ಬೆಳಗಾವಿ: ಘಟಪ್ರಭಾ ಮತ್ತು ಸುತ್ತಮುತ್ತಲಿನ ಭಾಗದ ರೈಲು ಪ್ರಯಾಣಿಕರ ಬಹುದಿನಗಳ ಬೇಡಿಕೆಗೆ ಕೊನೆಗೂ ಯಶಸ್ಸು ಸಿಕ್ಕಿದೆ. ನಮ್ಮ ಸತತ ಪ್ರಯತ್ನ ಹಾಗೂ ಮನವಿಗೆ ಸ್ಪಂದಿಸಿದ ರೈಲ್ವೆ ಇಲಾಖೆಯು, ಘಟಪ್ರಭಾ ನಿಲ್ದಾಣದಲ್ಲಿ ಪ್ರಮುಖ 4 ಜೋಡಿ ಎಕ್ಸ್‌ಪ್ರೆಸ್ ರೈಲುಗಳ ಪ್ರಾಯೋಗಿಕ ನಿಲುಗಡೆಗೆ ಅಧಿಕೃತ ಆದೇಶ ಹೊರಡಿಸಿದೆ ಎಂದು ಮಾಜಿ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.
ನಿಲುಗಡೆ ಆಗಲಿರುವ ರೈಲುಗಳು:
1. ಅಜ್ಮೀರ್ - ಮೈಸೂರು ಎಕ್ಸ್‌ಪ್ರೆಸ್ (16209/16210)
2. ಅಜ್ಮೀರ್ - ಕೆ.ಎಸ್.ಆರ್ ಬೆಂಗಳೂರು ಗರೀಬ್ ನವಾಜ್ ಎಕ್ಸ್‌ಪ್ರೆಸ್ (16531/16532)
3. ಗಾಂಧಿಧಾಮ್ - ಕೆ.ಎಸ್.ಆರ್ ಬೆಂಗಳೂರು ಎಕ್ಸ್‌ಪ್ರೆಸ್ (20685/20686)
4. ಜೋಧ್‌ಪುರ - ಕೆ.ಎಸ್.ಆರ್ ಬೆಂಗಳೂರು ಎಕ್ಸ್‌ಪ್ರೆಸ್ (16533/16534)
ನಮ್ಮ ಭಾಗದ ಪ್ರಯಾಣಿಕರ ಹಿತದೃಷ್ಟಿಯಿಂದ ನಿಲುಗಡೆ ವ್ಯವಸ್ಥೆ ಮಾಡಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷವ, ರಾಜ್ಯ ರೈಲ್ವೆ ಸಚಿವರಾದ ವಿ ಸೋಮಣ್ಣ ಹಾಗೂ ನೈರುತ್ಯ ರೈಲ್ವೆ ಇಲಾಖೆಯ ಅಧಿಕಾರಿಗಳಿಗೆ ಹೃತ್ಪೂರ್ವಕ ಧನ್ಯವಾದಗಳು. ಸಾರ್ವಜನಿಕರು ಹಾಗೂ ಪ್ರಯಾಣಿಕರು ಈ ರೈಲು ಸೇವೆಗಳ ಸದುಪಯೋಗ ಪಡಿಸಿಕೊಳ್ಳಬೇಕೆಂದು ಮಾಜಿ ಸಂಸದ ಈರಣ್ಣ ಕಡಾಡಿ ಕೋರಿರುತ್ತಾರೆ.