Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನಿವೃತ್ತಿ ಬಗ್ಗೆ ರೋಹಿತ್ ಕುತೂಹಲಕಾರಿ ಹೇಳಿಕೆ

ದುಬೈ: ನಿವೃತ್ತಿ ಬಗ್ಗೆ ರೋಹಿತ್ ಶರ್ಮಾ ಕುತೂಹಲಕಾರಿ ಹೇಳಿಕೆ ನೀಡಿದ್ದಾರೆ.ಏಕದಿನ ಕ್ರಿಕೆಟ್ ಮಾದರಿಯಿಂದ ನಾನು ನಿವೃತ್ತಿಯಾಗುವುದಿಲ್ಲ. ದಯವಿಟ್ಟು ವದಂತಿಗಳನ್ನು ಹಬ್ಬಿಸಬೇಡಿ. ನಿವೃತ್ತಿ ವದಂತಿಗಳ ಕುರಿತು ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಅವರ ಸ್ಪಷ್ಟ ಮಾತಿದು.

ಇತ್ತೀಚೆಗೆ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿದ್ದ ರೋಹಿತ್ ಅವರ ಕ್ರಿಕೆಟ್ ಭವಿಷ್ಯದ ಕುರಿತು ಊಹಾಪೋಹಗಳು ಹರಿದಾಡಿದ್ದವು. ಆದರೆ, ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಫೈನಲ್ ಪಂದ್ಯದಲ್ಲಿ ಅಮೋಘ ಅರ್ಧಶತಕ ಸಿಡಿಸುವ ಮೂಲಕ ಭಾರತಕ್ಕೆ ಜಯ ತಂದುಕೊಟ್ಟ ರೋಹಿತ್, ಪಂದ್ಯದ ನಂತರ ಎಲ್ಲ ಊಹಾಪೋಹಗಳನ್ನು ತಳ್ಳಿಹಾಕಿದ್ದಾರೆ.
ಪಂದ್ಯಶ್ರೇಷ್ಠ ಪ್ರಶಸ್ತಿಗೂ ಅವರು ಭಾಜನರಾಗಿದ್ದಾರೆ.

ಬಳಿಕ ಮಾತನಾಡಿದ ರೋಹಿತ್ ಅವರನ್ನು, ನಿವೃತ್ತಿ ಹಾಗೂ ಭವಿಷ್ಯದ ಯೋಜನೆಗಳ ಬಗ್ಗೆ ಕೇಳಲಾಯಿತು. ಅದಕ್ಕೆ ಪ್ರತಿಕ್ರಿಯಿಸಿದ ಅವರು, 'ಏಕದಿನ ಕ್ರಿಕೆಟ್ ಮಾದರಿಯಿಂದ ಈಗಲೇ ನಿವೃತ್ತಿಯಾಗುವುದಿಲ್ಲ. ದಯವಿಟ್ಟು ವದಂತಿಗಳನ್ನು ಹರಡಬೇಡಿ. ಭವಿಷ್ಯದ ಯೋಜನೆಗಳೇನೂ ಇಲ್ಲ. ಎಲ್ಲವೂ ಹೀಗೆಯೇ ಮುಂದುವರಿಯುತ್ತದೆ' ಎಂದಿದ್ದಾರೆ.

ತಮ್ಮ ಫೈನಲ್ ಪ್ರದರ್ಶನದ ಕುರಿತು, 'ಹಿಂದಿನ ಮೂರ್ನಾಲ್ಕು ಪಂದ್ಯಗಳಲ್ಲಿ ಆಡಿದಂತೆಯೇ ಈ ಪಂದ್ಯದಲ್ಲೂ ಯಾವುದೇ ಬದಲಾವಣೆ ಇಲ್ಲದೆ ಆಡಿದೆ. ಪವ‌ರ್ ಪ್ಲೇನಲ್ಲಿ ರನ್ ಗಳಿಸುವುದು ಎಷ್ಟು ಮುಖ್ಯ ಎಂಬುದು ಗೊತ್ತಿದೆ. ಏಕೆಂದರೆ, ಮೊದಲ 10 ಓವರ್‌ಗಳ ಬಳಿಕ ಸ್ಪಿನ್ನರ್‌ಗಳು ದಾಳಿಗಿಳಿದಾಗ, ಕ್ಷೇತ್ರ ರಕ್ಷಣೆಯಲ್ಲಿ ಬದಲಾವಣೆಗಳಾದಾಗ ರನ್ ಗಳಿಸುವುದು ಕಷ್ಟವಾಗುತ್ತದೆ' ಎಂದು ಹೇಳಿದ್ದಾರೆ.

ದುಬೈನಲ್ಲಿ ಭಾನುವಾರ ರಾತ್ರಿ ನಡೆದ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್, ನಿಗದಿತ 50 ಓವರ್‌ಗಳಲ್ಲಿ 7 ವಿಕೆಟ್‌ಗೆ 251 ರನ್ ಗಳಿಸಿತ್ತು. ಈ ಗುರಿ ಬೆನ್ನತ್ತಿದ ಭಾರತ ಇನ್ನೂ ಒಂದು ಓವರ್ ಬಾಕಿ ಇರುವಂತೆಯೇ 6 ವಿಕೆಟ್‌ಗೆ 254 ರನ್ ಗಳಿಸಿ ಜಯದ ನಗೆ ಬೀರಿತು.

ನಿರ್ಣಾಯಕ ಪಂದ್ಯದಲ್ಲಿ ಫಾರ್ಮ್‌ಗೆ ಮರಳಿದ ರೋಹಿತ್ 83 ಎಸೆತಗಳಲ್ಲಿ 76 ರನ್ ಗಳಿಸುವ ಮೂಲಕ ಟೀಂ ಇಂಡಿಯಾದ ಜಯದಲ್ಲಿ ನಿರ್ಣಾಯಕ ಪಾತ್ರ ವಹಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ