Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಲೀಡ್ ಬಗ್ಗೆ ಸಾಹುಕಾರ್ ಕಿಡಿನುಡಿ

ಬೆಳಗಾವಿ: ಅಥಣಿ ಮತಕ್ಷೇತ್ರದಲ್ಲಿ ನಮಗೆ 10 ಸಾವಿರ ಲೀಡ್ ಸಿಕ್ಕರೂ ಸಂತೋಷ ಇತ್ತು. ಆದರೆ 7 ಸಾವಿರ ಮೈನಸ್ ಆಗಿದ್ದರಿಂದ ನೋವಾಗಿದೆ. ಅನಾವಶ್ಯಕವಾಗಿ ನಾವು ಯಾರನ್ನು ಟಾರ್ಗೆಟ್ ಮಾಡಿಲ್ಲ. ಅಥಣಿ, ಕುಡಚಿ ಮತಕ್ಷೇತ್ರದಲ್ಲಿ ಏಕೆ ಸಮಸ್ಯೆಯಾಗಿದೆ ಎಂಬುವುದನ್ನು ಸ್ವತಃ ಕಣ್ಣಾರೇ ಕಂಡಿದ್ದೇನೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ನಗರದ ಕಾಂಗ್ರೆಸ್‌ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಶಾಸಕ ಮಹೇಂದ್ರ ತಮ್ಮಣ್ಣವ‌ರ್ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಚುನಾವಣೆ ಇನ್ನೆರಡು ದಿನ ಇರುವಾಗ ಸ್ವತಃ ಕುಡಚಿಯಲ್ಲಿ ನಾನೆ ಟಿಕಾಣಿ ಹೂಡಿದರೂ ಶಾಸಕ ಮಹೇಂದ್ರ ತಮ್ಮಣ್ಣವ‌ರ್ ನನ್ನ ಕೈಗೆ ಸಿಕ್ಕಿಲ್ಲ. ಇನ್ನು ಅಥಣಿಯಲ್ಲಿ 77 ಸಾವಿರ ವಿಧಾನಸಭೆ ಚುನಾವಣೆಯಲ್ಲಿ ಲೀಡ್ ಸಿಕ್ಕಿತ್ತು. ಆದರೆ ಲೋಕಸಭೆ ಚುನಾವಣೆಯಲ್ಲಿ 7 ಸಾವಿರ ಮೈನಸ್ ಆಗಿದೆ. ಕನಿಷ್ಠ 10 ಸಾವಿರ ಲೀಡ್ ಸಿಕ್ಕರೂ ಸಂತೋಷ ಇತ್ತು. ಮೈನಸ್ಸೇ ಆಗಿದ್ದರಿಂದ ನಾನು ಕಾರ್ಯಕರ್ತರಿಗೆ ಅಲ್ಲಿ ನಡೆದ ಬೆಳವಣಿಗೆಗಳನ್ನು ತಿಳಿಸಿದ್ದೇನೆಂದರು.

ಇನ್ನು ಶಾಸಕರಾದ ಲಕ್ಷ್ಮಣ ಸವದಿ, ಮಹೇಂದ್ರ ತಮ್ಮಣ್ಣವರ್‌ ಅಥಣಿಯಲ್ಲಿ ಸೇರಿದ್ದ ಬಗ್ಗೆ ಮಾತನಾಡಿದ. ಅವರು, ಜನ, ಕಾರ್ಯಕರ್ತರು, ಪಕ್ಷ ನಮ್ಮ ಪರ ಇದೆ. ನಮ್ಮನ್ನು ವಿರೋಧಿಸಲು ಅವರು ಯಾರು ಎಂದು ಪ್ರಶ್ನಿಸಿದರು. ತಾವು ಏನು ಮಾಡಿದ್ದಾರೆ ಎಂದು ಮನವರಿಕೆ ಮಾಡಿಕೊಳ್ಳಬೇಕು. ಶಾಸಕರ ಬಗ್ಗೆ ದೂರು ನೀಡಲ್ಲ. ದೂರು ನೀಡಿದರೂ ನಮ್ಮಲ್ಲಿ ಇನ್ನುವರೆಗೆ ಯಾರ ಮೇಲೆಯೂ ಕ್ರಮವಾಗಿಲ್ಲ ಎಂದು ಹೇಳಿದರು.

ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಎಲ್ಲಾ ಕಾಂಗ್ರೆಸ್‌ ಶಾಸಕರು ಲೀಡ್ ಕೊಟ್ಟಿದ್ದಾರೆ. ಅಥಣಿಯಲ್ಲಿ ಶಾಸಕ ಸವದಿ ಅವರು ಲೀಡ್ ಕೊಟ್ಟಿದ್ದರೆ ಅವರ ನಮ್ಮ ಬಾಂಧವ್ಯ ಚೆನ್ನಾಗಿ ಉಳಿಯತ್ತಿತ್ತು. ಆದರೆ ಈಗ ನಮ್ಮಿಂದ ಅಂತರ ಕಾಯ್ದುಕೊಂಡಿದ್ದಾರೆ. ಚುನಾವಣೆಗಿಂತ ಮುಂಚೆ ಪ್ರಿಯಂಕಾಗೆ ಲೀಡ್ ಕೊಡುತ್ತೇನೆ ಎಂದು ಅವರೇ ಸ್ವತಃ ಹೇಳಿದ್ದರು. ಆದರೆ 7 ಸಾವಿರ ಮೈನಸ್ಟ್ ಆಗಿದ್ದರಿಂದ ಅಥಣಿ ಜನತೆ ಅವರನ್ನೇ ಪ್ರಶ್ನಿಸುತ್ತಿದ್ದಾರೆ. ಜನಕ್ಕೆ ಅವರೇ ಉತ್ತರ ನೀಡಬೇಕೆಂದು ತಿಳಿಸಿದರು.

ಗ್ಯಾರಂಟಿಗಳು ಮುಂದುವರೆಯುತ್ತವೆ. ಲೋಕಸಭೆ ಚುನಾವಣೆಯಲ್ಲಿ ಗ್ಯಾರಂಟಿಗಳ ಪರಿಣಾಮ ಬೀರಿದೆ. ಕಳೆದ ಬಾರಿ ಚುನಾವಣೆಗೆ ಹೋಲಿಸಿದರೆ ಬಿಜೆಪಿ ಅಭ್ಯರ್ಥಿಗಳ ಗೆಲುವಿನ ಅಂತರ ಕಡಿಮೆಯಾಗಿದೆ. ಹೀಗಾಗಿ ಚುನಾವಣೆಯಲ್ಲಿ ಗ್ಯಾರಂಟಿಗಳ ಪರಿಣಾಮ ಬೀರಿದೆ. ಗ್ಯಾರಂಟಿಗಳನ್ನು ಮುಂದುವರೆಯುವ ಅವಶ್ಯಕತೆ ಇದೆ ಎಂದರು.

ಪರಿಶ್ರಮ ಇದ್ದಾಗ ಮಾತ್ರ ಗೆಲುವು ಸಾಧ್ಯ ಅಭ್ಯರ್ಥಿ ಕ್ಷೇತ್ರದಲ್ಲಿ ಉತ್ತಮ ಕೆಲಸ ಮಾಡಿದ್ದಾಗ ಹಾಗೂ ಜನರ ಜೊತೆ ಉತ್ತಮ ಒಡನಾಟ ಹೊಂದಿದಾಗ ಮಾತ್ರ ಜನರ ಮನಸ್ಸಿನಲ್ಲಿ ಉಳಿಯಲು ಸಾಧ್ಯ ಅದನ್ನು ಬಿಟ್ಟು ಭವಿಷ್ಯ ಕೇಳಿ ನಾಮಪತ್ರ ಸಲ್ಲಿಸಿ ನಾವು ಗೆಲ್ಲುತ್ತೇವೆ ಎಂದು ಹಗಲು ಕನಸು ಕಂಡ ಅಭ್ಯರ್ಥಿಗಳಿಗೆ ಸೋಲಾಗಿದೆ. ಎಂದು ಹಾಸ್ಯ ಚಟಾಕಿ ಹಾರಿಸಿದರು.

ಮೂರು ಜಿಲ್ಲೆಗಳು ಆಗಬೇಕು: ಬೆಳಗಾವಿ ವಿಭಜಿಸಿ ಚಿಕ್ಕೋಡಿ, ಗೋಕಾಕ ಕೇಂದ್ರವಾಗಿ ಇನ್ನೆರಡು ಹೊಸ ಜಿಲ್ಲೆಗಳಾಗಬೇಕು. ಬೆಳಗಾವಿ ಜಿಲ್ಲೆ ಪ್ರಾದೇಶಿಕವಾಗಿ ಬಹಳ ದೊಡ್ಡದಿದೆ. ಆಡಳಿತದ ದೃಷ್ಟಿಯಿಂದ ಇದು ಸರಿಯಲ್ಲ. ಜಿಲ್ಲೆ ವಿಭಜನೆ ಆಗಬೇಕು ಎಂದು ನಾನು ಹಿಂದೆಯೂ ಹೇಳಿದ್ದೆ. ಈಗಲೂ ಅಷ್ಟೇ. ಆಡಳಿತ ಸುಗಮವಾಗಲು ಗೋಕಾಕ- ಚಿಕ್ಕೋಡಿಯನ್ನು ಜಿಲ್ಲೆಯನ್ನಾಗಿ ಮಾಡಬೇಕಿದೆ ಎಂದರು.

ಬೆಳಗಾವಿ ಜಿಲ್ಲೆಯನ್ನು ಗೋಕಾಕ್, ಚಿಕ್ಕೋಡಿ ಹಾಗೂ ಬೆಳಗಾವಿ ಎಂಬ ಮೂರು ಜಿಲ್ಲೆಗಳನ್ನಾಗಿ ಮಾಡಲು ಒತ್ತಡ ಮೊದಲಿನಿಂದಲೇ ಇದ್ದೇ ಇದೆ. ಬೆಳಗಾವಿಯು ರಾಜ್ಯದ ಅತೀ ದೊಡ್ಡ ಜಿಲ್ಲೆಯಾಗಿದೆ. ಉಡುಪಿಯಂತ ಜಿಲ್ಲೆಯಲ್ಲಿ 9 ಲಕ್ಷ ಜನ ಇದ್ದಾರೆ. ಆದರೆ ಬೆಳಗಾವಿ ತಾಲೂಕಿನಲ್ಲೇ 9 ಲಕ್ಷ ಜನ ಇದ್ದಾರೆ. ಆದ್ದರಿಂದ 18 ವಿಧಾನಸಭಾ ಕ್ಷೇತ್ರಗಳ ಭಾಗವನ್ನು ವ್ಯಾಪಿಸಿರುವ ಕರ್ನಾಟಕದ ಅತಿದೊಡ್ಡ ಜಿಲ್ಲೆಯಾದ ಬೆಳಗಾವಿಯನ್ನು ಮೂರು ಭಾಗಗಳಾಗಿ ವಿಭಜಿಸುವ ಬಗ್ಗೆ ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಬೆಳಗಾವಿಯ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಳ‌ರ್ ಅವರ ಸೋಲಿನ ಕುರಿತು ಮಾತನಾಡಿದ ಸಚಿವ ಸತೀಶ್‌ ಜಾರಕಿಹೊಳಿ, ವೈಯಕ್ತಿಕ ಜವಾಬ್ದಾರಿ ವಿಷಯವನ್ನೂ ಒತ್ತಿ ಹೇಳಿದರು. ಹೆಬ್ಬಾಳ್ಳರ್ ಅವರ ಸೋಲಿಗೆ ಯಾರೂ ಜವಾಬ್ದಾರರಲ್ಲ. ಅವರು ತಮ್ಮ ಜವಾಬ್ದಾರಿಯನ್ನು ತಾವೇ ಹೊರಬೇಕೆಂದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ