Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

400 ಕೋಟಿ ರೂ. ದರೋಡೆ ಪ್ರಕರಣ ಸುಳ್ಳೆಂದ ಪೊಲೀಸರು

ಬೆಳಗಾವಿ: ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯದಲ್ಲಿ ಕಳೆದ ಎರಡು ವಾರಗಳಿಂದ ಸಂಚಲನಕ್ಕೆ ಕಾರಣವಾಗಿದ್ದ ರೂ. 400 ಕೋಟಿ ದರೋಡೆ ಪ್ರಕರಣ ಇದೀಗ ರೋಚಕ ಹಂತಕ್ಕೆ ಬಂದು ತಲುಪಿದೆ. ಈ ಮೊದಲು ಬೆಳಗಾವಿ ಪೊಲೀಸರು ಈ ಪ್ರಕರಣದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಇದೀಗ ನಾಸಿಕ್ ಪೊಲೀಸರು ಸಹ ಈ ಪ್ರಕರಣದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.

ನಗದು ಸಾಗಿಸುತ್ತಿದ್ದ ಟ್ರಕ್‌ ತಡೆದು ರೂ.400 ಕೋಟಿ ದೋಚಿ ಪರಾರಿಯಾಗಿದ್ದಾರೆ ಎಂದು ಚಾಲಕನೊಬ್ಬ ಸಲ್ಲಿಸಿದ್ದ ದೂರು ಸುಳ್ಳು, ಅಂತಹ ಯಾವುದೇ ಪ್ರಕರಣ ನಡೆದಿಲ್ಲ ಎಂದು ಇದೀಗ ಮಹಾರಾಷ್ಟ್ರದ ನಾಸಿಕ್ ಗ್ರಾಮೀಣ ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಚಲಿಸುತ್ತಿದ್ದ ಟ್ರಕ್ ಅನ್ನು ಅಡ್ಡಹಾಕಿದ 7 ಮಂದಿ ಅನಾಮಿಕರು, ನನ್ನ ಮೇಲೆ ಹಲ್ಲೆ ಮಾಡಿ ಟ್ರಕ್‌ನಲ್ಲಿದ್ದ ರೂ.400 ಕೋಟಿ ಹಣವನ್ನು ದೋಚಿ ಪರಾರಿಯಾಗಿದ್ದಾರೆ ಎಂದು ಟ್ರಕ್ ಚಾಲಕ ಸಂದೀಪ ಪಾಟೀಲ ದೂರು ದಾಖಲಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ಎಲ್ಲಾ 7 ಆರೋಪಿಗಳನ್ನು ಇಗತ್ಪುರಿ ನ್ಯಾಯಾಲಯ ಬಿಡುಗಡೆ ಮಾಡಿದೆ. ನಕಲಿ ದೂರು ನೀಡಿದ್ದಕ್ಕಾಗಿ ಟ್ರಕ್ ಚಾಲಕನ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

2025ರ ಅಕ್ಟೋಬರ್ 22ರಂದು 7 ಜನರು ತಮ್ಮನ್ನು ದಾರಿ ತಪ್ಪಿಸಿ, ಅಪಹರಿಸಿ, ಹಲ್ಲೆ ನಡೆಸಿದ್ದಾರೆ. ಬಳಿಕ ಟ್ರಕ್‌ನಲ್ಲಿದ್ದ ರೂ.400 ಕೋಟಿ ಮೌಲ್ಯದ ರದ್ದಾದ ರೂ. 2000 ಮುಖಬೆಲೆಯ ನೋಟುಗಳನ್ನು ಲೂಟಿ ಮಾಡಿದ್ದಾರೆ ಎಂದು ಚಾಲಕ ಸಂದೀಪ ಪಾಟೀಲ ಘೋಟಿ ಪೊಲೀಸರಿಗೆ ದೂರು ನೀಡಿದ್ದರು.

ಇದು ಮೂರು ರಾಜ್ಯಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು.

ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೊ ಹಂಚಿಕೊಂಡಿದ್ದ ಸಂದೀಪ ಪಾಟೀಲ, ಟ್ರಕ್‌ನಲ್ಲಿ ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಹವಾಲಾ ಹಣ ಸಾಗಿಸಲಾಗುತ್ತಿತ್ತು ಎಂದು ಹೇಳಿಕೊಂಡಿದ್ದರು.

ಸಂದೀಪ ಪಾಟೀಲ ಅವರು ಆರೋಪಿಸಿದ್ದ 7 ಜನರನ್ನು ನಾವು ಬಂಧಿಸಿದ್ದೇವೆ. ಆದರೆ, ತನಿಖೆಯಲ್ಲಿ ಅವರು ಹೇಳಿದಂತೆ ಆರೋಪಿಗಳ ಸಂಚಾರದ ಮಾರ್ಗ, ಕರೆ ದಾಖಲೆಗಳು, ಸಮಯ ಇತ್ಯಾದಿಗಳು ಹೋಲಿಕೆಯಾಗಿಲ್ಲ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಒಟ್ಟಾರೆ ಗಮನಿಸಿದರೆ ಇಡೀ ಪ್ರಹಸನಕ್ಕೆ ಇದೀಗ ಅ ತೆರೆ ಬೀಳುವ ಸಾಧ್ಯತೆ ಕಂಡು ಬಂದಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ