Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಹೊರಗುತ್ತಿಗೆ ನೌಕರರ ನೇಮಕಾತಿಯಲ್ಲಿ ಮೀಸಲಾತಿ: ಸರ್ಕಾರದ ಆದೇಶ

ಬೆಂಗಳೂರು : ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಡೆಸುವ ಹೊರಗುತ್ತಿಗೆ ನೌಕರರ ನೇಮಕಾತಿಯಲ್ಲಿ ಮೀಸಲಾತಿಯನ್ನು ಕಡ್ಡಾಯವಾಗಿ ಪಾಲಿಸುವಂತೆ ಸರ್ಕಾರ ಆದೇಶ ಹೊರಡಿಸಿದೆ. ಶೇ. 33ರಷ್ಟನ್ನು ಮಹಿಳೆಯರಿಗೆ ಮೀಸಲಿಡಬೇಕು ಎಂದು ಸೂಚಿಸಿದೆ.
ರಾಜ್ಯ ಸರ್ಕಾರ ಇದೇ ಮೊದಲ ಬಾರಿಗೆ ಹೊರಗುತ್ತಿಗೆ ನೇಮಕದಲ್ಲಿಯೂ ಮೀಸಲಾತಿ ಜಾರಿ ಮಾಡಿದೆ. ಸರ್ಕಾರದ ವಿವಿಧ ಇಲಾಖೆಗಳಲ್ಲಿ ವಿವಿಧ ಹಂತದ ಸಿಬ್ಬಂದಿ ನೇಮಕಾತಿಯನ್ನು ಹೊರಗುತ್ತಿಗೆ ಆಧಾರದಲ್ಲಿ ವಿವಿಧ ಏಜೆನ್ಸಿಗಳ ಮೂಲಕ ನೇಮಕ ಮಾಡಿಕೊಳ್ಳುತ್ತಿದೆ. 2023ರ ಡಿಸೆಂಬರ್ 21ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಹೊರಗುತ್ತಿಗೆಯಲ್ಲೂ ಮೀಸಲಾತಿ ಜಾರಿಗೊಳಿಸುವ ಪ್ರಸ್ತಾವನೆಗೆ ಅಂಗೀಕಾರ ನೀಡಲಾಗಿತ್ತು.

ಪ್ರಸ್ತುತ ಜಾರಿಯಲ್ಲಿರುವ ಮೀಸಲಾತಿ ನಿಯಮವನ್ನು ಹೊರಗುತ್ತಿಗೆ ನೌಕರ ನೇಮಕಾತಿಗೂ ಕಡ್ಡಾಯವಾಗಿ ಅನ್ವಯಿಸಬೇಕು. ಅದಕ್ಕೆ ಕೆಲವು ಸೂಚನೆಗಳನ್ನು ಪಾಲನೆ ಮಾಡಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸೋಮವಾರ ಹೊರಡಿಸಿದೆ ಸುತ್ತೋಲೆಯಲ್ಲಿ ಸೂಚನೆ ನೀಡಲಾಗಿದೆ.
ಹೊರಗುತ್ತಿಗೆ ಸಿಬ್ಬಂದಿ ಒದಗಿಸುವ ಏಜೆನ್ಸಿ ನೀಡುವ ಸಿಬ್ಬಂದಿಯ ಜಾತಿ ಪ್ರಮಾಣಪತ್ರ ಮತ್ತು ಇತರೆ ದಾಖಲೆಗಳನ್ನು ಟೆಂಡರ್ ಅಂಗೀಕರಿಸುವ ಪ್ರಾಧಿಕಾರವು ಪರಿಶೀಲಿಸಿಯೇ ಕ್ರಮಕೈಗೊಳ್ಳಬೇಕು. ಯಾವುದೇ ಇಲಾಖೆಯಲ್ಲಿ 20 ಅಥವಾ ಅದಕ್ಕಿಂತ ಅಧಿಕ ಸಿಬ್ಬಂದಿಯನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಕಮಾಡಿಕೊಳ್ಳುವ
ಸಂದರ್ಭದಲ್ಲಿ ಮೀಸಲಾತಿ ನೀತಿ ಅನ್ವಯವಾಗಲಿದೆ.

ಅಭ್ಯರ್ಥಿಯ ಕನಿಷ್ಠ ವಯೋಮಿತಿ 18 ವರ್ಷ ಮತ್ತು ಗರಿಷ್ಠ ವಯೋ ಮಿತಿ 60 ವರ್ಷ ಆಗಿರುತ್ತದೆ. ಸಾಮಾಜಿಕ ನ್ಯಾಯ ಮತ್ತು ಸಮಾನ ಉದ್ಯೋಗಾವಕಾಶಗಳನ್ನು ಒದಗಿಸುವ ಉದ್ದೇಶದಿಂದ ಜಾರಿಗೆ ತರಲಾಗುವ ಈ ನಿಯಮಗಳಡಿ ನೇಮಕಾತಿ ಆದವರನ್ನು ಕಾಯಂಗೆ ಪರಿಗಣಿಸುವಂತಿಲ್ಲ ಈ ಸೂಚನೆಗಳು ಸರ್ಕಾರದ ಎಲ್ಲ ಇಲಾಖೆಗಳು, ಸ್ವಾಯತ್ತ ಸಂಸ್ಥೆಗಳು, ನಿಗಮ, ಮಂಡಳಿಗಳು, ವಿಶ್ವವಿದ್ಯಾಲಯಗಳಿಗೆ ಅನ್ವಯವಾಗಲಿದೆ ಎಂದು ತಿಳಿಸಲಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ