Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸಂತೋಷ ಪದ್ಮಣ್ಣವರ ಕೊಲೆ ಪ್ರಕರಣ : ಪತ್ನಿ ಸೇರಿದಂತೆ ಇನ್ನಿಬ್ಬರು ಜೈಲುಪಾಲು

ಬೆಳಗಾವಿ: ಬೆಳಗಾವಿಯ ಖ್ಯಾತ ಉದ್ಯಮಿ ಹಾಗೂ ಗುತ್ತಿಗೆದಾರ ಸಂತೋಷ ಪದ್ಮಣ್ಣವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪತ್ನಿ ಉಮಾ ಆಲಿಯಾಸ್ ಸರಿತಾ ಹಾಗೂ ಶೋಭಿತ್ ಗೌಡ ಮತ್ತು ಪವನ್ ಅವರನ್ನು ಬಂಧಿಸಿರುವ ಪೊಲೀಸರು ಜೈಲಿಗೆ ರವಾನೆ ಮಾಡಿದ್ದಾರೆ.

ಕೊನೆಗೂ ಸಂತೋಷ ಪದ್ಮಣ್ಣವರ ಸಾವು ಸಹಜ ಸಾವಲ್ಲ. ಇದೊಂದು ಕೊಲೆ ಎನ್ನುವುದು ಸಾಬೀತುಪಡಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಳ ಮಾರುತಿ ಪೊಲೀಸರು ಈ ಮೂವರನ್ನು ಗುರುವಾರ ನ್ಯಾಯಾಧೀಶರ ಎದುರು ಹಾಜರುಪಡಿಸಿ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಅಕ್ಟೋಬರ್ ಒಂಬತ್ತರಂದು ಸಂತೋಷ್ ಪದ್ಮಣ್ಣವರ ಅವರನ್ನು ಈ ಮೂವರು ಉಸಿರುಗಟ್ಟಿಸಿ ಕೊಲೆ ಮಾಡಿದ್ದರು. ಆದರೆ ಪತ್ನಿ ಉಮಾ ಅಲಿಯಾಸ್ ಸರಿತಾ, ಪತಿಯ ಸಾವಿಗೆ ಹೃದಯಘಾತ ಕಾರಣ ಎಂದು ಬಿಂಬಿಸಿದ್ದರು. ಆದರೆ, ಮಗಳಿಗೆ ಸಂದೇಹ ಬಂದು ಮಾಳಮಾರುತಿ ಪೊಲೀಸರಿಗೆ ದೂರು ನೀಡಿದ್ದರು. ಇದೀಗ ಪೊಲೀಸರು ಪ್ರಕರಣದ ಸತ್ಯಾ ಸತ್ಯತೆ ಬಯಲಿಗೆ ಎಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಕೊನೆಗೂ ಕೊಲೆಗಡುಕರು ಜೈಲು ಪಾಲು ಆಗಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಸಿಪಿ ಅವರು, ಸಂತೋಷ ಪದ್ಮಣ್ಣವರ ಸಾವಿನ ಸಮಗ್ರ ಮಾಹಿತಿ ಕಲೆ ಹಾಕಲಾಗುತ್ತಿದೆ. ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಲಾಗುತ್ತಿದೆ. ಎಲ್ಲಾ ವಿಧವಾಗಿ ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದು ಜನಜೀವಾಳಕ್ಕೆ ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ