Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸಮಾಜಹಿತ ಸಾಧಿಸಲಾಗದ್ದು ಸಾಹಿತ್ಯವೇ ಅಲ್ಲ: ಡಾ. ಸಿ. ಸೋಮಶೇಖರ್ ಬೆಳಗಾವಿ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಕಾರ್ಯಕ್ರಮ

ಬೆಳಗಾವಿ :

ಸಮಾಜ ಹಿತವನ್ನು ಸಾಧಿಸಲಾಗದ್ದು ಸಾಹಿತ್ಯವೇ ಅಲ್ಲ. ಬರೆಯುವವರು ಸಮಾಜಹಿತವನ್ನು ಗಮನದಲ್ಲಿಟ್ಟುಕೊಂಡು ಬರೆಯಬೇಕು" ಎಂದು ಅ. ಭಾ‌ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಸಿ. ಸೋಮಶೇಖರ ಹೇಳಿದರು.
ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಬೆಳ್ಳಿಹಬ್ಬ ಮತ್ತು ನಾಲ್ಕನೇ ಜಿಲ್ಲಾ ಸಮ್ಮೇಳನದ ಸ್ಮರಣ ಸಂಚಿಕೆ ಚುಟುಕು ಸಂಭ್ರಮ ಹಾಗೂ ರಾಜ್ಯ ಪ್ರಾತಿನಿಧಿಕ ಸಂಕಲನ ಚುಟುಕು ಪಾರಿಜಾತಗಳನ್ನು ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಶನಿವಾರ ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಬಸವಾದಿ ಶಿವಶರಣರ ವಚನಗಳು ಮಾನವೀಯ ಮೌಲ್ಯಗಳಿಂದೊಡಗೂಡಿ ಸಾಮಾಜಿಕ ಪರಿವರ್ತನೆಯ ಕೆಲಸ ಮಾಡಿದ್ದನ್ನು ಇಂದು ನೆನಪಿಸಿಕೊಳ್ಳಬೇಕಾಗಿದೆ. ಹಾಗೆಯೇ ಚುಟುಕುಗಳು, ಹನಿಗವನಗಲು,ಮುಕ್ತಕಗಳು ತಮ್ಮ ಮಾರ್ಮಿಕ ಅರ್ಥಪೂರ್ಣ ರಚನೆಗಳಿಂದ ನಮ್ಮ ಗಮನ ಸೆಳೆಯುತ್ತವೆ. ಬೆಳಗಾವಿ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು 25 ವರ್ಷಗಳ ದೀರ್ಘಕಾಲದಿಂದ ಚುಟುಕು ಸಾಹಿತಿಗಳನ್ನು ಪ್ರೋತ್ಸಾಹಿಸುತ್ತ ಬಂದಿರುವುದು ಶ್ಲಾಘನೀಯವಾಗಿದೆ" ಎಂದು ಹೇಳಿದರು.

ಸುನಂದಾ ಮುಳೆ ಪ್ರಾರ್ಥಿಸಿದರು. ಡಾ. ಸಿ. ಕೆ. ಜೋರಾಪುರ ಸ್ವಾಗತಿಸಿದರು. ಬಸವರಾಜ ಗಾರ್ಗಿ ಪರಿಚಯಿಸಿದರು. ಆನಂದ ಪುರಾಣಿಕರಿಂದ ಗ್ರಂಥಗೌರವಗಳಾದವು. ಬೇಂದ್ರೆ ರಾಷ್ಟ್ರೀಯ ಟ್ರಸ್ಟ್ ಅಧ್ಯಕ್ಷ ಡಾ. ಸರಜೂ ಕಾಟಕರ ಮತ್ತು ಕಟ್ಟೀಮನಿ ಟ್ರಸ್ಟ್ ಅಧ್ಯಕ್ಷ ಡಾ. ವೈ. ಬಿ. ಹಿಮ್ಮಡಿ ಅವರನ್ನು ಸನ್ಮಾನಿಸಲಾಯಿತು. ಚುಟುಕು ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದ ಅಪ್ಪಾಸಾಹೇಬ ಅಲಿಬಾದಿ ಅವರ ಎರಡು ಚುಟುಕು ಕವನ ಸಂಕಲನಗಳನ್ನು ಬಿಡುಗಡೆ ಮಾಡಲಾಯಿತು. ಬೆಳ್ಳಿಹಬ್ಬದ ಯಶಸ್ಸಿಗಾಗಿ ಶ್ರಮಿಸಿದ ಪದಾಧಿಕಾರಿಗಳನ್ನು ಮತ್ತು ತಾಲೂಕು ಕಾರ್ಯದರ್ಶಿಗಳನ್ನು ಜಿಲ್ಲಾ ಚುಸಾಪ ವತಿಯಿಂದ ಸತ್ಕರಿಸಲಾಯಿತು. ಎಲ್. ಎಸ್. ಶಾಸ್ತ್ರಿ ಅಧ್ಯಕ್ಷತೆ ವಹಿಸಿದ್ದರು. ಚಂದ್ರಶೇಖರ ನವಲಗುಂದ ವಂದಿಸಿದರು. ಅಶೋಕ ಮಳಗಲಿ ನಿರೂಪಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಾಂಗ್ಲಾದೇಶದ ಹೆಸರಲ್ಲಿ ವಿದೇಶಿ ಅಡಕೆ ಅಕ್ರಮ ಆಮದು ಪತ್ತೆ ; ₹2500 ಕೋಟಿ ನಷ್ಟದ ಶಂಕೆ : ನಮ್ಮ ಬೆಳೆಗಾರರ ಮೇಲೆ ಪರಿಣಾಮ ಏನು..?ಅಮೆರಿಕ ಸೈನಿಕನನ್ನು ಕೊಂದ್ರೆ ಅಥವಾ ಸೆರೆ ಹಿಡಿದ್ರೆ 30 ಸಾವಿರ ಡಾಲರ್ ಬಹುಮಾನ : ಮಹಿಳೆಯರಿಗೆ ದುಪ್ಪಟ್ಟು ಹಣ; ಇರಾನ್‌ ಘೋಷಣೆನಾಲ್ಸಾರ್‌ ನಂತರ ಬೆಂಗಳೂರಿನ ಪ್ರತಿಷ್ಠಿತ ಕಾನೂನು ಕಾಲೇಜಿನಿಂದಲೂ ಘಟಿಕೋತ್ಸವಕ್ಕೆ ಸಿಜೆಐ ಆಹ್ವಾನಕ್ಕೆ ವಿರೋಧದೇವಸ್ಥಾನದಲ್ಲಿ ಕಾಲ್ತುಳಿತ : 7 ಮಂದಿ ಸಾವು, ಹಲವರಿಗೆ ಗಾಯವಂದೇ ಮಾತರಂಗೆ ಅಪಮಾನ ಆರೋಪ ; ಸೋನಿಯಾ ಗಾಂಧಿ ವಿರುದ್ಧ ದೂರುಒಳಚರಂಡಿ ಕಾಮಗಾರಿ ವೇಳೆ 18 ವರ್ಷದ ಕಾರ್ಮಿಕನಿಗೆ ಸಿಕ್ಕಿತು 98 ಕೋಟಿ ರೂ. ಮೌಲ್ಯದ ನಿಧಿ….!ಕರ್ನಾಟಕದ ವಾಹನಗಳ ಮಾಲಿನ್ಯ ಪರೀಕ್ಷಾ ಶುಲ್ಕ ಹೆಚ್ಚಳ46 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಬಂಧನಕನ್ನಡ ಸಾಹಿತ್ಯ ಕಣಜವನ್ನು ಶ್ರೀಮಂತಗೊಳಿಸಿದವರು ಡಾ. ಸರಜೂ ಕಾಟ್ಕರ್ : ಡಾ. ಬಸವರಾಜ ಜಗಜಂಪಿಮೇಕೆ ಬೇಟೆಗೆ ಮಾಂಸದ ಅಂಗಡಿಗೆ ನುಗ್ಗಿದ ಹೆಬ್ಬಾವು; ಕುತ್ತಿಗೆಗೆ ಸುತ್ತಿಕೊಂಡು ಆಟವಾಡಿದ ಕುಡುಕ!