿ ಹಾಗೂ ರಸ್ತೆ ದುರಸ್ತಿ ಮಾಡಿಸಬೇಕು. ಬೀದಿ ದೀಪಗಳ ಕೊರತೆ, ನದಿ ನೀರು ಈ ಭಾಗಕ್ಕೆ ಸರಿಯಾಗಿ ತಲುಪುತ್ತಿಲ್ಲ. ಇದರಿಂದ ಜನರಿಗೆ ನೀರಿನ ತೊಂದರೆ ಉಂಟಾಗುತ್ತಿದ್ದು ಕೂಡಲೇ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಮಹಿಳೆಯರು, ವಯಸ್ಕರರು ದಿವ್ಯಾಂಗರು ಮತ್ತು
ಕೂಲಿಕಾರರು ಮಧ್ಯಮ ವರ್ಗದ ಕುಟಂಬದವರು ವಾಸವಾಗಿದ್ದೇವೆ. ಶಾಸಕರು ಇಲ್ಲಿಗೆ ಮೂಲ ಸೌಕರ್ಯ ಕಲಿಸಬೇಕೆಂದು ಮನವಿ ಮೂಲಕ ಒತ್ತಾಯಿಸಿದರು.

ಮಹಾಲಕ್ಷ್ಮೀ ನಗರದಿಂದ ಬೆಳಗಾವಿ ನಗರಕ್ಕೆ ಸಂಚರಿಸಲು ಸುಸಜ್ಜಿತವಾದ ರಸ್ತೆ ನಿರ್ಮಾಣ ಮಾಡಬೇಕು. ಮಹಾಲಕ್ಷ್ಮೀ ನಗರದಲ್ಲಿ ವ್ಯಾಪ್ತಿಯಲ್ಲಿ ಗ್ರಾಮಸ್ಥರು ಶವಸಂಸ್ಕಾರವನ್ನು ಮಾಡುತ್ತಾರೆ. ಇದರಿಂದಾಗಿ ಇಲ್ಲಿನ ಶುದ್ಧವಾದ ವಾತಾವರಣ ಕಲುಷಿತಗೊಳ್ಳುತ್ತಿದೆ. ಇದರಿಂದ ಆರೋಗ್ಯದ ಮೇಲೆ ವೃತ್ತಿರಿಕ್ತ ಪರಿಣಾಮ ಉಂಟಾಗುತ್ತಿದ್ದು, ಆದ್ದರಿಂದ ಶವಸಂಸ್ಕಾರ ಪ್ರದೇಶ ಬೇರೆ ಕಡೆ ಸ್ಥಳಾಂತರಿಸಬೇಕು ಒತ್ತಾಯಿಸಿದರು.

ಜನರ ಹಿತದೃಷ್ಟಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪಿಸಬೇಕು. ಇಲ್ಲಿ ಸುಂದರವಾದ ಹೂತೋಟದ ( ವಾಯುವಿಹಾರ ) ನಿರ್ಮಾಣ ಮಾಡಬೇಕಿದೆ. ಜತೆಗೆ ಬಸವನ ಕುಡಚಿ, ಅಲಾರವಾಡ ನಡುವೆ ಒಂದು ಪೊಲೀಸ್‌ ಚೌಕಿ ಸ್ಥಾಪಿಸಬೇಕು. ಎಲ್ಲಾ ವರ್ಗದ ಜನರ ಅನುಕೂಲಕ್ಕಾಗಿ ಒಂದು ಸಮುದಾಯ ಭವನ ಕಟ್ಟಡ ನಿರ್ಮಾಣ ಮಾಡಬೇಕು. ಮೇಲಾಗಿ ಶೀಘ್ರವೇ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬಸ್ ಸೌಲಭ್ಯ ಒದಗಿಸಬೇಕು ಎಂದು ಮನವಿ ಮಾಡಿಕೊಂಡರು.

ಬಸವನ ಕುಡಚಿ ಮಹಾಲಕ್ಷ್ಮೀ ನಗರದ ನಿವಾಸಿಗಳು ಇತರರು ಇದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ