Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಾಜ್ಯದಾದ್ಯಂತ ಪಟಾಕಿ ಗೋದಾಮುಗಳ ಸುರಕ್ಷತಾ ಸಮೀಕ್ಷೆ: ಡಿಸಿಎಂ ಡಿ.ಕೆ.ಶಿವಕುಮಾರ್

 

ಬೆಂಗಳೂರು:

ರಾಜ್ಯದಾದ್ಯಂತ ಇರುವ ಪಟಾಕಿ ಗೋದಾಮುಗಳ ಸರ್ವೆ ನಡೆಸಿ, ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಡಿಸಿಎಂ ಡಿ‌.ಕೆ.ಶಿವಕುಮಾರ್ ತಿಳಿಸಿದರು.

ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಭಾನುವಾರ ಬೆಳಿಗ್ಗೆ ಪ್ರತಿಕ್ರಿಯೆ ನೀಡಿದ ಅವರು "ಇನ್ನು ಮುಂದೆ ಯಾವುದೇ ಅವಘಡ ಆಗದಂತೆ ಎಚ್ಚರವಹಿಸಲಾಗುವುದು. ರಾಜ್ಯದಲ್ಲಿ ಇರುವ ಪಟಾಕಿ ಗೋದಾಮುಗಳಿಗೆ ಪೊಲೀಸ್ ಇಲಾಖೆ, ಜಿಲ್ಲಾಧಿಕಾರಿಗಳಿಗೆ ನೋಟೀಸ್ ನೀಡಿ ಸುರಕ್ಷತೆ ಪರಿಶೀಲನೆ ಮಾಡಲು ಸೂಚನೆ ನೀಡಿರುವುದಾಗಿ ಹೇಳಿದರು.

ತಮಿಳುನಾಡಿನ ಕಾರ್ಮಿಕರು ದುರಂತದಲ್ಲಿ ಸಾವನ್ನಪ್ಪಿದ್ದಾರೆ, ಯುವಕರ ಸಾವು ದುಃಖಕರ ಸಂಗತಿ. ರಾಜ್ಯ ಸರ್ಕಾರದಿಂದ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದು, ತಮಿಳುನಾಡಿನವರು 3 ಲಕ್ಷ ಮೊತ್ತದ ಚೆಕ್ ಈಗಾಗಲೇ ವಿತರಣೆ ಮಾಡಿದ್ದಾರೆ. ಅವಘಡಕ್ಕೆ ಏನು ಕಾರಣ ಎಂದು ಶೀಘ್ರ ತನಿಖೆ ನಡೆಸಲಾಗುವುದು ಎಂದರು.

ಒಳಗೆ ಹೋಗಲು ಆಗದ ಕಾರಣ ಕಟ್ಟಡದ ಹಿಂದಿನ ಗೋಡೆ ಒಡೆದು ಹಾಕುವಂತೆ ಸೂಚನೆ ನೀಡಿದ್ದೆ. ಇನ್ನು ಮುಂದೆ ಅಯಾಮಕರ ಸಾವು ಸಂಭವಿಸದಂತೆ ಮುನ್ನೆಚರಿಕೆವಹಿಸುತ್ತೇವೆ. ಸಾವಿನ ಸಂಖ್ಯೆ 14 ಕ್ಕೆ ಏರಿಕೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ, ಯುವಕರ ಸಾವು ನೋವಿನ ಸಂಗತಿ ಎಂದು ವಿಷಾದ ವ್ಯಕ್ತಪಡಿಸಿದರು.

ಮುಖ್ಯಮಂತ್ರಿಗಳು ದುರಂತ ನಡೆದ ಸ್ಥಳ ಪರಿಶೀಲನೆಗೆ ಹೋಗುತ್ತಿದ್ದು, ನಾನು ಹೋಗುತ್ತಿದ್ದೇನೆ ಎಂದು ತಿಳಿಸಿದರು.

*ಬೊಮ್ಮಾಯಿ ಅವರ ಹೇಳಿಕೆಯಂತೆ ನಡೆಯುತ್ತಿದ್ದೇವೆ*

*ಕ್ಷೇತ್ರಗಳಿಗೆ ಅನುದಾನದ ವಿಚಾರದಲ್ಲಿ ಕಾಂಗ್ರೆಸ್ ತಾರತಮ್ಯ ಮಾಡುತ್ತಿದ್ದು ಬಿಜೆಪಿ ಈ ರೀತಿ ಮಾಡಿರಲಿಲ್ಲ ಎನ್ನುವ ಬೊಮ್ಮಾಯಿ ಅವರ ಆರೋಪಕ್ಕೆ "ಬೊಮ್ಮಾಯಿ ಅವರು ವಿಧಾನ ಪರಿಷತ್ತಿನಲ್ಲಿ ಏನು ಹೇಳಿಕೆ, ಉತ್ತರ ನೀಡಿದ್ದರೊ, ಅದನ್ನೇ ನಾವು ಪಾಲನೆ ಮಾಡುತ್ತಿದ್ದೇವೆ.* ಎಂದು ತಿರುಗೇಟು ನೀಡಿದರು.

*ಸೋಮವಾರ ಬ್ರಾಂಡ್ ಬೆಂಗಳೂರು ಸಭೆ*

ಬ್ರಾಂಡ್ ಬೆಂಗಳೂರು ವಿಚಾರದಲ್ಲಿ 70,000 ಸಲಹೆಗಳು ಬಂದಿದ್ದು,‌ ಅವುಗಳನ್ನು ಒಂದು ಕಡೆ ಕ್ರೂಡಿಕರಿಸಿ ವಿಂಗಡಿಸುವ ಕೆಲಸ ಮಾಡಲಾಗುತ್ತಿದೆ. ಇದಕ್ಕೆ ಏಳು ತಂಡಗಳನ್ನು ಮಾಡಿದ್ದು, ಈ ತಂಡಗಳು ಉತ್ತಮ ಸಲಹೆಗಳನ್ನು ಆಯ್ಕೆ ಮಾಡುತ್ತದೆ. Voice of the citizens, should be voice of the karnataka ಮಾತಿನಂತೆ ಜನಸಾಮಾನ್ಯರ ಮಾತುಗಳಿಗೆ ಮನ್ನಣೆ ನೀಡಲು ಸರ್ಕಾರ ಮುಂದಾಗಿದೆ.
ಸೋಮವಾರ ಬೆಳಿಗ್ಗೆ ಜ್ಞಾನಜ್ಯೋತಿ ಸಭಾಂಗಣದಲ್ಲಿ ಸಭೆ ಸೇರಿ ಚರ್ಚೆ ನಡೆಸಲಾಗುವುದು ಎಂದು ಹೇಳಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ