Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮತದಾರರ ಪಟ್ಟಿ ಪರಿಷ್ಕರಣೆ ಅತ್ಯಂತ ಪ್ರಮುಖ ಕಾರ್ಯ : ಈರಣ್ಣ ಕಡಾಡಿ

ಮೂಡಲಗಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಸ್ತುತ ನಡೆಯುತ್ತಿದ್ದು, ಇದರ ವಿವರ ಪಡೆಯಲು ಮೂಡಲಗಿ ತಹಶಿಲ್ದಾರರು ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳ ತಂಡ ಬುಧವಾರ ಮಾಜಿ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರ ನಿವಾಸಕ್ಕೆ ಭೇಟಿ ನೀಡಿ, ಸಮಗ್ರ ಮಾಹಿತಿ ಪಡೆದುಕೊಂಡರು.

ಮಾಹಿತಿ ನೀಡಿದ ಬಳಿಕ ಮಾತನಾಡಿದ ಮಾಜಿ ಸಂಸದ ಈರಣ್ಣ ಕಡಾಡಿ ಅವರು, "ಮತದಾರರ ಪಟ್ಟಿಯ ಪರಿಷ್ಕರಣೆಯು ಅತ್ಯಂತ ಪ್ರಮುಖ ಕಾರ್ಯವಾಗಿದೆ. ಇದರಿಂದ ನಕಲಿ ಮತದಾರರು ಮತ್ತು ಮೃತಪಟ್ಟವರನ್ನು ಗುರುತಿಸಿ, ಅವರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲು ಸಾಧ್ಯವಾಗುತ್ತದೆ. ಕೇವಲ ಅರ್ಹ ಮತದಾರರ ಹೆಸರುಗಳನ್ನು ಮಾತ್ರ ಮತದಾರರ ಪಟ್ಟಿಯಲ್ಲಿ ಉಳಿಸಿಕೊಳ್ಳಲು ಇದು ಸಹಾಯಕವಾಗುತ್ತದೆ" ಎಂದರು.

ಪಾರದರ್ಶಕ ಮತ್ತು ದೋಷಮುಕ್ತ ಮತದಾರರ ಪಟ್ಟಿ ತಯಾರಿಸಲು ಸಾರ್ವಜನಿಕರ ಸಹಕಾರ ಅತ್ಯಗತ್ಯ. ಆದ್ದರಿಂದ, ತಾವೆಲ್ಲರೂ ತಮ್ಮ ಮನೆಗೆ ಆಗಮಿಸುವ ಬೂತ್ ಮಟ್ಟದ ಅಧಿಕಾರಿಗಳಿಗೆ (BLO) ಸರಿಯಾದ ಮತ್ತು ಸಮಗ್ರ ಮಾಹಿತಿಯನ್ನು ನೀಡಿ ಸಹಕರಿಸಬೇಕಾಗಿ ಅವರು ಸಾರ್ವಜನಿಕರಲ್ಲಿ ವಿನಂತಿಸಿದರು.

ಗ್ರಾಮ ಆಡಳಿತ ಅಧಿಕಾರಿ ಭಾರತಿ ಕಾಳೆ ಹಾಗೂ ಬೂತ್ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿದ್ಯಾರ್ಥಿಗಳು ವಿವಿಧ ಕೌಶಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಕರೆ: ಪ್ರವೀಣ ಗುಡಿಜಗತ್ತಿನ ಆವಿಷ್ಕಾರದಲ್ಲಿ ನ್ಯಾನೋ ತಂತ್ರಜ್ಞಾನದ ಪಾತ್ರ ಅಪಾರ: ಕುಲಪತಿ ಸಿ. ಎಂ. ತ್ಯಾಗರಾಜ ಆಡಳಿತದಲ್ಲಿ ಇನ್ಮುಂದೆ 'ಬಂಗಾಳಿ' ಕಡ್ಡಾಯ: ಪಶ್ಚಿಮ ಬಂಗಾಳ ಸಿಎಂ ಸುವೇಂದು ಘೋಷಣೆಕೌಶಲ್ಯ ಅಭಿವೃದ್ಧಿ ಯುವಕರ ಭವಿಷ್ಯದ ಕೀಲಿ ಜನರಲ್ಲಿ ಪುಸ್ತಕ ಓದುವ ಹವ್ಯಾಸ ಬೆಳೆಸುವ ಕಾರ್ಯ ಸ್ತುತ್ಯಾರ್ಹ : ಪ್ರೊ. ಹೊಸಕೋಟಿಬಿಸಿಸಿಐ ಚುನಾವಣೆ : ಎಲ್ಲ ಸ್ಥಾನಗಳಿಗೆ ಅವಿರೋಧ ಆಯ್ಕೆಕರ್ನಾಟಕದ ಹಲವು ಜಿಲ್ಲೆಗಳಲ್ಲಿ 4 ದಿನ ಭಾರಿ ಮಳೆಯ ಮುನ್ಸೂಚನೆಒಡೆಸಾ ಬಂದರಿನಲ್ಲಿ ವಾಣಿಜ್ಯ ಹಡಗಿನ ಮೇಲೆ ಕ್ಷಿಪಣಿ ದಾಳಿ: ನಾಲ್ವರು ಭಾರತೀಯರು ಸಾವು, ಮತ್ತೊಬ್ಬನ ಸ್ಥಿತಿ ಗಂಭೀರಸಿಜೆಪಿ ನಾಯಕರ ಜೊತೆ ಸೌಹಾರ್ದಯುತ ಮಾತುಕತೆ ಬಳಿಕ ಧರಣಿ ಅಂತ್ಯಗೊಳಿಸುವಂತೆ ಕೇಂದ್ರ ಸರ್ಕಾರದ ಮನವಿನ್ಯಾನೋ ಜಾಥಾ-2026' ಕಾರ್ಯಕ್ರಮ