Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

RLS ವಿಶ್ರಾಂತ ಪ್ರಾಧ್ಯಾಪಕ ಅಪ್ಪಣ್ಣ ಪೂಜಾರ ನಿಧನ

ಬೆಳಗಾವಿ: ಬೆಳಗಾವಿ ರಾಜಾ ಲಖಮಗೌಡ ವಿಜ್ಞಾನ ಮಹಾವಿದ್ಯಾಲಯದ ಭೌತಶಾಸ್ತ್ರ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಅಪ್ಪಣ್ಣ ಪೂಜಾರ (61)ಸೋಮವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.
ಗೋಕಾಕ ತಾಲೂಕು ಮಸರಗುಪ್ಪಿ ಗ್ರಾಮದವರಾದ ಅಪ್ಪಣ್ಣ ಪೂಜಾರ ಅವರು ಕಳೆದ 32 ವರ್ಷಗಳಿಂದ ಆರ್‌ಎಲ್ಎಸ್ ಕಾಲೇಜಿನ ಭೌತಶಾಸ್ತ್ರ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಸರಳ ಸಜ್ಜನಿಕೆ, ನಯ ವಿನಯ ವ್ಯಕ್ತಿತ್ವದ ಅವರು ಅಪಾರ ಸ್ನೇಹಿತ ಬಳಗದ ಜೊತೆಗೆ ಒಡನಾಟ ಹೊಂದಿದ್ದರು.

ಸಹದ್ಯೋಗಿ ಮಿತ್ರ ಪ್ರೊ.ಅಪ್ಪಣ್ಣ ಪೂಜಾರ್ ನಮ್ಮನ್ನು ಅಗಲಿದ ಸುದ್ದಿ ತಿಳಿಸಲು ವಿಷಾದವೆನಿಸುತ್ತಿದೆ. ಸ್ಫುರದ್ರೂಪಿ ಹಾಗೂ ಸ್ನೇಹಮಯಿ ಸ್ವಭಾವದ ಅಪ್ಪಣ್ಣ ತನ್ನ ಸಂಪರ್ಕಕ್ಕೆ ಬರುವ ಎಲ್ಲರನ್ನೂ ಒಪ್ಪಿಕೊಳ್ಳುತ್ತಿದ್ದರು ಮತ್ತು ಅಪ್ಪಿಕೊಳ್ಳುತ್ತಿದ್ದರು. ಪರರನ್ನು ನಿಂದಿಸುವ, ದ್ವೇಷಿಸುವ ಮಾತುಗಳನ್ನು ಅವರಿಂದ ನಾವೆಂದೂ ಕೇಳಲಿಲ್ಲ. ಸದಾ ಹಸನ್ಮುಖಿ. ಯಾರಿಗೂ ಕೇಡನ್ನು ಬಯಸದವ. RLS ಕಾ ಲೇಜಿನ ಭೌತಶಾಸ್ತ್ರ ವಿಭಾಗದಲ್ಲಿ ಎಲ್ಲರೂ ಮೆಚ್ಚುವಂತೆ ಸೇವೆ ಸಲ್ಲಿಸಿ ವರ್ಷದ ಹಿಂದಷ್ಟೇ ನಿವೃತ್ತಿ ಪಡೆದ ಅಪ್ಪಣ್ಣ ಪೂಜಾರ್ ಇಷ್ಟು ಬೇಗ ನಮ್ಮನ್ನು ಅಗಲಿದ್ದು ನಂಬಲು ಸಾಧ್ಯವಾಗುತ್ತಿಲ್ಲ. ಒಳ್ಳೆಯವರನ್ನು ದೇವರು ಬೇಗ ಕರೆಸಿಕೊಳ್ಳುತ್ತಾನೆ ಎಂಬ ಮಾತು ನಿಜವಾಗಿದೆ ಎಂದು ಅವರ ಆಪ್ತ ಸ್ನೇಹಿತರು ಕಂಬನಿ ಮಿಡಿದಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದಲ್ಲಿ ಜೂನ್ 1ಕ್ಕೆ ಶಾಲೆ ಪ್ರಾರಂಭೋತ್ಸವ : ಅಂದೇ ಪೋಷಕರ ಮಹಾಸಭೆಪೋಕ್ಸೋ ಪ್ರಕರಣ : ಪೊಲೀಸರ ಮುಂದೆ ಶರಣಾದ ಕೇಂದ್ರ ಸಚಿವ ಬಂಡಿ ಸಂಜಯ ಪುತ್ರ3 ನೇ ಮಗು ಜನಿಸಿದರೆ ₹30 ಸಾವಿರ, 4ನೇ ಮಗು ಜನಿಸಿದರೆ ₹40 ಸಾವಿರ ಧನಸಹಾಯ ! ವಿಶಿಷ್ಟ ಯೋಜನೆ ಘೋಷಿಸಿದ ಆಂಧ್ರ ಸಿಎಂ…!SSLC ಮರುಮೌಲ್ಯಮಾಪನ : ಜಿಲ್ಲೆಯ ವಿದ್ಯಾರ್ಥಿ ಈಗ ಇಡೀ ರಾಜ್ಯಕ್ಕೆ ಪ್ರಥಮ..!ಕಕ್ಷಿದಾರರ ಸಮಾಲೋಚನಾ ಸ್ಪರ್ಧೆ: ರಾಷ್ಟ್ರೀಯ ಕಾನೂನು ಉತ್ಸವದಲ್ಲಿ ಪ್ರಥಮ ಸ್ಥಾನ ಪಡೆದ ಗದಗ ಮಾನ್ವಿ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳುಸಾವಿರಾರು ಕೋಟಿ ಹೂಡಿಕೆ ಮಾಡಿದವರಿಗೆ ಆತಂಕ :  ICE CREAM ಮಾರುತ್ತಿದ್ದವ ಈ ಪರಿ ಬೆಳೆದದ್ದು ಹೇಗೆ ?ಕೊನೆಗೂ ಶಿವಾನಂದ ನೀಲಣ್ಣವರ ಬಂಧನ..!ರಾಷ್ಟ್ರೀಯ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಲಿಂಗರಾಜ ಕಾಲೇಜು ವಿದ್ಯಾರ್ಥಿನಿಟ್ರ್ಯಾಕ್ಟರ್ ಸೇತುವೆಯಿಂದ ಕೆಳಗೆ ಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ 4 ಕ್ಕೂ ಅಧಿಕ ಜನ ಸಾವುಬೆಳಗಾವಿ ಕೃಷ್ಣಮಠದಲ್ಲಿ ಅಧಿಕ ಮಾಸದ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮ ಆಯೋಜನೆ