Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಎಸ್.ನಿಜಲಿಂಗಪ್ಪನವರ ತತ್ವಾದರ್ಶಗಳು ಸ್ಪೂರ್ತಿದಾಯಕ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕದ ಅಭಿವೃದ್ದಿ ಪಥಕ್ಕೆ ಅಡಿಗಲ್ಲು ಹಾಕಿದ ಎಸ್ ನಿಜಲಿಂಗಪ್ಪನವರ ತತ್ವಾದರ್ಶಗಳು ಸ್ಪೂರ್ತಿದಾಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮಾಜಿ ಮುಖ್ಯಮಂತ್ರಿ ದಿವಂಗತ ಎಸ್ . ನಿಜಲಿಂಗಪ್ಪ ಅವರ ಪುಣ್ಯತಿಥಿ ಅಂಗವಾಗಿ ಅವರ ಪ್ರತಿಮೆಗೆ ನಮನ ಸಲ್ಲಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಕನ್ನಡ ನಾಡಿನ ಅಭಿವೃದ್ಧಿಗೆ ಕೊಡುಗೆ ನೀಡಿದ ದಿವಂಗತ ಎಸ್ ನಿಜಲಿಂಗಪ್ಪ ಅವರು ಇಂದಿಗೂ ಜನಮಾನಸದಲ್ಲಿ ನೆಲೆಸಿದ್ದಾರೆ. ಅವರು ಈ ದೇಶ ಕಂಡ ಪ್ರಾಮಾಣಿಕ ರಾಜಕಾರಣಿ. ಮೌಲ್ಯಯುತ ರಾಜಕೀಯ ಜೀವನವನ್ನು ನಡೆಸಿಕೊಂಡು ಬಂದ ನಿಜಲಿಂಗಪ್ಪನವರು ನೀರಾವರಿ ಕ್ಷೇತ್ರದ ಅಭಿವೃದ್ಧಿ ಸೇರಿದಂತೆ ಕರ್ನಾಟಕ ಏಕೀಕರಣಕ್ಕೆ ಶ್ರಮಿಸಿದ್ದಾರೆ. ನಿಜಲಿಂಗಪ್ಪನವರ ತತ್ವಾದರ್ಶಗಳು ಸ್ಪೂರ್ತಿದಾಯಕವಾಗಿವೆ ಎಂದರು.

*ಬಿಜೆಪಿ , ಎನ್ ಡಿ ಎ ಸರ್ಕಾರ ಅಲ್ಪಸಂಖ್ಯಾತ ವಿರೋಧಿ*

ಸಂಸತ್ ನಲ್ಲಿ ಇಂದು ವಕ್ಫ್ ಬೋರ್ಡ್ ತಿದ್ದುಪಡಿ ಬಗ್ಗೆ ಬಿಲ್ ಮಂಡನೆಯಾಗುತ್ತಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸುತ್ತಾ, ಬಿಜೆಪಿ ಹಾಗೂ ಎನ್ ಡಿ ಎ ಸರ್ಕಾರ ದೇಶದ ಅಲ್ಪಸಂಖ್ಯಾತರ ವಿರೋಧಿಗಳು ಎಂಬುದನ್ನು ಅವರ ಈ ನಡೆ ನಿರೂಪಿಸುತ್ತಿದೆ. ಅವರು ಜಾತ್ಯಾತೀತ, ಸಾಮಾಜಿಕ ನ್ಯಾಯದ ಸಿದ್ದಾಂತಗಳನ್ನು ಬೆಂಬಲಿಸದ ಕೋಮುವಾದಿ ಪಕ್ಷವಾಗಿದ್ದಾರೆ ಎಂದು ತಿಳಿಸಿದರು

ಮುಖ್ಯಮಂತ್ರಿಯವರ ಹಾಗೂ ಬಿ.ಕೆ ಹರಿಪ್ರಸಾದ್ ರ ಭೇಟಿಯ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಬಿ.ಕೆ.ಹರಿಪ್ರಸಾದ್ ಅವರು ಕಾಂಗ್ರೆಸ್ ಪಕ್ಷದ ನಾಯಕರಾಗಿದ್ದು, ಉಭಯ ಕುಶಲೋಪರಿ ಮಾತುಕತೆ ನಡೆಸಲಾಗಿದೆ ಎಂದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ