ಬೆಳಗಾವಿ: ಬೆಳಗಾವಿ ಉತ್ತರ ವಲಯ ನೂತನ ಪೊಲೀಸ್ ಮಹಾ ನಿರೀಕ್ಷಕರಾಗಿ ಐಪಿಎಸ್ ಅಧಿಕಾರಿ ಸಂದೀಪ ಪಾಟೀಲ ಅವರು ಗುರುವಾರ ಇಲ್ಲಿಯ ಕೇಂದ್ರ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡರು. ಇದುವರೆಗೆ ಉತ್ತರ ವಲಯ ಪೊಲೀಸ್ ಮಹಾ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಚೇತನ ಸಿಂಗ್ ರಾಠೋಡ್ ಅವರು ಅಧಿಕಾರ ಹಸ್ತಾಂತರಿಸಿದರು. ಸಂದೀಪ ಪಾಟೀಲ ಈ ಮೊದಲು ಬೆಳಗಾವಿ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸಿ ಜನಾನುರಾಗಿ ಅಧಿಕಾರಿಯಾಗಿ ಹೆಸರು ಮಾಡಿದ್ದರು.
